Homeಅಂತರಾಷ್ಟ್ರೀಯಹೈಟಿಯಲ್ಲಿ ಭೂಕಂಪ: 1,419 ಸಾವು, 6,000ಕ್ಕೂ ಹೆಚ್ಚು ಜನರಿಗೆ ಗಾಯ

ಹೈಟಿಯಲ್ಲಿ ಭೂಕಂಪ: 1,419 ಸಾವು, 6,000ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಹೈಟಿ ರಾಷ್ಟ್ರದಲ್ಲಿ ಭಯಾನಕ ಭೂಕಂಪ ಸಂಭವಿಸಿದ್ದು, ಇದೂವರೆಗೂ 1,419 ಜನರು ಸಾವನ್ನಪ್ಪಿದ್ದಾರೆ. 6,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಭೂಕಂಪದಿಂದಾಗಿ ಮನೆಗಳು, ಅಂಗಡಿಗಳು ಮತ್ತು ಇತರ ಕಟ್ಟಡಗಳನ್ನು ನೆಲಸಮಗೊಂಡಿವೆ. ನೈರುತ್ಯ ಹೈಟಿ ಆಸ್ಪತ್ರೆಯು ರೋಗಿಗಳಿಂದ ತುಂಬಿಹೋಗಿದೆ. ಅನೇಕರು ಜಾಗವಿಲ್ಲದೆ ಒಳಾಂಗಣ, ಕಾರಿಡಾರ್, ವರಾಂಡಾ ಮತ್ತು ಹಜಾರಗಳಲ್ಲಿ ಮಲಗಬೇಕಾದ ಪರಿಸ್ಥಿತಿ ಉಂಟಾಗಿದೆ. ಇದೇ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆಸ್ಪತ್ರೆಯ ರೋಗಿಗಳನ್ನು ಸ್ಥಳಾಂತರಿಸಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ರಾಜಧಾನಿ ಪೋರ್ಟ್-ಔ-ಪ್ರಿನ್ಸ್‌ನಿಂದ ಸುಮಾರು 125 ಕಿಲೋಮೀಟರ್ (80 ಮೈಲಿ) ದೂರದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸುಮಾರು ಕೆಲವು ಪಟ್ಟಣಗಳು ಧ್ವಂಸಗೊಂಡಿವೆ, ಭೂಕುಸಿತ ಉಂಟಾಗಿದೆ. ಅತ್ಯಂತ ಬಡವಾಗಿರುವ ದೇಶವಾಗಿರುವ ಹೈಟಿಯಲ್ಲಿ ರಕ್ಷಣಾ ಕಾರ್ಯಗಳು ತ್ವರಿತವಾಗಿಲ್ಲ.

7.2 ತೀವ್ರತೆಯ ಭೂಕಂಪನದಿಂದಾಗಿ 7,000 ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಸುಮಾರು 6,000 ಜನರು ಭೂಕಂಪದಿಂದ ಗಾಯಗೊಂಡಿದ್ದಾರೆ. ಸುಮಾರು 30,000 ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗಳು, ಶಾಲೆಗಳು, ಕಚೇರಿಗಳು ಮತ್ತು ಚರ್ಚುಗಳು ಸಹ ನಾಶವಾಗಿವೆ.

ಹೈಟಿ ಈಗಾಗಲೇ ಕೊರೊನಾ ಸೋಂಕು, ಗ್ಯಾಂಗ್ ವಾರ್‌, ಹದಗೆಡುತ್ತಿರುವ ಬಡತನದಿಂದ ಕೂಡಿದೆ. ಅಲ್ಲದೆ, ಜುಲೈ 7 ರಂದು ಅಧ್ಯಕ್ಷ ಜೋವೆನೆಲ್ ಮೊಸ್ ಅವರನ್ನು ಹತ್ಯೆ ಮಾಡಿದ ನಂತರ, ರಾಜಕೀಯ ಅನಿಶ್ಚಿತತೆ ಭುಗಿಲೆದ್ದಿದೆ. ಈ ನಡುವೆ, ಭೂಕಂಪ ಅಲ್ಲಿನ ಜನರನ್ನು ಮತ್ತಷ್ಟು ಕಂಗಾಲಾಗಿಸಿದೆ.

ಇದರ ಜೊತೆಗೆ, ಬೀರುಗಾಳಿಯೂ ಅಬ್ಬರಿಸುತ್ತಿದ್ದು, ಭಾರೀ ಮಳೆ, ಮಣ್ಣು ಕುಸಿತ ಮತ್ತು ಪ್ರವಾಹದ ಭೀತಿ ಎದುರಾಗಿದೆ. ಸೋಮವಾರ ಲಘು ಮಳೆಯಾಗಿದೆ. ಆದರೂ, ಇದು ಕೆಲವು ಪ್ರದೇಶಗಳಲ್ಲಿ 15 ಇಂಚು (38 ಸೆಂಟಿಮೀಟರ್)ಗೆ ಏರಿಕೆಯಾಗಬಹುದು ಎಂದು ಸಿವಿಲ್ ಪ್ರೊಟೆಕ್ಷನ್ ಏಜೆನ್ಸಿ ಹೇಳಿದೆ. ಪೋರ್ಟ್-ಔ-ಪ್ರಿನ್ಸ್ ಈಗಾಗಲೇ ಭಾರೀ ಮಳೆಯಾಗುತ್ತಿದೆ.

“ನಮ್ಮಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಹೆಚ್ಚು ಹಾನಿಗೊಳಗಾದ ಲೆಸ್ ಕೇಸ್ ಮತ್ತು ಜೆರೆಮಿ ಪಟ್ಟಣಗಳು ​​ಮತ್ತು ನಿಪ್ಪೆ ಸ್ಥಳಗಳನ್ನು ತಲುಪಲು ಕೆಲಸ ಮಾಡುತ್ತಿದ್ದೇವೆ” ಎಂದು ಏಜೆನ್ಸಿ ಮುಖ್ಯಸ್ಥ ಜೆರ್ರಿ ಚಾಂಡ್ಲರ್ ಹೇಳಿದ್ದಾರೆ.

ಪ್ರಧಾನ ಮಂತ್ರಿ ಏರಿಯಲ್ ಹೆನ್ರಿ ಇಡೀ ದೇಶಕ್ಕೆ ಒಂದು ತಿಂಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.


ಇದನ್ನೂ ಓದಿ: ರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...