Homeಮುಖಪುಟಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಪಿತೂರಿಯ ಭಾಗವಾಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಐಟಿ ಅಧಿಕಾರಿಗಳು

- Advertisement -
- Advertisement -

ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾರಿ ಡ್ರಗ್ಸ್ ಪಿತೂರಿ ಅಥವಾ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಸಿಂಡಿಕೇಟ್‌ನ ಭಾಗವಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಮತ್ತು ಅವರನ್ನು ಬಂಧಿಸಿದ ಕಾರ್ಡೆಲಿಯಾ ವಿಹಾರ ನೌಕೆಯ ಮೇಲಿನ ದಾಳಿಯಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ವಿಶೇಷ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ದ ತನಿಖಾ ತಂಡವು (SIT) ಪತ್ತೆಹಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

NCB ಯ ಮುಂಬೈ ಘಟಕದ ಆರೋಪಗಳಿಗೆ ವಿರುದ್ಧವಾಗಿ, SIT ಯ ಕೆಲವು ಪ್ರಮುಖ ಸಂಶೋಧನೆಗಳನ್ನು ಅಧಿಕಾರಿಗಳು ಹಿಂದೂಸ್ಥಾನ್‌ ಟೈಮ್ಸ್‌‌‌ನೊಂದಿಗೆ ಹಂಚಿಕೊಂಡಿದ್ದಾರೆ. ಅವರು ಹೇಳುವಂತೆ, “ಆರ್ಯನ್ ಖಾನ್ ಅವರಲ್ಲಿ ಡ್ರಗ್ಸ್‌ ಇರಲಿಲ್ಲ, ಆದ್ದರಿಂದ ಅವರ ಫೋನ್ ತೆಗೆದುಕೊಂಡು ಅವರ ಚಾಟ್‌ಗಳನ್ನು ಪರಿಶೀಲಿಸುವ ಅಗತ್ಯವಿಲ್ಲ. ಚಾಟ್‌ಗಳು ಆರ್ಯನ್‌ ಅವರು ಯಾವುದೇ ಅಂತರಾಷ್ಟ್ರೀಯ ಸಿಂಡಿಕೇಟ್‌ನ ಭಾಗವಾಗಿದ್ದರು ಎಂದು ಸೂಚಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

“ಎನ್‌ಸಿಬಿ ನಿಯಮದಂತೆ ದಾಳಿಯ ಸಮಯದಲ್ಲಿ ಮಾಡಬೇಕಿದ್ದ ಕಡ್ಡಾಯ ವೀಡಿಯೊ ರೆಕಾರ್ಡ್ ಅನ್ನು ಮಾಡಲಾಗಿಲ್ಲ. ಪ್ರಕರಣದಲ್ಲಿ ಬಂಧಿತರಾದ ಹಲವು ಆರೋಪಿಗಳಿಂದ ಡ್ರಗ್ಸ್‌ ಒಂದನ್ನೆ ವಶಪಡಿಸಿಕೊಂಡಿದೆ ಎಂದು ತೋರಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಖಚಿತವಾಗಿ ಹೇಳುವುದಾದರೆ, ಎಸ್‌ಐಟಿ ತನಿಖೆ ಪೂರ್ಣಗೊಂಡಿಲ್ಲ. ಅದು ತನ್ನ ಅಂತಿಮ ವರದಿಯನ್ನು ಎನ್‌ಸಿಬಿ ಡೈರೆಕ್ಟರ್ ಜನರಲ್ ಎಸ್‌ಎನ್ ಪ್ರಧಾನ್ ಅವರಿಗೆ ಸಲ್ಲಿಸಲು ಒಂದೆರಡು ತಿಂಗಳಾಗಬಹುದು. ನಿರ್ದಿಷ್ಟವಾಗಿ ಆರ್ಯನ್‌ ಖಾನ್ ಅವರು ಯಾವುದೇ ಮಾದಕವಸ್ತುಗಳನ್ನು ಹೊಂದಿರದಿದ್ದರೂ, ಸೇವನೆ ಮಾಡಿದ್ದಕ್ಕೆ ದೋಷಾರೋಪಣೆ ಮಾಡಬಹುದೆ ಎಂದು ಅಂತಿಮ ನಿರ್ಧಾರದ ಮೊದಲು ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುವುದು” ಎಂಬ ಅಂಶದ ಬಗ್ಗೆ, ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಸ್‌ಐಟಿ ತನಿಖೆಯು ದಾಳಿಯ ಬಗ್ಗೆ ಮತ್ತು ಎನ್‌ಸಿಬಿಯ ಮಾಜಿ ಮುಂಬೈ ವಲಯ ಘಟಕದ ನಿರ್ದೇಶಕ ಸಮೀರ್ ವಾಂಖೆಡೆ ಅವರ ನಡವಳಿಕೆಯ ಮೇಲೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವಂತಿದೆ ಎಂದು ಹಿಂದೂಸ್ಥಾನ್ ವರದಿ ಹೇಳಿದೆ.

ಮುಂಬೈನ ಗ್ರೀನ್ ಗೇಟ್‌ನಲ್ಲಿರುವ ಅಂತರಾಷ್ಟ್ರೀಯ ಕ್ರೂಸ್ ಟರ್ಮಿನಲ್‌ನಲ್ಲಿ, ಕಾರ್ಡೆಲಿಯಾ ಕ್ರೂಸ್‌‌ ಹಡಗಿನ ಮೇಲೆ ಕಳೆದ ವರ್ಷ ಅಕ್ಟೋಬರ್ 2 ರ ರಾತ್ರಿ ವಾಂಖೆಡೆ ಮತ್ತು ಅಧಿಕಾರಿಗಳು ದಾಳಿ ಮಾಡಿದ್ದರು. ಕ್ರೂಸ್ ಹಡಗಿನಿಂದ 13 ಗ್ರಾಂ ಕೊಕೇನ್, ಐದು ಗ್ರಾಂ ಮೆಫೆಡ್ರೋನ್, 21 ಗ್ರಾಂ ಗಾಂಜಾ, 22 ಎಂಡಿಎಂಎ (ಎಕ್ಸ್ಟಸಿ) ಮಾತ್ರೆಗಳು ಮತ್ತು ₹ 1.33 ಲಕ್ಷ ನಗದನ್ನು ಈ ವೇಳೆ ಎನ್‌ಸಿಬಿ ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...