Homeಕರ್ನಾಟಕನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿಎಸ್‌‌ ನಾಗಭೂಷಣ (70) ನಿಧನ

ನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿಎಸ್‌‌ ನಾಗಭೂಷಣ (70) ನಿಧನ

- Advertisement -
- Advertisement -

ಕನ್ನಡದ ಹಿರಿಯ ಲೇಖಕ, ಸಮಾಜವಾದಿ ಚಿಂತಕ ಹಾಗೂ ಸಾಹಿತ್ಯ ವಿಮರ್ಶಕ ಡಿ.ಎಸ್. ನಾಗಭೂಷಣ್ ಗುರುವಾರ ಮುಂಜಾನೆ ಶಿವಮೊಗ್ಗದ ಕಲ್ಲಹಳ್ಳಿಯ ಸ್ವಗೃಹದಲ್ಲಿ ನಿಧನರಾದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಮಹಾತ್ಮ ಗಾಂಧಿಯವರ ಜೀವನ ಚರಿತ್ರೆಯಾದ, ‘ಗಾಂಧಿ ಕಥನ’ ಕೃತಿಗಾಗಿ ಅವರಿಗೆ 2021 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಯಿತು. ‘ಇಂದಿಗೆ ಬೇಕಾದ ಗಾಂಧಿ’, ‘ಕುವೆಂಪು ಪುನರನ್ವೇಷಣೆ’ ಮತ್ತು ‘ಲೋಹಿಯಾ ಜೊತೆಯಲ್ಲಿ’ ಅವರ ಗಮನಾರ್ಹ ಕೃತಿಗಳಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ನಿಧನಕ್ಕೆ ಲೇಖಕರು ಮತ್ತು ಶಿಕ್ಷಣ ತಜ್ಞರು ಸಂತಾಪ ಸೂಚಿಸಿದ್ದಾರೆ. ಗುರುವಾರ ಸಂಜೆ ನಗರದ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಗೋಕಾಕ್ ವರದಿ ಹೋರಾಟ: ಕನ್ನಡದ ರಕ್ಷಣೆಗೆ ಈಗಲೂ ಮಾದರಿ

ಡಿಎಸ್‌ ನಾಗಭೂಷಣ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಇಂಗ್ಲಿಷ್‌ ಉಪನ್ಯಾಸಕ ವಿ.ಎಲ್. ನರಸಿಂಹಮೂರ್ತಿ, “ಕನ್ನಡ ಸಾಹಿತ್ಯದ ಕುರಿತು, ಕರ್ನಾಟಕದ ಸಾಂಸ್ಕೃತಿಕ ರಾಜಕಾರಣದ ಕುರಿತು ಅತ್ಯಂತ ಸೂಕ್ಷ್ಮ ಗ್ರಹಿಕೆಯಿದ್ದ ಡಿಎಸ್ಎನ್ ತಮ್ಮ ನೇರವಾದ, ನಿಷ್ಠುರವಾದ ಬರಹಳಗಿಂದ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರ ಮೈಚಳಿ ಬಿಡಿಸುತ್ತಿದ್ದರು. ಲೋಹಿಯಾ ಮತ್ತು ಗಾಂಧಿ ವಿಚಾರಗಳಲ್ಲಿ ಅದೆಷ್ಟು ಪಾಂಡಿತ್ಯ ಹೊಂದಿದ್ದರು ಎಂದರೆ ಇಂಗ್ಲಿಷ್‌ನಲ್ಲಿ ಬರೆಯುವ ರಾಮಚಂದ್ರ ಗುಹಾ, ಅಕಿಲ್ ಬಿಲ್‌ಗ್ರಾಮಿ, ಬೀಖು ಪರೇಖ್ ಅಂತವರ ತಿಳುವಳಿಕೆ ಮಿತಿಗಳನ್ನು ಕನ್ನಡದಲ್ಲಿ ಎತ್ತಿ ತೋರಿಸುತ್ತಿದ್ದರು. ಕುವೆಂಪು, ಲಂಕೇಶ್, ತೇಜಸ್ವಿ, ಜಿಎಸ್ಎಸ್, ಸೇರಿದಂತೆ ಕನ್ನಡ ಸಾಹಿತ್ಯದ ಬಗ್ಗೆ ಅಪೂರ್ವ ಒಳನೋಟಗಳುಳ್ಳ ಬರಹಗಳನ್ನು ಡಿಎಸ್ಎನ್ ಬಿಟ್ಟುಹೋಗಿದ್ದಾರೆ. ಕನ್ನಡ ವಿಮರ್ಶೆಗೆ ಡಿಎಸ್ಎನ್ ಕೊಡುಗೆ ಅಪಾರವಾದುದು ಇನ್ನು ಮೇಲೆಯಾದರು ಕನ್ನಡದ ಲೇಖಕರು, ವಿಮರ್ಶಕರು ಡಿಎಸ್‌ಎನ್ ಬರಹಗಳಿಗೆ ನ್ಯಾಯ ಸಲ್ಲಸಲಿ” ಎಂದು ಹೇಳಿದ್ದಾರೆ.

ಶಿಕ್ಷಣ ತಜ್ಞ ಶ್ರೀಪಾದ ಭಟ್‌ ಅವರು, “ಡಿ.ಎಸ್.ಎನ್ ಜೊತೆಗೆ ಚರ್ಚೆ, ಸಂವಾದ ಜಗಳ ಸಾಮಾನ್ಯ ಸಂಗತಿಯಾಗಿತ್ತು. ಅವರು ಸಿಕ್ಕಾಗಲೆಲ್ಲ ಸಣ್ಣ ಮಟ್ಟದ ವಾದ ಮಾಡದೇ ಹೋದರೆ ನನಗೆ ಭಣ ಭಣ ಎನಿಸುತ್ತಿತ್ತು. ಆದರೆ ಅವರನ್ನು ಭೇಟಿಯಾಗಿ ಅನೇಕ ವರ್ಷಗಳಾಗಿದ್ದವು. ಎಪ್ಪತ್ತರ ದಶಕದ ನಮ್ಮ ಬಾಲ್ಯದ ದಿನಗಳಲ್ಲಿ ಆಕಾಶವಾಣಿಯಲ್ಲಿದ್ದ ಡಿ.ಎಸ್.ಎನ್‌ ಓದುತ್ತಿದ್ದ ಪ್ರದೇಶ ಸಮಾಚಾರ ಜನಪ್ರಿಯವಾಗಿತ್ತು. ಹಾಗೆಯೇ ಲೋಹಿಯಾ, ಕುವೆಂಪು, ಜಿಎಸ್‌ಎಸ್, ಗಾಂಧಿ ಕುರಿತ ಅವರ ಆಳವಾದ ಓದು, ಗ್ರಹಿಕೆ ಮತ್ತು ವಿಚಾರ ಮಂಡನೆ ಬೆರಗುಗೊಳಿಸುತ್ತಿತ್ತು. ಪ್ರತಿಭಾವಂತ ಲೇಖಕ. ವಸ್ತುನಿಷ್ಠವಾಗಿ ಬರೆಯುವುದು ಹೇಗೆ ಎಂಬುದಕ್ಕೆ ಉತ್ತಮ ಉದಾಹರಣೆ ಡಿ.ಎಸ್.ಎನ್. He is one of the best reader” ಎಂದು ಹೇಳಿದ್ದಾರೆ.

“1990ರಲ್ಲಿ ದೇವನೂರ ಮಹಾದೇವ ಅವರ ‘ಕುಸುಮ ಬಾಲೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದ ನೆಪದಲ್ಲಿ ಲೇಖಕರಿಗೆ ತುಮಕೂರಿನಲ್ಲಿ ಒಂದು ಅಭಿನಂದನೆ, ಚರ್ಚೆ ಗೋಷ್ಠಿಯಿತ್ತು. ನಾನು ಮೊದಲ ಬಾರಿಗೆ ಡಿ.ಎಸ್.ಎನ್ ರನ್ನು ಮಾತನಾಡಿಸಿದ್ದು ಅಲ್ಲಿ. ಆ ಸಮಾರಂಭಕ್ಕೆ ಬರಲು ಒಪ್ಪಿಕೊಂಡು ನಂತರ ಕೈ ಕೊಟ್ಟ ಲಂಕೇಶ್‌ರನ್ನು ಶರ್ಟಿನ ತೋಳು ಮೇಲೇರಿಸಿಕೊಳ್ಳುತ್ತಾ ಟೀಕಿಸುತ್ತಿದ್ದ ಆ ದೃಶ್ಯ ನಿನ್ನೆ, ಮೊನ್ನೆ ನಡೆದಂತಿದೆ.
ಆದರೆ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಸಂದರ್ಭದಲ್ಲಿ ಚಂಡಿ ಹಿಡಿದು ಹಠದಿಂದ ವರ್ತಿಸುವ ಅವರ ಇನ್ನೊಂದು ಮುಖ ಅನೇಕ ಸಂದರ್ಭಗಳಲ್ಲಿ ಎದುರುಗಿರುವವರನ್ನು ಪರಚುತ್ತಿತ್ತು, ಗಾಯಗೊಳಿಸುತ್ತಿತ್ತು.
ತನ್ನದೇ ಸತ್ಯ ಎಂಬ ಧೋರಣೆ ಜಗಳಗಳಿಗೆ ಕಾರಣವಾಗಿದ್ದು ಲೆಕ್ಕವೇ ಇಲ್ಲ. ನಾವು ಸ್ನೇಹಿತರು ‘ಇದೊಂದು ವಿಷಯದಲ್ಲಿ ಡಿ.ಎಸ್.ಎನ್ ಪ್ರಬುದ್ದರಾಗಿದ್ದರೆ ಎಷ್ಟು ಚಂದ’ ಎಂದು ಬೇಸರಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಬದುಕು ಹಾಗೆಲ್ಲಾ ಚೆಂದವಾಗಿ ಇರಲು ಬಿಡುವುದಿಲ್ಲ. ಡಿ.ಎಸ್.ಎನ್‌ರವರಿಗೆ ಈ ಫೋಟೋ ತೋರಿಸಿ ಹೀಗೆ ಇರಬೇಕಿತ್ತು ಸರ್ ನೀವು ಎಂದು ಎಷ್ಟೋ ಬಾರಿ ಹೇಳಬೇಕೆಂದುಕೊಂಡಿದ್ದೆ, ಹೇಳಲಿಲ್ಲ. ತಮ್ಮ ಬದುಕಿನ ಪಯಣ ಮುಗಿಸಿ ಎದ್ದು ನಡೆದ ಡಿ.ಎಸ್.ಎನ್.ಗೆ ನಮನಗಳು” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್ 

ಉಪನ್ಯಾಸಕರು, ಸಿನಿಮಾ ಸಾಹಿತ್ಯಾಸಕ್ತ ರೋಹಿತ್ ಅಗಸರಹಳ್ಳಿ ಅವರು, “ಈಗ್ಗೆ ಹದಿನೈದಿಪ್ಪತ್ತು ದಿನಗಳ ಹಿಂದೆ ಶಿವಮೊಗ್ಗೆಗೆ ಹೋದಾಗ ಮೊದಲೇ ಫೋನು ಕೂಡ ಮಾಡದೆ ಡಿಎಸ್ಎನ್ ಭೇಟಿ ಮಾಡಲು ಹೋದೆವು. ಮನೆ ಕೂಡಲೆ ಸಿಕ್ಕದಿದ್ದಾಗ ಸವಿತ ಮೇಡಂ ಅವರಿಗೆ ಫೋನು ಮಾಡಬೇಕಾಯ್ತು. ಡಿಎಸ್ಎನ್ ಅವರಿಗೆ ಹುಷಾರಿಲ್ಲ, ಲಂಗ್ಸ್ ಇನ್ಫೆಕ್ಷನ್ ಆಗಿದೆ; ಹೀಗಾಗಿ ಒಂದೈದೇ ನಿಮಿಷ ಮಾತಾಡಿಸಿ ಅಂದ್ರು. ಅಲ್ಲಿವರೆಗೆ ಶಿವಮೊಗ್ಗೆಗೆ ಹೋದಾಗೆಲ್ಲ ಗೂಳಿಗಳಂತೆ ಹೇಳದೆ ಕೇಳದೆ ನುಗ್ಗಿಬಿಡುತ್ತಿದ್ದ ನಾವು ಇನ್ನು ಮೇಲೆ ಫೋನ್ ಮಾಡಿಕೊಂಡು ಹೋಗೋಣ ಅಂತ ಮಾತಾಡಿಕೊಂಡೆವು.(ನಾನು ಮತ್ತು ಸುಜಾತ) ಈಗಾಗಲೇ ಹೊಸಮನುಷ್ಯ ಪತ್ರಿಕೆ ನಿಲ್ಲಿಸಿದ್ದರಿಂದ ಅದಕ್ಕೆ ಕಾರಣ ಸರ್ ಅವರ ಅನಾರೋಗ್ಯವೇ ಅನ್ನೋದು ಕೂಡ ಗೊತ್ತಿತ್ತು.

ಭೌತಿಕವಾಗಿ ಕುಗ್ಗಿದ್ದರೂ ಲವಲವಿಕೆಯಿಂದಲೇ ತಾಸು ಹೊತ್ತು ಮಾತನಾಡಿದರು. ನಾವೇ ಮತ್ತೆ ಮತ್ತೆ ಸಾರ್ ನೀವು ಹೆಚ್ಚು ಮಾತಾಡಿ ಆಯಾಸ ಮಾಡಿಕೊಳ್ಳಬೇಡಿ ಅಂತ ಹೇಳಿ ಬಂದೆವು. ಯಾಕ್ರೀ ನನ್ನಿಂದ ತಪ್ಪಿಸ್ಕೊಂಡ್ ಹೋಗೋಕೆ ಹೀಗಂತಿದೀರ ಅಂದ್ರು. ಈ ನಡುವೆ ನನ್ನ ಮಗಳು ಅಲ್ಲಿದ್ದ ಬೆಕ್ಕಿನ ಮರಿಗಳ ಜತೆ ದೋಸ್ತಿ ಸಾಧಿಸಿದ್ದರಿಂದ ಎರಡು ಮರಿಗಳೂ ನಮ್ಮೊಂದಿಗೆ ಹಾಸನಕ್ಕೆ ಬಂದವು. ಸರ್ ಅವರು ಕೌಲಗಿ ಅವರ ಮಗನ ಬಳಿ ಹೋಮಿಯೋಪತಿ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಿರುವುದಾಗಿಯೂ, ಇತ್ತೀಚೆಗೆ ಪರವಾಗಿಲ್ಲ ಎಂಬುದಾಗಿಯೂ ಹೇಳಿದರು. ಅದೆಲ್ಲ ಕೇಳಿ ಕೆಲವೇ ದಿನಗಳಲ್ಲಿ ಗೆಲುವಾಗಿ ಮತ್ತೆ ಎಲ್ಲರೊಂದಿಗೆಂತೋ ಅಂತೇ ನನ್ನೊಂದಿಗೂ ಜಗಳಕ್ಕೆ ನಿಲ್ಲುತ್ತಾರೆ ಎಂದೇ ಆಶಿಸಿದ್ದೆ. ಆದರದು ಹುಸಿಹೋಯ್ತು. ಅವರ ಜಗಳಗಂಟ ಗುಣವೇ ಅವರನ್ನು ಸ್ವಚ್ಛವ್ಯಕ್ತಿತ್ವವಾಗಿ‌ ಉಳಿಸಿದ್ದು ಎಂದು ನನಗೆ ಯಾವಾಗಲೂ ಅನ್ನಿಸೋದು. ಹೋಗಿಬನ್ನಿ ಸಾರ್…ನಿಮ್ಮ ಬರೆಹಗಳು ಅದರಲ್ಲೂ ಗಾಂಧಿಕಥನ ನಿಮ್ಮನ್ನು ಕನ್ನಡಿಗರ ನಡುವೆ ಶಾಶ್ವತವಾಗಿಸಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...