Homeಮುಖಪುಟಡ್ರಗ್ಸ್ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡದಂತೆ ಸಚಿವ ನವಾಬ್ ಮಲಿಕ್ ವಿರುದ್ಧ ಪಿಐಎಲ್

ಡ್ರಗ್ಸ್ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡದಂತೆ ಸಚಿವ ನವಾಬ್ ಮಲಿಕ್ ವಿರುದ್ಧ ಪಿಐಎಲ್

- Advertisement -
- Advertisement -

ಮುಂಬೈನ ಕ್ರೂಸ್ ಶಿಪ್ ಡ್ರಗ್ಸ್‌ ಪ್ರಕರಣದಲ್ಲಿ ಸತತವಾಗಿ ಎನ್‌ಸಿಬಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಪ್ರಕರಣವೇ ನಕಲಿ ಎಂದು ಹೇಳಿರುವ ಸಚಿವ ನವಾಬ್ ಮಲಿಕ್ ವಿರುದ್ಧ ಮಂಗಳವಾರ ಬಾಂಬೆ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.

ಅಂಧೇರಿ ನಿವಾಸಿ ಮೂಲದ ಉದ್ಯಮಿ ಮತ್ತು ಮೌಲಾನಾ ಕೌಸರ್ ಅಲಿ ಸಯ್ಯದ್ , ಬಾಂಬೆ ಹೈಕೋರ್ಟ್‌ನಲ್ಲಿ ಎನ್‌ಸಿಪಿ ನಾಯಕ ಮತ್ತು ರಾಜ್ಯ ಕ್ಯಾಬಿನೆಟ್ ಸಚಿವ ನವಾಬ್ ಮಲಿಕ್ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದ್ದಾರೆ. ಕ್ರೂಸ್ ಶಿಪ್ ಡ್ರಗ್ಸ್‌ ಕೇಸ್‌ನಲ್ಲಿ ನಡೆಯುತ್ತಿರುವ ತನಿಖೆಯ ಬಗ್ಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿ ನೀಡದಂತೆ ತಡೆಯಬೇಕೆಂದು ಒತ್ತಾಯಿಸಿದ್ದಾರೆ.

ಕೌಸರ್ ಅಲಿ ಸಯ್ಯದ್ ತಮ್ಮ ವಕೀಲ ಅಶೋಕ್ ಸರೋಗಿ ಅವರ ಮೂಲಕ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಲಯದ ನಿರ್ದೇಶಕ ಸಮೀರ್ ವಾಂಖೆಡೆ ಅವರು ಭ್ರಷ್ಟ ಅಧಿಕಾರಿಯಲ್ಲ. ಮುಂಬೈನಲ್ಲಿ ಮಾದಕ ದ್ರವ್ಯ ಹಾವಳಿಯನ್ನು ನಿಭಾಯಿಸುವಲ್ಲಿ ಅತ್ಯಂತ ಪರಿಣಾಮಕಾರಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

ಸಚಿಬ ನವಾಬ್ ಮಲಿಕ್ ಅವರ ಟ್ವೀಟ್‌ಗಳು ಮತ್ತು ಹೇಳಿಕೆಗಳು, ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮತ್ತು ಅವರ ತಂಡದ ನೈತಿಕತೆಯನ್ನು ಕುಗ್ಗಿಸುತ್ತಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

“ಸಮೀರ್‌ ವಾಂಖೆಡೆ ವಿರುದ್ಧ ಯಾವುದೇ ಆಧಾರ ಇದ್ದರೆ, ವಾಂಖೆಡೆ ಏನಾದರೂ ತಪ್ಪು ಮಾಡಿದ್ದರೆ, ಸಚಿವರಾಗಿರುವ ಮಲಿಕ್ ಅವರು ಕಾನೂನು ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದೆ” ಎಂದು ಪಿಐಎಲ್ ಹೇಳಿದೆ.

ಎನ್‌ಸಿಬಿ ಏಜೆನ್ಸಿಯ ನೈತಿಕತೆಯನ್ನು ಕುಗ್ಗಿಸುವ ಉದ್ದೇಶದಿಂದ ಅಥವಾ ಇತರ ಯಾವುದೇ ತನಿಖಾ ಸಂಸ್ಥೆಯ ಅಧಿಕಾರಿಗಳ ಮೇಲೆ ಹೇಳಿಕೆಗಳು ನೀಡದಂತೆ ಮಲಿಕ್‌ಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ. ಪಿಐಎಲ್‌ನ ವಿಚಾರಣೆಗೆ ಇನ್ನು ದಿನಾಂಕ ನಿಗದಿಯಾಗಿಲ್ಲ.

ಮಂಗಳವಾರ (ಅ.26) ಸಮೀರ್‌ ವಾಂಖೆಡೆ ವಿರುದ್ಧ ಮತ್ತೊಂದು ಆರೋಪ ಮಾಡಿದ್ದ ನವಾಬ್ ಮಲಿಕ್, ವಾಂಖೆಡೆ 26 ಪ್ರಕರಣಗಳಲ್ಲಿ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿಲ್ಲ ಎಂದು ಏಜೆನ್ಸಿ ಉದ್ಯೋಗಿಯ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

“ಹೆಸರು ಹೇಳಲಿಚ್ಛಿಸದ NCB ಅಧಿಕಾರಿಯಿಂದ ನನಗೆ ಬಂದ ಪತ್ರದ ವಿಷಯಗಳು ಇಲ್ಲಿವೆ.
ಜವಾಬ್ದಾರಿಯುತ ನಾಗರಿಕನಾಗಿ ನಾನು ಈ ಪತ್ರವನ್ನು ಡಿಜಿ ನಾರ್ಕೋಟಿಕ್ಸ್ ಅವರಿಗೆ ರವಾನಿಸುತ್ತೇನೆ, ಈ ಪತ್ರವನ್ನು ಸಮೀರ್ ವಾಂಖೆಡೆ ವಿರುದ್ಧ ನಡೆಸುತ್ತಿರುವ ಆಂತರಿಕೆ ತನಿಖೆಯಲ್ಲಿ ಸೇರಿಸಲು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಸಚಿವ ಮಲಿಕ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ಎನ್‌ಸಿಬಿ ಉಪ ಮಹಾನಿರ್ದೇಶಕ ಮುತಾ ಅಶೋಕ್ ಜೈನ್, ಪತ್ರದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...