Homeಕರ್ನಾಟಕಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ರೀತಿ ನಕಲಿ ಪತ್ರವನ್ನು ಸೃಷ್ಟಿಸಲಾಗಿದೆ.

- Advertisement -
- Advertisement -

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸೋಲಿನ ಹತಾಶೆಯಲ್ಲಿ ಬಿಜೆಪಿ ತನ್ನ ಫೇಕ್ ಫ್ಯಾಕ್ಟರಿಗೆ ಹೆಚ್ಚಿನ ಕೆಲಸ ನೀಡಿದೆ. ಬಿಜೆಪಿಯ ನಕಲಿ ಮೋರ್ಚಾವು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಸರ್ಕಾರಿ ಲೆಟರ್ ಹೆಡ್, ಹಾಗೂ ಸಿದ್ದರಾಮಯ್ಯನವರ ಸಹಿ ನಕಲು ಮಾಡಿದ್ದು ಗಂಭೀರ ಅಪರಾಧ. ಚುನಾವಣಾ ಆಯೋಗ ಹಾಗೂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದವರೆಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದೆ.

ನಕಲಿ ಪತ್ರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯನವರು, “ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ಪಕ್ಷ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು. ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮ‌ಕೈಗೊಳ್ಳಲು ಒತ್ತಾಯಿಸಲಿದ್ದೇನೆ” ಎಂದಿದ್ದಾರೆ.

ನಕಲಿ ಪತ್ರದಲ್ಲಿ ಏನಿದೆ?

ಕಳೆದ ಮೂರು ವರ್ಷದಿಂದ ವಿರೋಧ ಪಕ್ಷದ ನಾಯಕನಾಗಿ ಆಡಳಿತರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾ ಪ್ರಾಮಾಣಿಕವಾಗಿ ಹೋರಾಟ ಮಾಡಿದ್ದೇನೆ. ಅದರಲ್ಲೂ ಚುನಾವಣೆ ವರ್ಷದಲ್ಲಿ ಅವಕಾಶ ಸಿಕ್ಕ ಕಡೆ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿರುವ ಪ್ರಯತ್ನ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿಯಾಗಿ ವಿರೋಧ ಪಕ್ಷದ ನಾಯಕಕ್ಕಾಗಿ ಪಕ್ಷಕ್ಕಾಗಿ ನಿಷ್ಠೆಯಿಂದ ನಡೆದುಕೊಂಡು ಬಂದಿದ್ದೇನೆ. ಪಕ್ಷ ನನಗೆ ಸ್ಥಾನಮಾನಗಳನ್ನು ನೀಡಿ ಗೌರವಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ನಾನು ಜೀವನಪರ್ಯಂತ ಆಭಾರಿಯಾಗಿರುತ್ತೇನೆ. ಈ ಭಾರಿ ಮತ್ತೊಮ್ಮೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಅವರ ಕೈ ಬಲಪಡಿಸಬೇಕೆಂಬ ಇಚ್ಛೆ ಅಗಾಧವಾಗಿವೆ.

ಆದರೆ ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಬಹಳ ಬೇಸರವನ್ನುಂಟು ಮಾಡಿದೆ. ಇಡೀ ರಾಜ್ಯದ ತುಂಬಾ ಸುತ್ತಾಡಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು. ತಮಗಿಂತ ವಯಸ್ಸಿನಲ್ಲಿ ಕಿರಿಯರು  ಹಾಗೂ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ತೀವ್ರ ಅಸಮಾಧಾನವಿದೆ.

ಕಳೆದ ಒಂದು ವರ್ಷದಿಂದ ರಾಹುಲ್ ಗಾಂಧಿಯವರ ತಂಡ ನೀಡಿದ ಮಾರ್ಗದರ್ಶನದಂತೆ ಉತ್ತಮವಾಗಿ ಕ್ಯಾಂಪೇನ್ ಮಾಡಿಕೊಂಡು ಬಂದಿದ್ದೇವೆ. ಡಿ.ಕೆ.ಶಿವಕುಮಾರ್‌ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜನರ ಮುಂದೆ ಘೋಷಣೆ ಕೂಗಿಸಿಕೊಳ್ಳುತ್ತಾ ನನ್ನ ಅಪಾರ ಅಭಿಮಾನಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಎಲ್ಲಾ ನಿರ್ಣಯವನ್ನು ಏಕಮುಖವಾಗಿ ತೆಗೆದುಕೊಳ್ಳುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿದ್ದೆ. ಆದರೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿ.ಕೆ.ಶಿವಕುಮಾರ್‌ ಅವರು ಯಶಸ್ವಿಯಾಗಿದ್ದಾರೆ. ಆದರೂ ರಾಜ್ಯ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದಿದ್ದ ನನ್ನ ಆಸೆಗೆ ಎಳ್ಳುನೀರು ಬಿಟ್ಟಿರುತ್ತಾರೆ.

ಟಿಕೆಟ್ ಹಂಚಿಕೆ ವಿಷಯದಲ್ಲಿ ಒಬಿಸಿ ವರ್ಗದ ಆಕಾಂಕ್ಷಿಗಳಿಗೆ ಡಿ.ಕೆ.ಶಿವಕುಮಾರ್ ಅನ್ಯಾಯ ಮಾಡಿದ್ದಾರೆ. ಚಿತ್ರದುರ್ಗದ ಪ್ರಬಲ ಆಕಾಂಕ್ಷಿಯಾಗಿದ್ದ ರಘು ಆಚಾರ್‌ಗೆ ನನ್ನ ಶಿಷ್ಯ ಎನ್ನುವ ಕಾರಣಕ್ಕೆ ಟಿಕೆಟ್ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ತರಿಕೇರಿಯ ಒಬಿಸಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣನಿಗೂ ಟಿಕೆಟ್ ಸಿಗದಂತೆ ಮಾಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ಪುಟ್ಟರಂಗ ಶೆಟ್ಟಿಗೂ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ನನ್ನ ಪ್ರಯತ್ನದ ಫಲವಾಗಿ ಅದು ಅವರ ಕೈಯಿಂದ ಸಾಧ್ಯವಾಗಲಿಲ್ಲ. ಶಿವಕುಮಾರ್‌ ಅವರ ಕುತಂತ್ರದಿಂದ ಒಬಿಸಿ ಸಮುದಾಯ ನನ್ನ ವಿರುದ್ಧ ತಿರುಗಿಬೀಳುವಂತೆ ಮಾಡಿದ್ದಾರೆ.

“ವರುಣಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ದಲಿತರು ನನ್ನ ವಿರುದ್ಧ ತಿರುಗಿ ಬೀಳುವಂತೆ ಹಣದ ಹೊಳೆಯನ್ನೇ ಹರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣನವರಿಗೂ ಕೋಟಿ ಕೋಟಿ ಫಂಡಿಂಗ್ ಮಾಡಿದ್ದಾರೆ”- ಹೀಗೆ ನಕಲಿಪತ್ರ ಪುಂಕಾನುಪುಂಕವಾಗಿ ವಿಷಯಗಳನ್ನು ಪೋಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...