Homeಕರ್ನಾಟಕಶಿವಮೊಗ್ಗದಲ್ಲಿ ಡೈನಾಮೈಟ್ ಸ್ಫೋಟ ಪ್ರಕರಣ: ಗುತ್ತಿಗೆದಾರ ಸೇರಿದಂತೆ ಮೂವರ ಬಂಧನ

ಶಿವಮೊಗ್ಗದಲ್ಲಿ ಡೈನಾಮೈಟ್ ಸ್ಫೋಟ ಪ್ರಕರಣ: ಗುತ್ತಿಗೆದಾರ ಸೇರಿದಂತೆ ಮೂವರ ಬಂಧನ

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಹುಣಸೋಡಿನಲ್ಲಿ 50ಕ್ಕೂ ಹೆಚ್ಚು ಡೈನಾಮೈಟ್‌ಗಳು ಸ್ಪೋಟಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸ್ಫೋಟದಲ್ಲಿ ಸುಮಾರು 8 ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರ ಸುಧಾಕರ್, ಕಲ್ಲು ಗಣಿಗಾರಿಕೆಗೆ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಜಮೀನಿನ ಮಾಲೀಕ ಅವಿನಾಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಡೈನಾಮೈಟ್ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದ ಸಿಎಂ, ಮೃತರಿಗೆ ಪ್ರಧಾನಿ…

ಲಾರಿಯೊಂದಕ್ಕೆ ತುಂಬಿದ್ದ ಜೆಲಿಟಿನ್ ಸ್ಫೋಟಗೊಂಡ ಪರಿಣಾಮ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜೆಲಿಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರಗೊಂಡಿದ್ದು, ಲಾರಿ ಚಾಲಕ ಮತ್ತು ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ ಸಾವನ್ನಪ್ಪಿರುವವರಿಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕುಮಾರಸ್ವಾಮಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದು, ಉನ್ನತಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...