Homeಮುಖಪುಟಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

- Advertisement -
- Advertisement -

ತಮಿಳುನಾಡು ವಿದ್ಯುಚ್ಛಕ್ತಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ಮನೆ ಮತ್ತು ಚೇಂಬರ್‌ಗಳಲ್ಲಿ ಮಂಗಳವಾರ ಶೋಧ ಕಾರ್ಯ ಆರಂಭಿಸಿದ ನಂತರ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ (ಜೂನ್ 14) ಮುಂಜಾನೆ ಬಾಲಾಜಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದೆ.

18 ಗಂಟೆಗಳ ವಿಚಾರಣೆ ನಡೆದಿದೆ. ಚೆನ್ನೈ ಮತ್ತು ಕರೂರ್‌ನಾದ್ಯಂತ ಹತ್ತಾರು ಸ್ಥಳಗಳಲ್ಲಿ ಸಚಿವರು ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ರೈಡ್ ಮಾಡಲಾಗಿದೆ.

ಎಐಎಡಿಎಂಕೆ ಸರ್ಕಾರದಲ್ಲಿ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದರು. 2011 ಮತ್ತು 2016ರ ನಡುವೆ ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬಾಲಾಜಿ ಅವರೀಗ ಡಿಎಂಕೆ ಸದಸ್ಯರಾಗಿದ್ದಾರೆ. 2021ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಚೆನ್ನೈ ಪೊಲೀಸರು ಬಾಲಾಜಿ ಮತ್ತು ಇತರ 46 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮದ್ರಾಸ್ ಹೈಕೋರ್ಟ್ 2022ರಲ್ಲಿ ನೀಡಿದ್ದ ಆದೇಶವನ್ನು ಕಳೆದ ಮೇ ತಿಂಗಳಿನಲ್ಲಿ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ಈ ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಇದಾದ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯು ಬಾಲಾಜಿ ಅವರ ಮನೆ, ಅವರ ಕೆಲವು ಬೆಂಬಲಿಗರ ಮನೆ ಮತ್ತು ಕಚೇರಿಗಳ ಮೇಲೆ ಎಂಟು ದಿನಗಳ ಕಾಲ ದಾಳಿ ನಡೆಸಿತ್ತು.

ಬಂಧನದ ನಂತರದಲ್ಲಿ ಬಾಲಾಜಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಾಜಿಯವರನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತರಲಾಯಿತು. ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಯ ಹೊರಗೆ ನಾಟಕೀಯ ದೃಶ್ಯಗಳು ಕಂಡುಬಂದವು. ಅವರು ಕುಸಿದುಬಿದ್ದರು ಎಂದು ವರದಿಯಾಗಿದೆ, ಬಾಲಾಜಿ ಬೆಂಬಲಿಗರು ಒಗ್ಗಟ್ಟು ಪ್ರದರ್ಶಿಸಲು ಜಮಾಯಿಸಿದ್ದರು.

ಡಿಎಂಕೆ ನಾಯಕರು ಬಾಲಾಜಿ ಬೆಂಬಲಕ್ಕೆ ನಿಂತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಪ್ರತಿಕ್ರಿಯಿಸಿ, “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈ ಪ್ರವಾಸ ಮುಗಿಸಿದ ನಂತರ ಈ ಬೆಳವಣಿಗೆಯಾಗಿದೆ. ಇದು ಅಮಿತ್ ಶಾ ಭೇಟಿಯ ನಂತರ ನಡೆಯುತ್ತಿದೆ. ಇದರಲ್ಲಿ ದುರುದ್ದೇಶವಿದೆ” ಎಂದಿದ್ದಾರೆ.

ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಲು ಎಐಎಡಿಎಂಕೆಯು ಯೋಚಿಸುತ್ತಿದೆ. ಈ ಕಾರಣ ಬಿಜೆಪಿ ಕೂಡ ಹಲವು ತಿರುವುಗಳನ್ನು ಸೃಷ್ಟಿಸಲು ಬಯಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಡಿಎಂಕೆ ಸಂಸದ, ವಕೀಲ ಎನ್.ಆರ್.ಎಳಂಗೋ ಪ್ರತಿಕ್ರಿಯಿಸಿ, “ಬಾಲಾಜಿಯವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರ ಬಂಧನವನ್ನು ಇಡಿ ಅಧಿಕೃತವಾಗಿ ದೃಢಪಡಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಇಡಿ ಅವರನ್ನು ಬಂಧಿಸಿದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಯಾವುದೇ ಬಂಧನ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ನಾನು ಅವರನ್ನು (ಶ್ರೀ ಬಾಲಾಜಿ) ಐಸಿಯುಗೆ ಸ್ಥಳಾಂತರಿಸಿದಾಗ ನೋಡಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಚೆಕ್‌ ಮಾಡುತ್ತಿದ್ದಾರೆ. ಹಲ್ಲೆ ನಡೆದಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದಾಗ ವೈದ್ಯರು ಎಲ್ಲಾ ಗಾಯಗಳನ್ನು ಗಮನಿಸಬೇಕು. ವರದಿಯನ್ನು ನೋಡಿದ ನಂತರ ಅದು ತಿಳಿಯುತ್ತದೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಕುಸ್ತಿ ಫೆಡರೇಶನ್‌ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಂಬಂಧಿಗಳು ಸ್ಪರ್ಧೆ ಮಾಡದಿರಲು ನಿರ್ಧಾರ: ವರದಿ

ತಮಿಳುನಾಡು ಕಾನೂನು ಸಚಿವ ಎಸ್.ರೇಗುಪತಿ ಕೂಡ ಪ್ರತಿಕ್ರಿಯಿಸಿ, “ಬಂಧನದ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಡಿಎಂಕೆ ನಾಯಕರಲ್ಲಿ ಅವರು ಒಬ್ಬರಾಗಿದ್ದರು, ಆದರೆ ಬಾಲಾಜಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡಿ ಕ್ರಮವನ್ನು ಖಂಡಿಸಿದ್ದಾರೆ. “ಇದು ಕಿರುಕುಳ ಮತ್ತು ಬೆದರಿಕೆ ನೀಡುವ ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರಯತ್ನಗಳು. ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳ ಇಂತಹ ದುರುಪಯೋಗ ಮೋದಿ ಸರ್ಕಾರದ ವಿಶಿಷ್ಟ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳನ್ನು ಮೌನಗೊಳಿಸಲು ಮತ್ತು ಫೆಡರಲಿಸಂನ ಮೇಲೆ ದಾಳಿ ಮಾಡಲು ಬಿಜೆಪಿ ನಡೆಸಿರುವ ಮತ್ತೊಂದು ಪ್ರಯತ್ನ ಇದಾಗಿದೆ” ಎಂದು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...