Homeಕರ್ನಾಟಕಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಂ ವ್ಯಾಪಾರಿಗಳು ಬಾರದ ಕಾರಣ ಸಂಸದ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಡಿಎಸ್‌ಎಸ್‌ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬಾರದು ಎಂದು ದ್ವೇಷ ಹಬ್ಬಿಸುತ್ತಿರುವವರ ವಿರುದ್ಧ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರು, ಮುಸಲ್ಮಾನರ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದನ್ನು ವಿರೋಧಿಸಿದ ದಸಂಸ ಕಾರ್ಯಕರ್ತರು, ಸಂಸದ ಪ್ರತಾಪ್ ಸಿಂಹ ಗುಜರಿ ವಸ್ತುಗಳನ್ನು ಖರೀದಿಸಬೇಕು ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಮ್ಮ ಹಳ್ಳಿಗಳಿಗೆ ಮುಸ್ಲಿಂ ಬಾಂಧವರು ವ್ಯಾಪಾರಕ್ಕೆ ಬರುತ್ತಿಲ್ಲ. ಹೀಗಾಗಿ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಸಂಸದರ ಮನೆಯ ಮುಂದೆ ಸಾಮಾನು ಸರಂಜಾಮಗಳೊಂದಿಗೆ ತೆರಳಿದ ದಸಂಸ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮುಂದಾಳತ್ವ ವಹಿಸಿದ್ದರು. ಹಲವಾರು ಕಾರ್ಯಕರ್ತರು, ಮಹಿಳೆಯರು ಚೀಲದಲ್ಲಿ ಹಳೆ ಸಾಮಾನು, ಖಾಲಿ ಬಾಟಲ್, ಹುಣಸೇ ಪಿಚ್ಚಿ, ಟಯರ್ ಟ್ಯೂಬ್, ಹಳೆ ಕಬ್ಬಿಣಗಳನ್ನು ಆಟೋದಲ್ಲಿ ತೆಗೆದುಕೊಂಡು ಬಂದಿದ್ದರು. ನಗರದ ವಿಜಯ ನಗರದ ನಾಲ್ಕನೆ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹರ ಮನೆಗೆ ಆಗಮಿಸಿ ಅವರಿಗೆ ಮಾರಾಟ ಮಾಡಲು ಯತ್ನಿಸಿದರು.

ಸಂಸದ ಪ್ರತಾಪ್ ಸಿಂಹ ಅವರ ಮನೆಯ ಮುಂಭಾಗಕ್ಕೆ ತೆರಳದಂತೆ ರಿಂಗ್ ರಸ್ತೆಯ ಕನ್ನಡ ವೃತ್ತದಲ್ಲೇ ಕಾರ್ಯಕರ್ತರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿರಿ: ರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ ಬಗ್ಗೆ ಒಮರ್‌‌ ಅಬ್ದುಲ್ಲಾ ಪ್ರತಿಕ್ರಿಯೆ

ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಆಕ್ರೋಶ ವ್ಯಕ್ತಪಡಿಸಿ, “ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಮತ್ತು ಬಿಜೆಪಿ ನಾಯಕರುಗಳು ಮುಸ್ಲಿಮ್‍ ವರ್ತಕರುಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ನಮ್ಮ ಹಳ್ಳಿಗಳು ಬಡಾವಣೆಗಳಿಗೆ ವ್ಯಾಪಾರಕ್ಕಾಗಿ ಬರುತ್ತಿದ್ದ ಮುಸ್ಲಿಮ್ ಬಂಧುಗಳ ಭಯದಿಂದ ಬರುತ್ತಿಲ್ಲ. ಇದರಿಂದ ನಮ್ಮ ಬಳಿ ಹಳೆ ಬಾಟಲ್, ಕಾಲಿ ಸೀಸ, ಹುಣಸೆ ಪಿಚ್ಚಿ, ಹಳೆ ಟಯರ್ ಟ್ಯೂಬ್ ಗಳು ಸಾಕಷ್ಟು ಉಳಿದುಕೊಂಡಿವೆ. ಅವುಗಳನ್ನು ಸಂಸದ ಪ್ರತಾಪ್ ಸಿಂಹ ಕೊಂಡುಕೊಂಡು ನಮಗೆ ಹಣ ನೀಡಬೇಕು. ನಾವು ಅವರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಲು ಬಂದಿಲ್ಲ. ನಮ್ಮ ವಸ್ತುಗಳನ್ನು ಸಂಸದರು ಖರೀದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಮಾಧ್ಯಮದವರೊಂದಿಗೆ ಚೋರನಹಳ್ಳಿ ಶಿವಣ್ಣ ಮಾತನಾಡಿ, “ಸರ್ವಜನಾಂಗದ ಶಾಂತಿ ತೋಟದಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಮುಸ್ಲಿಮರನ್ನು ಟಾರ್ಗೆಟ್ ಮಾಡಿಕೊಂಡು ತೊಂದರೆ ಕೊಡಲಾಗುತ್ತಿದೆ. ಹಿಜಾಬ್, ಹಲಾಲ್ ಮಾಂಸ, ಮುಸ್ಲಿಮರ ವ್ಯಾಪಾರ ಹೆಸರಿನಲ್ಲಿ ಅಡಚಣೆ ಉಂಟು ಮಾಡಲಾಗುತ್ತಿದೆ. ಇದರಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಸ್ಥಳದಲ್ಲಿದ್ದ ಇನ್ ಸ್ಪೆಕ್ಟರ್ ವೆಂಕಟೇಶ್, ಜಯಕುಮಾರ್ ಸೇರಿದಂತೆ ಹಲವರು ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮಾತಿನ ಚಕಮಕಿ ನಡೆದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ಪ್ರತಿಭಟನಾ ಸ್ಥಳದಲ್ಲಿ ಎಸಿಪಿ ಶಿವಶಂಕರ್ ಹಾಜರಿದ್ದರು. ನೆಲೆಹಿನ್ನೆಲೆ ಕೆ.ಆರ್.ಗೋಪಾಲಕೃಷ್ಣ, ಹಿರಿಯ ರಂಗಕರ್ಮಿ ಕೃಷ್ಣಪ್ರಸಾದ್, ವರುಣಾ ಮಹೇಶ್, ಚೋರನಹಳ್ಳಿ ಮಹದೇವಸ್ವಾಮಿ, ಬುಗತಹಳ್ಳಿ ದೇವರಾಜು, ಪಡುವಾರಹಳ್ಳಿ ಭಾಗ್ಯಮ್ಮ, ವನಿತಾ, ಬೊಮ್ಮನಹಳ್ಳಿ ಶಂಕರ್ ನಂಜನಗೂಡು ಶಿವಮೂರ್ತಿ ಸೇರಿದಂತೆ ಹಲವಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...