Homeಮುಖಪುಟಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ತಾಳಮುತ್ತು ನಗರ ಪೊಲೀಸ್ ಠಾಣೆಯಲ್ಲಿ 1999ರಲ್ಲಿ ಸಂಭವಿಸಿದ ಕಸ್ಟಡಿ ಸಾವು ಪ್ರಕರಣದಲ್ಲಿ ಡಿಎಸ್‌ಪಿ ಸೇರಿ 9 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಾಸಿಕ್ಯೂಷನ್ ಪ್ರಕಾರ, ತೂತುಕುಡಿ ಜಿಲ್ಲೆಯ ಮೇಳ ಅಲಂಗರತಟ್ಟು ನಿವಾಸಿ, ಉಪ್ಪು ತಯಾರಿಕೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಿ. ವಿನ್ಸೆಂಟ್ ಅವರನ್ನು ಸೆಪ್ಟೆಂಬರ್ 17, 1999ರಂದು ವಿಚಾರಣೆಗಾಗಿ ತಾಳಮುತ್ತು ನಗರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಆಗಿನ ಸಬ್-ಇನ್ಸ್‌ಪೆಕ್ಟರ್ ಆಗಿದ್ದ ರಾಮಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಅವರನ್ನು ಲಾಕಪ್‌ನಲ್ಲಿ ಬಂಧಿಸಿಟ್ಟಿತ್ತು. ಮರುದಿನ ವಿನ್ಸೆಂಟ್ ಅನುಮಾನಾಸ್ಪದ ರೀತಿಯಲ್ಲಿ ಲಾಕಪ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು.

ವಿನ್ಸೆಂಟ್ ಸಾವಿನ ಸಂಬಂಧ ಅವರ ಪತ್ನಿ ಕೃಷ್ಣಮ್ಮಾಳ್ ಅದೇ ಪೊಲೀಸ್ ಠಾಣೆಯಲ್ಲಿ ತನ್ನ ಪತಿಯನ್ನು ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಸಂಬಂಧ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್, ಪೊಲೀಸ್‌ ಸಿಬ್ಬಂದಿ ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಶಿವಸುಬ್ರಮಣಿಯನ್, ಸುಬ್ಬಯ್ಯ, ರತಿನಸಾಮಿ ಮತ್ತು ಬಾಲಸುಬ್ರಮಣಿಯನ್ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಯನ್ನು ತೂತುಕುಡಿಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ನ್ಯಾಯಮೂರ್ತಿ ಎಂ. ತಾಂಡವನ್ ಅವರು ಪ್ರಕರಣದ ಅಪರಾಧಿಗಳಾದ ರಾಮಕೃಷ್ಣನ್, ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಸುಬ್ಬಯ್ಯ ಮತ್ತು ಬಾಲಸುಬ್ರಮಣಿಯನ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10,000 ರೂಪಾಯಿ ದಂಡ ವಿಧಿಸಿದ್ದಾರೆ.

ಆರೋಪಿಗಳಾದ ರತಿನಸಾಮಿ ಮತ್ತು ಶಿವಸುಬ್ರಮಣಿಯನ್ ಇಬ್ಬರೂ ಈಗ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ. ಸರ್ಕಾರಿ ವಕೀಲ ಎಸ್.ಪಿ ಆನಂದ್ ಗೇಬ್ರಿಯಲ್ ರಾಜ್ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದಾರೆ.

ಶಿಕ್ಷೆಗೊಳಗಾದವರಲ್ಲಿ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್ ಈಗ ಶ್ರೀವೈಕುಂಠಂ ಡಿಎಸ್‌ಪಿ ಆಗಿದ್ದಾರೆ. ಸೋಮಸುಂದರಂ ಪ್ರಸ್ತುತ ಇನ್ಸ್‌ಪೆಕ್ಟರ್ ಆಗಿ ಮತ್ತು ಪಿಚಯ್ಯ ಭೂಕಬಳಿಕೆ ತಡೆ ವಿಭಾಗದಲ್ಲಿ ವಿಶೇಷ ಸಬ್-ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಇತರರು ಸೇವೆಯಿಂದ ನಿವೃತ್ತರಾಗಿದ್ದಾರೆ.

ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ವಿನ್ಸೆಂಟ್ ಸಾವು 1999, ಸೆ.18ರಂದು ಮಧ್ಯಾಹ್ನ 1:30ರಿಂದ ಸಂಜೆ 7:30ರ ನಡುವೆ ಸಂಭವಿಸಿತ್ತು. ವಿನ್ಸೆಂಟ್ ಮುನ್ನಾದಿನ ತೀವ್ರವಾಗಿ ಗಾಯಗೊಂಡಿದ್ದರು ಎಂದು ವೈದ್ಯಕೀಯ ಸಾಕ್ಷ್ಯವು ದೃಢಪಡಿಸಿದೆ. ಹೀಗಾಗಿ, ಇದು ಕಸ್ಟಡಿ ಸಾವು ಅಲ್ಲದೆ ಬೇರೇನೂ ಅಲ್ಲ ಎಂದು ಶನಿವಾರ ವಿಚಾರಣೆ ಸಂದರ್ಭದಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ತಾಂಡವನ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತಾಗುವವರೆಗೂ ಪೋಲಿಸರ ಮೇಲೆಯೇ ಶಂಕೆಯಿರುತ್ತದೆ. ಇಲ್ಲಿ ಆರೋಪಿ ಪೋಲಿಸರು ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತುಗೊಳಿಸಿಲ್ಲ. ಹೀಗಾಗಿ, ಇದು ಕಸ್ಟಡಿ ಸಾವು ಎಂದು ಭಾವಿಸಲೇಬೇಕು ಎಂದಿದ್ದಾರೆ.

ಪೋಲಿಸರು ಲಾಠಿಗಳಿಂದ ವಿನ್ಸೆಂಟ್‌ರನ್ನು ಥಳಿಸಿದ್ದರು ಎನ್ನುವುದನ್ನು ಸಾಕ್ಷ್ಯಾಧಾರಗಳು ಸ್ಪಷ್ಟಪಡಿಸಿವೆ. ತಮ್ಮ ಹಲ್ಲೆಯಿಂದ ಆತ ಸಾಯಬಹುದು ಎನ್ನುವುದು ಗೊತ್ತಿದ್ದರೂ ಪೋಲಿಸರು ಅವರ ಮೇಲೆ ದಾಳಿ ನಡೆಸಿದ್ದರು ಎಂದೂ ನ್ಯಾ.ತಾಂಡವನ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...