Homeಕರ್ನಾಟಕಡ್ರಗ್ಸ್‌ ಪ್ರಕರಣ: ರಾಗಿಣಿ ದ್ವಿವೇದಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಡ್ರಗ್ಸ್‌ ಪ್ರಕರಣ: ರಾಗಿಣಿ ದ್ವಿವೇದಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

- Advertisement -

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧನವಾಗಿದ್ದ ಚಲನಚಿತ್ರ ನಟಿ ರಾಗಿಣಿ ದ್ವಿವೇದಿ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಜನವರಿ 21) ಜಾಮೀನು ನೀಡಿದೆ. ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಿಸಿಬಿ ಪೊಲೀಸರು 2020 ಸೆಪ್ಟಂಬರ್ 4 ರಂದು ರಾಗಿಣಿಯವರನ್ನು ಬಂಧಿಸಿದ್ದರು.

ನಟಿ ರಾಗಿಣಿ ವಿರುದ್ಧ ಕಾಟನ್‌ಪೇಟೆ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಅದರ ಮೂಲಕವೇ ನ್ಯಾಯಾಲಯದಿಂದ ವಾರೆಂಟ್ ಪಡೆದು ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ದಾಳಿ ನಂತರ ವಶಕ್ಕೆ ಪಡೆದಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು.

ಇದನ್ನೂ ಓದಿ: ’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

ರಾಗಿಣಿ ಮನೆಯಲ್ಲಿ ಮಹತ್ವದ ವಸ್ತುಗಳನ್ನು ಜಪ್ತಿ ಮಾಡಿದ್ದು, ಅವುಗಳ ಮಾಹಿತಿ ಗೌಪ್ಯವಾಗಿರಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದರು.

ಡ್ರಗ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಆದಿತ್ಯ ಆಳ್ವ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ. ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರನಾಗಿರುವ ಆದಿತ್ಯ ಆಳ್ವ, ಡ್ರಗ್ಸ್ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಲೇ ತಲೆಮರೆಸಿಕೊಂಡಿದ್ದ. ಇತ್ತೀಚೆಗೆ ಆದಿತ್ಯನನ್ನು ಚೆನ್ನೈನಲ್ಲಿ ಬಂಧಿಸಲಾಗಿತ್ತು.


ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಆರೋಪಿಗಳಿಗೆ ಸಹಕರಿಸಿದ ಬೆಂಗಳೂರಿನ ಕಾನ್‌ಸ್ಟೇಬಲ್ ಬಂಧನ!

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ | Naanu Gauri

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ...

0
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು...
Wordpress Social Share Plugin powered by Ultimatelysocial