Homeಮುಖಪುಟಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

- Advertisement -
- Advertisement -

ಮುಂಬೈನ ಕಡಲತೀರದಲ್ಲಿ ಐಷಾರಾಮಿ ಕ್ರೂಸ್ ಹಡಗಿನ ಡ್ರಗ್ಸ್ ಪಾರ್ಟಿ ಪ್ರಕರಣದ ಆರೋಪದಲ್ಲಿ ಜೈಲಿನಲ್ಲಿರುವ ಆರ್ಯನ್‌ ಖಾನ್‌ರನ್ನು ನೋಡಲು ಅವರ ತಂದೆ ಬಾಲಿವುಡ್ ನಟ ಶಾರುಖ್‌ ಖಾನ್‌ ಗುರುವಾರ ಮುಂಬೈನ ಆರ್ಥರ್ ರೋಡ್ ಜೈಲಿಗೆ ಭೇಟಿ ನೀಡಿದ್ದರು.

ಕಳೆದ ಅಕ್ಟೋಬರ್ 8 ರಿಂದ ಜೈಲಿನಲ್ಲಿರುವ ಮಗನನ್ನು ಶಾರುಖ್‌ ಖಾನ್‌ ಇಂದು ಜೈಲಿಗೆ ಭೇಟಿ ನೀಡಿ ಮಾತನಾಡಿಸಿದ್ದಾರೆ. ಬೆಳಗ್ಗೆ 9 ಗಂಟೆಗೆ ಜೈಲಿಗೆ ತಲುಪಿದ್ದ ಶಾರುಖ್ ಖಾನ್ 9.35 ಕ್ಕೆ ವಾಪಸ್ ಹೊರಟರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲಗಳ ಪ್ರಕಾರ ಶಾರುಖ್‌ ಖಾನ್‌, ಆರ್ಯನ್‌ರನ್ನು ಸುಮಾರು 20 ನಿಮಿಷಗಳ ಕಾಲ ಮಾತನಾಡಿಸಿದ್ದಾರೆ. ನಟನ ಭೇಟಿ ಹಿನ್ನೆಲೆ, ಹೆಚ್ಚಿನ ಸಂಖ್ಯೆಯಲ್ಲಿ ಮಾಧ್ಯಮದವರು ಮತ್ತು ಸ್ಥಳೀಯ ನಿವಾಸಿಗಳು ಜೈಲಿನ ಹೊರಗೆ ಜಮಾಯಿಸಿದ್ದರು. ಜೈಲಿನ ಆವರಣದ ಹೊರಗೆ ಭಾರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. 

ಇದನ್ನೂ ಓದಿ: ಆರ್ಯನ್ ಖಾನ್‌ರ ಮೂಲಭೂತ ಹಕ್ಕುಗಳನ್ನು ಉಳಿಸಿ: ಸುಪ್ರೀಂಗೆ ಶಿವಸೇನಾ ಸಚಿವನ ಅರ್ಜಿ

ಇಷ್ಟು ದಿನ ಕೊರೊನಾ ಕಾರಣದಿಂದ ಜೈಲಿಗೆ ಕೈದಿಗಳ ಕುಟುಂಬ ಸದಸ್ಯರಿಗೆ ಅವಕಾಶವಿರಲಿಲ್ಲ. ಗುರುವಾರ (ಅ.21)ದಿಂದ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ಅವಕಾಶ ನೀಡಿರುವ ಹಿನ್ನೆಲೆ ಶಾರುಖ್‌ ಖಾನ್‌ ಮಗನ ಭೇಟಿಗೆ ಧಾವಿಸಿದ್ದರು.

ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದ ನಂತರ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗಿದ್ದರು. ಆರ್ಯನ್‌ ಖಾನ್ ಬಂಧನದ ಬಳಿಕ ಇದು ತಂದೆ-ಮಗನ ಮೊದಲ ಭೇಟಿಯಾಗಿದೆ.

ಇದನ್ನೂ ಓದಿ: ಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಆರ್ಯನ್ ಖಾನ್ ಮತ್ತು ಇನ್ನಿಬ್ಬರಿಗೆ ಡ್ರಗ್ ಪ್ರಕರಣದಲ್ಲಿ ಜಾಮೀನು ನೀಡಲು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಜಾಮೀನು ನಿರಾಕರಿಸಿರುವುದರ ವಿರುದ್ಧ ಆರ್ಯನ್ ಖಾನ್‌ ಬಾ೦ಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಆರ್ಯನ್ ಖಾನ್ ಮತ್ತು ಅರ್ಬಾಜ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದು, ಮುನ್ಮುನ್ ಅವರನ್ನು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಲ್ಲಿ ಇರಿಸಲಾಗಿದೆ. ಈ ಪ್ರಕರಣದ ಆರೋಪಿ ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35 ರ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.

“ಆರ್ಯನ್ ಖಾನ್ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಜೊತೆಗೆ ಅವರು ಮಾದಕದ್ರವ್ಯ ನಿಯಂತ್ರಣ ಬ್ಯೂರೋದ (NCB) ಅಧಿಕಾರಿಯ ಹಗೆತನಕ್ಕೆ ಬಲಿಯಾಗಿದ್ದಾರೆ” ಎಂದು ಶಿವಸೇನಾ ನಾಯಕ, ರಾಜ್ಯ ಸಚಿವ ಕಿಶೋರ್ ತಿವಾರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್‌ಗೆ ಜಾಮೀನು ನಿರಾಕರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...