ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದಿನೇ ದಿನೇ ತಿರುವು ಪಡೆಯುತ್ತಿದ್ದು, ಸ್ಯಾಂಡಲ್‌ವುಡ್ ನಟ-ನಟಿಯರನ್ನು ಒಳಗೊಂಡು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಪರಸ್ಪರ ಯುದ್ಧಕ್ಕೆ ನಿಂತುಬಿಟ್ಟಿವೆ.
ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟಿ ರಾಗಿಣಿ ಜೊತೆಗಿನ ಚುನಾವಣ ಪ್ರಚಾರದಲ್ಲಿ ತೆಗೆಸಿಕೊಂಡ ಬಿಜೆಪಿ ನಾಯಕರ, ಕಾರ್ಯಕರ್ತರ ಫೋಟೋಗಳು ವೈರಲ್ ಆಗಿದ್ದವು. ಇದು ರಾಗಿಣಿ ಬಿಜೆಪಿ ಜೊತೆಗೆ ನಂಟಿದೆ ಎಂದು ಬಿಂಬಿಸಲಾಗಿತ್ತು. ಇದಕ್ಕೆ ಬಿಜೆಪಿ ಆಕೆ ನಮ್ಮ ಪಕ್ಷದವರಲ್ಲ ಎಂಬ ಸ್ಪಷ್ಟನೆ ನೀಡಿ ಕೈತೊಳೆದುಕೊಂಡಿದೆ.
ಈಗ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಟಿ ರಾಗಿಣಿ ಇರುವ ಚಿತ್ರಗಳನ್ನು ಬಿಜೆಪಿ ಬಿಡುಗಡೆ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಎದುರೆದುರೇ ಪೈಪೋಟಿಗೆ ನಿಂತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾಂಗ್ರೆಸ್ ಮತ್ತು ಅವರ ಶಾಸಕರು ಡ್ರಗ್ಸ್ ಪರ ಇದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ
ಡ್ರಗ್ಸ್ ವಿರುದ್ಧ ಧ್ವನಿ ಎತ್ತಿದ ಪ್ರಶಾಂತ್ ಸಂಬರಗಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಕೇಸ್ ಹಾಕುತ್ತಾರೆ ಎಂದರೆ ಈ ಕಾಂಗ್ರೆಸ್ ಪಕ್ಷ ಹಾಗೂ ಅದರ ಶಾಸಕರು ಯಾವರೀತಿ ಡ್ರಗ್ಸ್ ಮಾಫಿಯಾದ ಪರವಾಗಿದ್ದಾರೆ ಎಂಬುದನ್ನು ಅರಿಯಬಹುದು. ಡ್ರಗ್ಸ್ ಮಾತ್ರವಲ್ಲ, ಕಾಂಗ್ರೆಸ್ ಪಕ್ಷವೂ ನಿರ್ಮೂಲನೆ ಆಗಬೇಕು.#congresssupportsdrugmafia
— Nalinkumar Kateel (@nalinkateel) September 10, 2020
ಇದಕ್ಕೆ ಪ್ರತ್ಯುತ್ತರ ನೀಡಿರುವ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದು ಹೇಳಿದ್ದಾರೆ.
.@CMofKarnataka ಅವರೇ,
ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ.ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ.
ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ.
5/6— Siddaramaiah (@siddaramaiah) September 11, 2020
ವಿರೋಧ ಪಕ್ಷದವರ ಮೇಲೆ ಮಾಡುತ್ತಿರುವ ಆರೋಪಗಳನ್ನು ಖಂಡಿಸುವುದಾಗಿ ತಿಳಿಸಿರುವ ಅವರು, ಮಾದಕ ವಸ್ತುಗಳ ಹಾವಳಿ ನಿಮೂಲನೆಯ ಉದ್ದೇಶವಿದ್ದರೇ ಸುಳ್ಳು ಆರೋಪ ಮಾಡುತ್ತಿರುವವರ ಬಾಯಿ ಮುಚ್ಚಿಸಿ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿದ್ದಾರೆ.
ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು @BJP4Karnataka ಮಾಡುತ್ತಿದೆ.
ಇದನ್ನು @INCKarnataka ತೀವ್ರವಾಗಿ ಖಂಡಿಸುತ್ತದೆ.
2/6#DrugsMukthaKaranataka— Siddaramaiah (@siddaramaiah) September 11, 2020
ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ @CMofKarnataka ಅವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು.
3/6— Siddaramaiah (@siddaramaiah) September 11, 2020
ಆರೋಪಿ ಜೊತೆಗಿನ ಫೋಟೋಗಳ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ ಎಂದಿದ್ದಾರೆ.
ಡ್ರಗ್ಸ್ ಹಗರಣದ ತನಿಖೆ ಹಾದಿ ತಪ್ಪುತ್ತಿದೆ ಎಂದಿರುವ ವಿ-ಪಕ್ಷ ನಾಯಕ, ಡಿಜೆ ಹಳ್ಳಿ ಗಲಭೆಯ ತನಿಖೆಯನ್ನು ಉದಾಹರಣೆ ನೀಡಿದ್ದಾರೆ.
ಇದನ್ನೂ ಓದಿ: ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?
ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ @BJP4Karnataka ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ.
1/6#DrugsMuktaKarnataka— Siddaramaiah (@siddaramaiah) September 11, 2020
ಇಷ್ಟು ದಿನ ಪೊಲೀಸ್, ಸ್ಯಾಂಡಲ್‌ವುಡ್ ಎನ್ನುತ್ತಿದ್ದವರಿಗೆ ಎರಡು ಪಕ್ಷಗಳ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ಮನರಂಜನೆ ನೀಡುತ್ತಿವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಆರೋಪಗಳನ್ನು ಗಂಬೀರವಾಗಿ ಪರಿಗಣಿಸಿರುವುದು ಅವರ ಟ್ವೀಟ್‌ಗಳಿಂದ ಕಂಡುಬರುತ್ತಿದೆ.
ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್ಗೆ ಸಂಬಂರಧಿಸಿದಂತೆ ಸಿಸಿಬಿ ಪೊಲೀಸರಿಂದ ಅರೆಸ್ಟ್ ಆಗಿರುವ ರಾಗಿಣಿ, ಸಂಜನಾ ಗಲ್ರಾನಿ,ರವಿಶಂಕರ್, ಪ್ರಶಾಂತ್ ರಾಂಕ, ಲೂಮ್ ಪೆಪ್ಪರ್, ರಾಹುಲ್ ಅವರನ್ನು ಮತ್ತೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.


