Homeಮುಖಪುಟಮುಂಚೆ 'ಅಬ್ಬ ಜಾನ್' ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ...

ಮುಂಚೆ ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ ವಿರೋಧ – ದೂರು ದಾಖಲು

ಟ್ವಿಟರ್‌ನಲ್ಲಿ ಹಲವು ಜನರು ತಮ್ಮ ತಂದೆಯ ಚಿತ್ರವನ್ನು ಪೋಸ್ಟ್ ಮಾಡಿ ಇವರು ನನ್ನ ಅಬ್ಬ ಜಾನ್ ಎಂದು ಬರೆದು ಹಮಾರೆ ಅಬ್ಬ ಜಾನ್ ಎಂದು ಟ್ರೆಂಡ್ ಮಾಡುತ್ತಿದ್ದಾರೆ.

- Advertisement -
- Advertisement -

ಸದಾ ಪ್ರಚೋದಾತ್ಮಕ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಕಾರಣವಾಗುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈಗ ಮತ್ತೊಂದು ಅಂತಹುದೇ ಹೇಳಿಕೆ ನೀಡಿ ವಿವಾದವೊಂದನ್ನು ಮೈಮೆಲೆ ಎಳೆದುಕೊಂಡಿದ್ದಾರೆ. 2017ಕ್ಕೆ ಮೊದಲು ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು ಎಂಬ ಅವರ ಕೋಮು ಪ್ರಚೋದನಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಿಹಾರದಲ್ಲಿ ಅವರ ವಿರುದ್ಧ ದೂರು ಸಹ ದಾಖಲಾಗಿದೆ.

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ “2017ಕ್ಕೆ ಮುಂಚೆ ನಿಮಗೆ ರೇಷನ್ ಸಿಗುತ್ತಿತ್ತೆ? ಆಗ ಕೇವಲ ಅಬ್ಬ ಜಾನ್ (ಸಾಮಾನ್ಯವಾಗಿ ಮುಸ್ಲಿಂ ಸಮುದಾಯದಲ್ಲಿ ತಂದೆಯನ್ನು ಕರೆಯುವ ಪರಿ) ಎಂದು ಕರೆಯುವವರು ಎಲ್ಲಾ ರೇಷನ್ ತಿಂದುಹಾಕುತ್ತಿದ್ದರು. ಆಗ ಶ್ರೀನಗರಕ್ಕೆ ನೀಡಲಾಗುವ ಪಡಿತರವು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಹೋಗಿತ್ತು” ಎಂದಿದ್ದಾರೆ.

2017ರವರೆಗೆ ಇದ್ದ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರವನ್ನು ಸಹ ಗುರಿಯಾಗಿಸಿ ಟೀಕಿಸಿರುವ ಆದಿತ್ಯನಾಥ್ “ನಮ್ಮ ಸರ್ಕಾರದಲ್ಲಿ ಬಡವರ ಪಾಲಿನ ರೇಷನ್ ಕದಿಯುವವರನ್ನು ಜೈಲಿಗೆ ಅಟ್ಟುತ್ತೇವೆ” ಎಂದಿದ್ದಾರೆ.

ಯೋಗಿ ಆದಿತ್ಯನಾಥ್‌ರವರ ಈ ಹೇಳಿಕೆ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಅಬ್ಬ ಜಾನ್ ಹೇಳಿಕೆಯ ಮೂಲಕ ಯೋಗಿ ಆದಿತ್ಯನಾಥ್ ಮುಸ್ಲಿಂ ಸಮುದಾಯವನ್ನು ಹೀಯಾಳಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದಲ್ಲಿ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಈ ಹಿಂದೆ ಹಲವು ರಾಜಕಾರಣಿಗಳ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ದೂರು ನೀಡಿರುವ ಹಶ್ಮಿಯವರು ‘ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಯೋಗಿ ಆದಿತ್ಯನಾಥ್ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ವಿಚಾರಣೆ ನಡೆಸಬೇಕೆಂದು’ ಕೋರಿದ್ದಾರೆ.

ಮುಸ್ಲಿಂ ಸಮುದಾಯದ ವಿರುದ್ಧ ಕೋಮುವಾದಿ ಹೇಳಿಕೆಗಳು, ದ್ವೇಷಭಾಷಣ ಬಿಟ್ಟು ಬಿಜೆಪಿ ಎಂದೂ ಜನರ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸಿಲ್ಲ. ಮುಂದಿನ ವರ್ಷ ಚುನಾವಣೆಯಿರುವುದರಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಓಮರ್ ಅಬ್ದುಲ್ಲಾ ಕಿಡಿಕಾರಿದ್ದಾರೆ.

ಟ್ವಿಟರ್‌ನಲ್ಲಿಯೂ ಯೋಗಿ ಆದಿತ್ಯನಾಥ್ ಹೇಳಿಕೆ ಖಂಡಿಸಿ “ನಾನು ನನ್ನ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇನೆ” ಎಂಬ ಅಭಿಯಾನ ಆರಂಭವಾಗಿದೆ. ಎಲ್ಲಾ ಸಮುದಾಯದ ಬಹಳಷ್ಟು ಜನರು ತಮ್ಮ ತಂದೆಯ ಫೋಟೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿ ನಮ್ಮ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇವೆ ಎಂದು ಬರೆಯುವ ಮೂಲಕ ಯೋಗಿಗೆ ಸೆಡ್ಡು ಹೊಡೆದಿದ್ದಾರೆ. ಚಿತ್ರ ನಿರ್ದೇಶಕ ಹನ್ಸಲ್ ಮೆಹ್ತಾ ನಾನು ನನ್ನ ಅಬ್ಬ ಜಾನ್‌ ರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ನನ್ನ ಅಬ್ಬ ಜಾನ್ ಒಬ್ಬ ಅತ್ಯುತ್ತಮ ಬ್ಯಾಂಕರ್ ಆಗಿದ್ದರು. ನನ್ನ ಅಬ್ಬ ಜಾನ್ ನಿವೃತ್ತ ನ್ಯಾಯಾಧೀಶರು, ನನ್ನ ಅಬ್ಬಾ ಜಾನ್ ಕೆಲಸ ಮಾಡುತ್ತಿದ್ದ ಸ್ಥಳ ಎಂದೆಲ್ಲಾ ಬರೆದಿರುವ ನೆಟ್ಟಿಗರು ‘ಹಮಾರೆ ಅಬ್ಬ ಜಾನ್‘ ಎಂಬ ಹ್ಯಾಸ್‌ಟ್ಯಾಗ್ ಅನ್ನು ಟ್ರೆಂಡ್ ಮಾಡಿದ್ದಾರೆ. ಅಂತಹ ಕೆಲವು ಟ್ವೀಟ್‌ಗಳು ಇಲ್ಲಿವೆ.

ಒಟ್ಟಿನಲ್ಲಿ ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ಚುನಾವಣೆ ಗೆಲ್ಲುವುದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆಗಳು ಅವರಿಗೆ ತಿರುಗುಬಾಣವಾಗಿವೆ. ಬಹಳಷ್ಟು ಜನ ಸೌಹಾರ್ದತೆಯನ್ನು ಒಡೆಯಬೇಡಿ ಎಂಬ ಸಂದೇಶಗಳನ್ನು ಕಳುಹಿಸಿದ್ದಾರೆ.


ಇದನ್ನೂ ಓದಿ: ಯುಪಿ: 3 ಗಂಟೆ ಕಾದರೂ ದಾಖಲಿಸದ ಆಸ್ಪತ್ರೆ, ಹೆತ್ತವರ ಕಣ್ಣು ಮುಂದೆ 5 ವರ್ಷದ ಬಾಲಕಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...