Homeಕರ್ನಾಟಕಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

- Advertisement -
- Advertisement -

ವಿಜಯದಶಮಿಯಂದು (ಅ.15) ಯಾವುದೇ ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ದುರ್ಗಾ ದೌಡ್, ತಲವಾರು, ಆಯುಧಗಳ ಪ್ರದರ್ಶನ ಆಯೋಜಿಸಲಾಗಿತ್ತು. ಅನುಮತಿ ಪಡೆಯದೇ, ಕೊರೊನಾ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸಿದಕ್ಕಾಗಿ ಸಂಘಟನೆಯ ಪ್ರಮುಖರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯದಶಮಿಯಂದು ಆಡಳಿತದ ಅನುಮತಿಯಿಲ್ಲದೆ ಹಿಂದೂ ಜಾಗರಣ ವೇದಿಕೆಯ ಮುಖಂಡರು ಕಾರ್ಯಕ್ರಮ ಆಯೋಜನೆ ಮಾಡಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಹಿನ್ನಲೆ ಎಪಿಡೆಮಿಕ್ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಿಸಿದ್ದರು. ಕೊರೊನಾ ನಿಯಮ ಉಲ್ಲಂಘನೆ ಹಿನ್ನೆಲೆ ಉಡುಪಿ ನಗರದ ಪೌರಾಯುಕ್ತ ಡಾ.ಉದಯ್ ಕುಮಾರ್ ಶೆಟ್ಟಿ ದೂರಿನ ಮೇರೆಗೆ ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

 ಇದನ್ನೂ ಓದಿ: ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಾಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಗಿತ್ತು. ಸರ್ಕಾರದ ಆದೇಶದಂತೆ ಒಂದು ಸ್ಥಳದಲ್ಲಿ 400 ಕ್ಕೂ ಅಧಿಕ ಮಂದಿ ಸೇರುವಂತಿಲ್ಲ. ಅಲ್ಲದೇ ಧ್ವನಿವರ್ಧಕ, ಮೆರವಣಿಗೆಗೂ ಅವಕಾಶವಿಲ್ಲ. ನಿಷೇಧಿತ ಸ್ಥಳದಲ್ಲಿ ಮೆರವಣಿಗೆ ‌ಮಾಡುವಂತಿಲ್ಲ. ಆದರೆ, ಮೆರವಣಿಗೆಯಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಹಿಂದೂ ಜಾಗರಣ ವೇದಿಕೆ

ಮೆರವಣಿಗೆಯಲ್ಲಿ ತಲವಾರ ಆಯುಧ ಪ್ರದರ್ಶನ ಮಾಡಲಾಗಿತ್ತು. ವಾಹನ ಸಂಚಾರಕ್ಕೂ ತಡೆಯೊಡ್ಡಲಾಗಿತ್ತು. ಈ ಕಾರ್ಯಕ್ರಮದ ಮೆರವಣಿಗೆಯಲ್ಲಿ ಇಂಧನ ಸಚಿವ ಸುನಿಲ್ ಕುಮಾರ್, ಶಾಸಕ ರಘುಪತಿ ಭಟ್, ಮಹೇಶ್ ಶೆಣೈ, ಪ್ರಕಾಶ್ ಕುಕ್ಕೆಹಳ್ಳಿ, ವಿಶು ಶೆಟ್ಟಿ ಅಂಬಲಪಾಡಿ ಸೇರಿ ಅನೇಕರು ಭಾಗವಹಿಸಿದ್ದರು.

ಇನ್ನು ನವರಾತ್ರಿಯ ಪೂಜೆಯ ದಿನದಂದು ‘ತ್ರಿಶೂಲ ದೀಕ್ಷೆ’ ಹೆಸರಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ತಮ್ಮ ಕಾರ್ಯಕರ್ತರಿಗೆ ಮಾರಕ ಶಸ್ತ್ರಗಳನ್ನು ಹಂಚಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಮತ್ತು ಉಡುಪಿ ಜಿಲ್ಲೆಯ ಮಲ್ಪೆ, ಕುಂದಾಪುರದಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ಯುವಕ-ಯುವತಿಯರ ಕೈಗೆ ತ್ರಿಶೂಲದಂತಹ ಶಸ್ತ್ರಗಳನ್ನು ಹಂಚಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...