Homeಕರೋನಾ ತಲ್ಲಣಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಈ ದುರಂತದ ಸಂದರ್ಭದಲ್ಲಿ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ.

- Advertisement -
- Advertisement -

‘ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ’ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ಇಂದು ರವಿವಾರ ಮುಖಪುಟದಲ್ಲೇ ಪ್ರಕಟಣೆ ನೀಡಿದ್ದು, ಇದೊಂದು ಜರೂರಾದ ನೈತಿಕ ನಡೆ ಎಂದು ಓದುಗರಿಂದ ಪ್ರಶಂಸೆ ವ್ಯಕ್ತವಾಗಿದೆ.

‘ಭಾರತವು ಈಗ ಕೋವಿಡ್ ಸಾಂಕ್ರಾಮಿಕದ ತೀವ್ರ ದುರಂತದಲ್ಲಿ ನರಳುತ್ತಿದೆ. ಸಾವಿರಾರು ಜನ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ಒದ್ದಾಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ಉಸಿರಾಟದ ಸಮಸ್ಯೆ ಅಧಿಕಗೊಂಡಿದ್ದು, ಆಸ್ಪತ್ರೆಗಳು ಆಮ್ಲಜನಕ ಮತ್ತು ಅಗತ್ಯ ಜೀವರಕ್ಷಕ ಔಷಧಿಗಳನ್ನು ಒದಗಿಸಿ ಎಂದು ಅಸಹಾಯಕ ಸ್ಥಿತಿಯಲ್ಲಿ ಸರ್ಕಾರಗಳಿಗೆ ಮನವಿ ಮಾಡುತ್ತಿವೆ. ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ಪಾಳೆ ಹಚ್ಚುವ ಪರಿಸ್ಥಿತಿ ಬಂದಿದೆ…….

‘ಕುಸಿದು ಹೋಗಿರುವ ದೇಶದ ಆರೋಗ್ಯ ವ್ಯವಸ್ಥೆಯ ಕುರಿತಾಗಿ ಸರ್ಕಾರದ ಬಳಿ ಯಾವುದೇ ಸಮರ್ಪಕ ಉತ್ತರವಿಲ್ಲ. ಅದು ಈ ಸವಾಲನ್ನು ಮೆಟ್ಟಿ ನಿಲ್ಲುವ ಸಿದ್ಧತೆ ಮಾಡಿಕೊಂಡಂತೆ ಜನರಿಗೆ ಅನಿಸುತ್ತಿಲ್ಲ. ಇಂತಹ ಒಂದು ಸಂದರ್ಭದಲ್ಲಿ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ. ಇದು ಕ್ರಿಕೆಟ್ ಕುರಿತಾದ ಪ್ರಶ್ನೆಯಲ್ಲ. ಆದರೆ ಈ ದುರಂತದ ಸಂದರ್ಭದ ಪ್ರಶ್ನೆಯಾಗಿದೆ. ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಒಂದು ಸಣ್ಣ ಹೆಜ್ಜೆಯಾಗಿ, ನಮ್ಮ ನೈತಿಕ ಜವಾಬ್ದಾರಿ ಎಂದು ಅಂದುಕೊಂಡು ಈಗಿನಿಂದಲೇ ಕ್ರಿಕೆಟ್ ಕವರೇಜ್ ಮಾಡದಿರಲು ಪತ್ರಿಕೆ ನಿರ್ಧರಿಸಿದೆ…. ಪರಿಸ್ಥಿತಿ ಸಹಜ ಸ್ಥಿಗೆ ಬರುವವರೆಗೂ ಕವರೇಜ್ ಮಾಡದಿರಲು ನಿರ್ಧರಿಸಿದ್ದೇವೆ…’ ಎಂದು ಹೇಳಿರುವ ಸಂಪಾದಕೀಯ ಮಂಡಳಿ, ‘ಓದುಗರು ಈ ಅಂಶವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಈ ಸಂಕಷ್ಟ ಸಂದರ್ಬದಲ್ಲಿ ನಾವೆಲ್ಲ ಒಂದು ದೃಢ ಸಂಕಲ್ಪದೊಂದಿಗೆ ಒಂದು ದೇಶವಾಗಿ ಒಟ್ಟಾಗಿ ನಿಲ್ಲಬೇಕಿದೆ’ ಎಂದು ತಿಳಿಸಿದೆ,

ಇದೊಂದು ಭಿನ್ನ ನೈತಿಕ ನಡೆಯಾಗಿದ್ದು ಅನಕರಣೀಯ ಕ್ರಮ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...