ಮುಂಬೈನ ಕಡಲ ತೀರದಲ್ಲಿ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಶನಿವಾರ (ಅ.2) ರಾತ್ರಿ ದಾಳಿ ಮಾಡಿದ ಅಧಿಕಾರಿಗಳು ಸುಮಾರು 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅದರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಕೂಡ ಸೇರಿದ್ದಾರೆ. ಆರ್ಯನ್ ಖಾನ್ ಅವರನ್ನು ಪ್ರಸ್ತುತ ಏಜೆನ್ಸಿಯ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ.
ಇಬ್ಬರು ಯುವತಿಯರು ಸೇರಿದಂತೆ ಆರ್ಯನ್ ಖಾನ್, ಮುನ್ಮುನ್ ಧಮೇಚಾ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೊಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
“ಆರ್ಯನ್ ಖಾನ್ ಸೇರಿದಂತೆ ಎಲ್ಲ ಎಂಟು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಹೇಳಿಕೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಿಳಿಸಿದೆ.
ಇದನ್ನೂ ಓದಿ: ಕನ್ಯಾದಾನ್ ಅಲ್ಲ, ಕನ್ಯಾಮಾನ್ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ
NCB ತಂಡವು ಪ್ರಯಾಣಿಕರ ವೇಷದಲ್ಲಿ ಹಡಗನ್ನು ಹತ್ತಿತ್ತು ಎಂದು ಮೂಲಗಳು ತಿಳಿಸಿವೆ. Ecstasy, Cocaine (ಕೊಕೇನ್), ಎಂಡಿ (ಮೆಫೆಡ್ರೋನ್) ಮತ್ತು ಚರಸ್‌ನಂತಹ ಡ್ರಗ್ಸ್‌ಗಳನ್ನು ಹಡಗಿನಿಂದ ವಶಪಡಿಸಿಕೊಳ್ಳಲಾಗಿದೆ. ಹಡಗು ಮುಂಬೈಯಿಂದ ಹೊರಟ ನಂತರ ಸಮುದ್ರದ ಮಧ್ಯದಲ್ಲಿ ಪಾರ್ಟಿ ಆರಂಭವಾಯಿತು ಎಂದು NCB ಅಧಿಕಾರಿಗಳು ಹೇಳಿದ್ದಾರೆ.
“ವಶಕ್ಕೆ ಪಡೆದವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ವಾಸ್ತವಾಂಶಗಳ ಆಧಾರದ ಮೇಲೆ ಬಂಧಿಸಲಾಗುತ್ತದೆ. ಬಳಿಕ ಆರೋಪಿಗಳನ್ನು NDPS ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದಿದ್ದಾರೆ ಎಂದು ಹಿರಿಯ NCB ಅಧಿಕಾರಿಯೊಬ್ಬರನ್ನು NDTV ಉಲ್ಲೇಖಿಸಿ ವರದಿ ಮಾಡಿದೆ.
“ನಾವು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದೇವೆ. ಈ ಪ್ರಕ್ರಿಯೆಯಲ್ಲಿ, ಬಾಲಿವುಡ್ ಅಥವಾ ಶ್ರೀಮಂತರೊಂದಿಗೆ ಕೆಲವು ಲಿಂಕ್‌ಗಳು ಸಿಕ್ಕರೆ, ಕಾನೂನಿನ ವ್ಯಾಪ್ತಿಯಲ್ಲಿ ನಾವು ಕಾರ್ಯನಿರ್ವಹಿಸಬೇಕು” ಎಂದು ಎನ್‌ಸಿಬಿ ಮುಖ್ಯಸ್ಥ ಎಸ್‌ಎನ್ ಪ್ರಧಾನ್ ಹೇಳಿದ್ದಾರೆ.
We have to keep on working in Mumbai. If you look at the data, there must have been more than 300 raids in the last one year. This will continue whether foreign nationals are involved, film industry or rich people are involved: NCB chief SN Pradhan to ANI pic.twitter.com/DXVAGRqGo1
— ANI (@ANI) October 3, 2021
ಕಳೆದ ವರ್ಷದ ಜೂನ್‌ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವಿನ ನಂತರ ಬಾಲಿವುಡ್‌ನಲ್ಲಿ ಮಾದಕದ್ರವ್ಯ ಸೇವನೆ ಆರೋಪದ ಮೇಲೆ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಅಂದಿನಿಂದ ಡ್ರಗ್ಸ್ ವಿರೋಧಿ ಪ್ರಕರಣಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.
ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ


