Homeಚಳವಳಿತಟ್ಟೆ ಚಳವಳಿ: ಮೋದಿಯವರ 'ಮನ್ ಕಿ ಬಾತ್' ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ರೈತರ ಕರೆಗೆ ಓಗೊಟ್ಟು ರಾಯಚೂರಿನಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ತಟ್ಟೆ ಬಡಿಯುವ ಪ್ರತಿಭಟನೆ ನಡೆಸಲಾಯಿತು.

- Advertisement -
- Advertisement -

ದೆಹಲಿಯಲ್ಲಿನ ಹೋರಾಟನಿರತ ರೈತರ ಕರೆ ಮೇರೆಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಮನ್‌ ಕಿ ಬಾತ್ ಸಮಯದಲ್ಲಿ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ ನಡೆಸಲಾಯಿತು. ಮೋದಿಯವರು ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ತಟ್ಟೆ ಬಡಿಯುವಂತೆ ಕರೆ ನೀಡಿದ್ದನ್ನು ಅನುಸರಿಸಿದ ರೈತರು ಇಂದು ಮೋದಿಯವರ ಭಾಷಣದ ವೇಳೆಯೇ ತಟ್ಟೆ ಬಡಿಯುವ ಮೂಲಕ ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಜನ ವಿರೋಧಿ ನೀತಿಗಳನ್ನು ಖಂಡಿಸಿ ರೈತ, ದಲಿತ, ವಿದ್ಯಾರ್ಥಿ-ಯುವಜನ, ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ತಟ್ಟೆ ಬಡಿಯುವ ಚಳವಳಿ ನಡೆಸಲಾಯಿತು. ಟೌನ್ ಹಾಲ್ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಬಿ.ಹೆಚ್. ರಸ್ತೆಯ ರಿಲೆಯನ್ಸ್ ಟ್ರೆಂಡ್ಸ್ ವರೆಗೆ ಮೆರವಣಿಗೆ ನಡೆಸಿ ತಟ್ಟೆ ಬಡಿಯುವ ಚಳುವಳಿ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ರಾಜ್ಯ ರೈತ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್  “ನರೇಂದ್ರ ಮೋದಿ ಪ್ರಧಾನಿ ಹುದ್ದೆಯ ಘನತೆ, ಗೌರವಕ್ಕೆ ಚ್ಯುತಿ ತರುವಂತಹ ಕೆಲಸ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ವಿರುದ್ಧ ನಡೆಯುತ್ತಿದ್ದು, ದೇಶದ ಕಾನೂನುಗಳನ್ನು ಧಿಕ್ಕರಿಸುತ್ತಿರುವ ಪ್ರಧಾನಿಗೆ ನಾಚಿಕೆ ಆಗಬೇಕು” ಎಂದು ವಾಗ್ದಾಳಿ ನಡೆಸಿದರು.

ಇಡೀ ದೇಶದ ಆರ್ಥಿಕತೆ ಕೆಲವೇ ಕುಟುಂಬಗಳ ಕೈಯಲ್ಲಿದೆ. ಹೀಗಾಗಿ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಕೈಗಾರಿಕಾ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಬದಲು ಅಲ್ಪಸ್ವಲ್ಪ ಲಾಭ ಬರುತ್ತಿರುವ ಕೃಷಿ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸಲು ಕಾರ್ಪೋರೇಟ್ ಕುಳಗಳಿಗೆ ಅವಕಾಶ ನೀಡಲಾಗುತ್ತಿದೆ. ಇದೇ ಕಾರಣಕ್ಕೆ ಕರಾಳ ಕೃಷಿ ಕಾಯ್ದೆ ಗಳನ್ನು ಜಾರಿಗೊಳಿಸಲಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ರೈತರ ಕೈಯಲ್ಲಿದ್ದ ಭೂಮಿ ಇಲ್ಲವಾಗಲಿದೆ.  ಇದೇ ಪರಿಸ್ಥಿತಿ ಮುಂದುವರಿದರೆ ರೈತರು ಬೀದಿಗೆ ಬೀಳುವ ದಿನಗಳು ದೂರವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದ ಬಡತನ ಹೆಚ್ಚುತ್ತಿದೆ. ನಿರುದ್ಯೋಗ ಸಮಸ್ಯೆ ಏರುಗತಿಯಲ್ಲಿ ಸಾಗಿದೆ. ಉದ್ಯೋಗ ಸಿಗುತ್ತಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನಲ್ಲಿ ಹೇಳುವ ಬದಲು ಖಾಲಿ ಮಾತುಗಳನ್ನು ಆಡುತ್ತಿದ್ದಾರೆ. ಅಂಬಾನಿ ಅದಾನಿ ಆದಾಯ ಹೆಚ್ಚಾದಂತೆ ರೈತರ ಆದಾಯ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಬಹುಸಂಖ್ಯಾತರ ಓಟು ಪಡೆದು ಗೆದ್ದು ಬಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವುದು ಬಿಟ್ಟು, ರೈತವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಜಾರಿ ಮತ್ತು 2 ಕೋಟಿ ಉದ್ಯೋಗದ ಭರವಸೆ ನೀಡಿಯೂ ಕೂಡ ಅದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ “ಪ್ರಧಾನಿ ನರೇಂದ್ರ ಮೋದಿ ರೈತರು, ದಲಿತರು, ಕಾರ್ಮಿಕರು, ಮಹಿಳೆಯರ ಸಮಸ್ಯೆಗಳ ಬಗ್ಗೆ ಕಿವಿಗೊಡುತ್ತಿಲ್ಲ. ಹಿಂದಿನ ಪ್ರಧಾನಿಗಳು ರೈತರು ಸೇರಿದಂತೆ ಯಾರೇ ಪ್ರತಿಭಟನೆ ನಡೆಸಿದರೂ ಕೂಡಲೇ ಆ ಸಂಘಟನೆಗಳ ನಾಯಕರನ್ನು ಕರೆಸಿ ಮಾತುಕತೆ ನಡೆಸುವ ಪದ್ದತಿ ಇತ್ತು. ಈ ಪ್ರಧಾನಿ ಮೋದಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆ ಬಗ್ಗೆ ಗಮನ ಕೊಡುತ್ತಿಲ್ಲ. ಕೃಷಿ ಕ್ಷೇತ್ರವನ್ನು ಉಳಿಸಬೇಕಾದ ಪ್ರಧಾನಿ ಕಾರ್ಪೋರೇಟ್ ಕಂಪನಿಗಳಿಗೆ ನೀಡುವುದಕ್ಕೆ ಮುಂದಾಗಿದ್ದಾರೆ. ದೇಶದಲ್ಲಿ ಏಕವ್ಯಕ್ತಿ ಆಡಳಿತ ನಡೆಯುತ್ತಿದೆ. ಬಿಜೆಪಿ ಸಂಸದರು, ಸಚಿವರು ರೈತರು ಮತ್ತು ಚಳವಳಿ ಕುರಿತು ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಸರಿಯಲ್ಲ ಎಂದರು.

ತಟ್ಟೆ ಬಡಿಯುವ ಮೆರವಣಿಗೆಯಲ್ಲಿ ರೈತ ಮುಖಂಡ ಕೆ.ಎಸ್.ಧನಂಜಯರಾಧ್ಯ, ರೈತ ಕೃಷಿ ಕಾರ್ಮಿಕ ಸಂಘಟನೆಯ ಎಸ್.ಎನ್.ಸ್ವಾಮಿ, ಅಜ್ಜಪ್ಪ, ಅಖಿಲ ಭಾರತ ಕಿಸಾನ್ ಸಭಾದ ಕಂಬೇಗೌಡ, ಡಾ. ಬಸವರಾಜು, ಡಾ. ಆರುಂಧತಿ, ಆರ್.ಕೆ.ಎಸ್.ನ ನವೀನ್, ರಮೇಶ್, ಲೋಕೇಶ್, ಮಹಿಳಾ ಸಂಘಟನೆಯ ಎಂ.ಡಿ.ಕಲ್ಯಾಣಿ, ಎಐಟಿಯುಟಿಯುಸಿಯ ಮಂಜುಳ, ಎಐಡಿಎಸ್ಒನ ಆಶ್ವಿನಿ, ರೈತ ಮುಖಂಡ ರವೀಶ್ ಅಜ್ಜಪ್ಪ ಇದ್ದರು.

ರೈತರ ಕರೆಗೆ ಓಗೊಟ್ಟು ರಾಯಚೂರಿನಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ತಟ್ಟೆ ಬಡಿಯುವ ಪ್ರತಿಭಟನೆ ನಡೆಸಲಾಯಿತು.

ದಾವಣಗೆರೆಯಲ್ಲಿ ಕರ್ನಾಟಕ ಜನಶಕ್ತಿಯ ಹಲವಾರು ಕಾರ್ಯಕರ್ತರು ತಟ್ಟೆ ಬಡಿಯುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರಿನಲ್ಲಿ ಕೃಷಿ ಕಾಯ್ದೆಗಳ ವಿರುದ್ಧದ ನಿರಂತರ ಹೋರಾಟ ಮುಂದುವರೆದಿದೆ. ಇಂದು ಮೌರ್ಯ ಸರ್ಕಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ನೂರಾರು ಸಿಖ್ ಯುವಕರು ಮೆರವಣಿಗೆಯಲ್ಲಿ ಬಂದು ಭಾಗವಹಿಸಿದರು. ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಯವರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...