Homeಕರ್ನಾಟಕಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆ ಬಹಿರಂಗ ಪಡಿಸಿದೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ನಿರಂತರವಾಗಿ ಡ್ರಗ್ಸ್‌ ದಂದೆ ನಡೆಯುತ್ತಿದೆ ಎನ್ನಲಾಗಿದ್ದು, ನಟರಿಗಿಂತ ನಟಿಯರಿಂದಲೇ ಇದಕ್ಕೆ ಬೇಡಿಕೆ ಹೆಚ್ಚಾಗಿದ್ದು, ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆಯಿಂದ ತಿಳಿದು ಬಂದಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ’ರಾಯಲ್ಸ್‌ ಸೂಟ್ಸ್‌ ಹೋಟೆಲ್’ ಅಪಾರ್ಟ್‌ಮೆಂಟ್ ಸಮುಚ್ಚಯದ ಪ್ಲಾಟ್‌ ಮೇಲೆ ದಾಳಿ ಮಾಡಿ ಡ್ರಗ್ಸ್ ದಂಧೆ ಒಬ್ಬ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನೂ ಬಂಧಿಸಿದ್ದರು. ಬಂಧಿತರನ್ನು ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿದ್ದು ನಿಜವೆ?

ತನಿಖೆಯ ವೇಳೆ ಹೆಸರಾಂತ ನಟ-ನಟಿಯರು, ಹಾಗೂ ಸಂಗೀತ ನಿರ್ದೇಶಕರ ಹೆಸರನ್ನು ಬಂಧಿತರು ಬಾಯಿಬಿಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ನಟಿಯರು ಡ್ರಗ್ಸ್‌ನಿಂದ ಸೌಂದರ್ಯ ಹೆಚ್ಚಾಗುತ್ತದೆ ಎಂಬ ಮನೋಭಾವನೆಯಲ್ಲಿ ಇದನ್ನು ಬಳಸುತ್ತಿದ್ದರು ಎನ್ನಲಾಗಿದೆ. ಕಲಾವಿದರು ಮಾಡುತ್ತಿದ್ದ ಪಾರ್ಟಿಗಳೆ ಈ ಡ್ರಗ್ಸ್‌ ವ್ಯಾಪಾರದ ಕೇಂದ್ರವಾಗಿದ್ದು ಅಲ್ಲಿಂದಲೇ ಆರೋಪಿಗಳು ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.

PC: The New Indian Express

ಈ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್,‌ ‘ಇಂದಿನ ಜನರೇಷನ್‌ನಲ್ಲಿ ಮಾದಕ ವ್ಯಸನದ ಆತಂಕ ಇದ್ದೇ ಇದೆ. ಆದರೆ, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬುದು ನನ್ನ ಗಮನಕ್ಕೆ ಎಲ್ಲಿಯೂ ಬಂದಿಲ್ಲ. ಅದು ನಮ್ಮ ಚಿತ್ರರಂಗಕ್ಕೆ ಬರಬಾರದು ಎಂದು ನಾನು ಆಶಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ’ಜಾಫರ್ ಪನಾಹಿ’ ಸಿನಿಮಾ ಜಗತ್ತಿನ ಬಂಡುಕೋರ: ಕೀಲಾರ ಟೆಂಟ್ ಹೌಸ್-5

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ‘ನನಗೆ ತಿಳಿದಿರುವ ಮಟ್ಟಿಗೆ ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಯಾರು ಕೂಡ ಡ್ರಗ್ಸ್ ತೆಗೆದುಕೊಳ್ಳಲ್ಲ. ಬಾಡಿ ಬಿಲ್ಡ್ ಮಾಡಲು ವೈದ್ಯರ ಸಲಹೆ ಪಡೆದು, ಪ್ರೋಟಿನ್ ಮತ್ತಿತ್ತರದ್ದನ್ನು ತೆಗೆದುಕೊಳ್ಳುತ್ತಾರೆ. ಬೆಳಗ್ಗೆ ಎದ್ದಕೂಡಲೇ ಡ್ರಗ್ಸ್ ಬೇಕೇಬೇಕು ಎನ್ನುವಂತಹ ಕಲಾವಿದರು ನಮ್ಮ ಇಂಡಸ್ಟ್ರೀಯಲ್ಲಿ ಯಾರೂ ಇಲ್ಲ’ ಎಂದು ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌, ನಟ ನಟಿಯರು ಡ್ರಗ್ಸ್‌‌ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ ಹೊರಹಾಕಿದೆ. ಹಿಂದಿನ ಆಡಳಿತದಲ್ಲಿದ್ದವರು ಡ್ರಗ್ಸ್ ಮಾಫಿಯಾದ ಪರವಾಗಿದ್ದರು, ಮುಖ್ಯಮಂತ್ರಿ ಯಡಿಯೂರಪ್ಪ ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕುವಲ್ಲಿ ಮುಂದಾಗುತ್ತಿದ್ದಾರೆ ಎಂದು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...