Homeಚಳವಳಿಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

ಒಳಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು: DSS ಸಮಾವೇಶದ ನಿರ್ಣಯಗಳು

‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು, ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

- Advertisement -
- Advertisement -

ಡಿಸೆಂಬರ್ 6, 2022 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ‘ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ’ ದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ದಲ್ಲಿ ಮಂಡಿಸಲಾದ ನಿರ್ಣಯಗಳು

1. ಭಾರತದ ವೈವಿದ್ಯಮಯ ಸೌಹಾರ್ಧಯುತ ಸಾಮರಸ್ಯ ಮತ್ತು ಬಹುತ್ವದ ಸಂಸೃತಿಯ ಮೇಲೆ ಮೇಲು -ಕೀಳು, ಸ್ಪೃಶ್ಯ- ಅಸ್ಪೃಶ್ಯ, ಶ್ರೇಷ್ಠತೆ – ಕನಿಷ್ಟತೆಯ ತಾರತಮ್ಯದ ವೈದಿಕಶಾಹಿಯ ಏಕ ಸಂಸೃತಿಯನ್ನು ಹೇರುವಂತಹ ದಬ್ಬಾಳಿಕೆಯ ನೀತಿಯನ್ನು ಈ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ತೀವ್ರವಾಗಿ ಖಂಡಿಸುತ್ತದೆ. ಮತ್ತು ಇಂತಹ ವೈವಿಧ್ಯಮಯ, ಸೌಹಾರ್ದಯುತ, ಸಾಮರಸ್ಯದ ಬಹುತ್ವದ ಸಾಂಸ್ಕೃತಿಕ ಅಸ್ಮಿತೆಯ ಬದುಕನ್ನು ಉಳಿಸಿಕೊಳ್ಳಲು ಈ ಪ್ರತಿರೋಧ ಸಮಾವೇಶವು ಸಂಕಲ್ಪ ಮಾಡುತ್ತದೆ.

2. ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಯ ಸಾಧನದಂತೆ ವರ್ತಿಸುತ್ತಿರುವ ಸರ್ಕಾರದ ನಡೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ. ಇಂತಹ ಚಾತುರ್ವರ್ಣ ಮತ್ತು ಜಾತೀಯತೆ ತಾರತಮ್ಯಗಳನ್ನು ಎತ್ತಿ ಹಿಡಿಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುತ್ತೇವೆ. ಭಾರತದ ಸಂವಿಧಾನ ಎತ್ತಿಹಿಡಿದಿರುವ ಮೂಲಭೂತ ಹಕ್ಕುಗಳನ್ನು ಸಮಸ್ತ ಭಾರತೀಯರೂ ಅನುಭವಿಸುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಖಾತ್ರಿಗೊಳಿಸಬೇಕಿದೆ.

3. ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು.

4. ಪರಿಶಿಷ್ಟ ಜಾತಿ/ವರ್ಗಗಳಿಗೆ SCSP/TSP ಕಾಯ್ದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ಯಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ ಯಲ್ಲಿ ಅನುಷ್ಟಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ ಅನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯ್ದೆಯನ್ನು ರೂಪಿಸಬೇಕು.

5. ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಯವರನ್ನು ಹೊರತುಪಡಿಸಿ ವಾರ್ಷಿಕ 8 ಲಕ್ಷ ವರಮಾನವಿರುವ ಮೇಲ್ಜಾತಿಯವರಿಗೆ ನೀಡಿರುವ EWS ಮೀಸಲಾತಿಯನ್ನು ಈ ವೇದಿಕೆ ಖಡಾಖಂಡಿತವಾಗಿ ವಿರೋಧಿಸುತ್ತದೆ. ಈ ಅಸಂವಿಧಾನಿಕ ತಿದ್ದುಪಡಿಯನ್ನು ರದ್ದುಗೊಳಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು.

6. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಹುಕಾಲದಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್ಸಿ/ಎಸ್ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ತುಂಬಬೇಕು.

7. ‘ಪಿಟಿಸಿಎಲ್ ಕಾಯ್ದೆ’ ಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾದ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಟಾನಕ್ಕೆ ತರಬೇಕು.

8. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯ್ದೆ’ ಮತ್ತು ‘ಮತಾಂತರ ನಿಷೇಧ ಕಾಯ್ದೆ’ ಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

9. ಎಸ್ಸಿ/ಎಸ್ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೂ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈ ಟ್ರೆಬ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು.

10. ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎ.ಪಿ.ಎಮ್.ಸಿ.ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು.

11. ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತಂದಿರುವ, ಅಸಮಾನತೆಯನ್ನು ಹಾಗೂ ಚಾತುರ್ವರ್ಣ ಪದ್ಧತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಅನ್ನು ಈ ಕೂಡಲೇ ರದ್ದುಗೊಳಿಸಬೇಕು.

12. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಗೆ ಸ್ಕಾಲರ್‌ಶಿಪ್ ನಿಲ್ಲಿಸುವ ಯೋಚನೆಯನ್ನು ಕೂಡಲೇ ಕೈ ಬಿಡಬೇಕು. ಎಸ್ಸಿ/ಎಸ್ಟಿ ಮೀಸಲಾತಿಗೆ ನಿಗದಿಪಡಿಸುರುವ ವಾರ್ಷಿಕ ಆದಾಯ ಮಿತಿಯನ್ನು 10 ಲಕ್ಷಕ್ಕೆ ಏರಿಸಬೇಕೆಂದು ಒತ್ತಾಯಿಸುತ್ತೇವೆ.

13. ಹತ್ತು ನಿಮಿಷಕ್ಕೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನ್ಯಾಯಾಲಯಗಳಲ್ಲಿ ಶೇ.96 ರಷ್ಟು ಅಟ್ರಾಸಿಟಿ ಕಾಯ್ದೆಯಡಿಯ ಪ್ರಕರಣಗಳು ಬಾಕಿ ಉಳಿದಿವೆ. ಈ ಕಾಯ್ದೆಯಡಿ ಶಿಕ್ಷೆ ನೀಡುವ ಪ್ರಮಾಣ ತೀರ ಕಡಿಮೆ ಇದೆ. ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಈ ಉದ್ದೇಶಪೂರ್ವಕ ನಿರ್ಲಕ್ಯವನ್ನು ಖಂಡಿಸುತ್ತೇವೆ. ಈ ಕೂಡಲೇ ದಲಿತರಿಗೆ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಆಗ್ರಹಿಸುತ್ತೇವೆ.

14. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಸಹ ನೂರಾರು ಸಾವುಗಳು ಇದರಿಂದ ಸಂಭವಿಸಿದೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಲು ಆಗ್ರಹಿಸುತ್ತೇವೆ.

15. ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದಿರುವ ಕೋಮುವಾದಿ ದೌರ್ಜನ್ಯಗಳನ್ನು ಖಂಡಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕನ್ನಡ ನಾಡಿನ ಬಹುತ್ವವನ್ನು ಹಾಳುಗೆಡುವುತ್ತಿರುವ ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...