Homeಅಂತರಾಷ್ಟ್ರೀಯಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ; ಕನಿಷ್ಠ 46 ಸಾವು

ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ; ಕನಿಷ್ಠ 46 ಸಾವು

- Advertisement -
- Advertisement -

ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಭೂಕಂಪ ಸಂಭವಿಸಿದ್ದು, ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಭೂಕಂಪದಿಂದ ಹಲವಾರು ಕಟ್ಟಡಗಳು ಹಾನಿಯಾಗಿದ್ದು, ಸುರಕ್ಷತೆಗಾಗಿ ನಿವಾಸಿಗಳನ್ನು ರಾಜಧಾನಿಯ ಬೀದಿಗಳಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. 5.6 ತೀವ್ರತೆಯ ಭೂಕಂಪವು ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜೂರ್ ಪ್ರದೇಶದಲ್ಲಿ 10 ಕಿಲೋಮೀಟರ್ (6.2 ಮೈಲಿ) ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

“ಸಿಯಾಂಜೂರ್ ಪ್ರಾದೇಶಿಕ ಆಸ್ಪತ್ರೆಯಲ್ಲಿ 46 ಮಂದಿ ಮೃತಪಟ್ಟಿದ್ದಾರೆ ಮತ್ತು ಸುಮಾರು 700 ಮಂದಿ ಗಾಯಗೊಂಡಿದ್ದಾರೆ. ಕಟ್ಟಡಗಳು ಕುಸಿದು ಬಿದ್ದಿದ್ದರಿಂದ ಹಲವರು ಗಾಯಗೊಂಡಿದ್ದಾರೆ” ಎಂದು ರಾಷ್ಟ್ರೀಯ ವಿಪತ್ತು ನಿವಾರಣಾ ಏಜೆನ್ಸಿ ಮುಖ್ಯಸ್ಥ ಸುಹರ್ಯಾಂತೋ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾವಾದ ಸಿಯಾಂಜೂರ್ ಪ್ರದೇಶದ ಸುತ್ತಮುತ್ತ ಹಲವಾರು ಭೂಕುಸಿತ ಸಂಭವಿಸಿದ್ದು ವರದಿಯಾಗಿದ್ದು, ಇಸ್ಲಾಮಿಕ್ ಬೋರ್ಡಿಂಗ್ ಶಾಲೆ, ಆಸ್ಪತ್ರೆ ಮತ್ತು ಇತರ ಸಾರ್ವಜನಿಕ ಸೌಲಭ್ಯಗಳು ಸೇರಿದಂತೆ ಹತ್ತಾರು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ರಾಷ್ಟ್ರೀಯ ವಿಪತ್ತು ನಿವಾರಣಾ ಸಂಸ್ಥೆ ತಿಳಿಸಿದೆ. ಸಾವು-ನೋವು ಮತ್ತು ಹಾನಿಯ ಪ್ರಮಾಣದ ಬಗ್ಗೆ ಇನ್ನೂ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ಜಕಾರ್ತದ ಹೆಚ್ಚಿನ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ. “ಕಂಪನವು ತುಂಬಾ ಪ್ರಬಲವಾಗಿದೆ. ನನ್ನ ಸಹೋದ್ಯೋಗಿಗಳು ಮತ್ತು ನಾನು ತುರ್ತು ಮೆಟ್ಟಿಲುಗಳನ್ನು ಬಳಸಿಕೊಂಡು ಒಂಬತ್ತನೇ ಮಹಡಿಯಲ್ಲಿರುವ ನಮ್ಮ ಕಚೇರಿಯಿಂದ ಹೊರಬರಲು ನಿರ್ಧರಿಸಿದೆವು ” ಎಂದು ದಕ್ಷಿಣ ಜಕಾರ್ತಾದ ಉದ್ಯೋಗಿ ವಿದಿ ಪ್ರಿಮಧಾನಿಯಾ ಹೇಳಿದ್ದಾರೆ.

ವಿಶಾಲವಾದ ದ್ವೀಪಸಮೂಹ ರಾಷ್ಟ್ರವಾಗಿರುವ ಇಂಡೋನೇಷ್ಯಾದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತವೆ. ಆದರೆ ರಾಜಧಾನಿ ಜಕಾರ್ತಾ ಇರುವ ಜಾವಾ ದ್ವೀಪದಲ್ಲಿ ಭೂಕಂಪ ಸಂಭವಿಸುವುದು ಅಪರೂಪವಾಗಿದೆ. 27 ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಇಂಡೋನೇಷ್ಯಾದಲ್ಲಿ ಭೂಕಂಪಗಳು, ಜ್ವಾಲಾಮುಖಿ ಸ್ಫೋಟಗಳು ಮತ್ತು ಸುನಾಮಿಗಳು ಆಗಾಗ್ಗೆ ಸಂಭವಿಸುತ್ತಲೆ ಇರುತ್ತವೆ.

ಫೆಬ್ರವರಿಯಲ್ಲಿ, ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಸಂಭವಿಸಿದ್ದ 6.2 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದರು ಮತ್ತು 460 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 2021 ರ  ಜನವರಿಯಲ್ಲಿ ಪಶ್ಚಿಮ ಸುಲವೆಸಿ ಪ್ರಾಂತ್ಯದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿ 100 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು ಮತ್ತು ಸುಮಾರು 6,500 ಜನರು ಗಾಯಗೊಂಡಿದ್ದರು.

ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪ: ಆರು ಮಂದಿ ಮೃತ | ದೆಹಲಿಯಲ್ಲೂ ಕಂಪನದ ಅನುಭವ!

2004 ರಲ್ಲಿ ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಭೂಕಂಪ ಮತ್ತು ಸುನಾಮಿ ಒಂದು ಹಲವಾರು ದೇಶಗಳಲ್ಲಿ ಸುಮಾರು 2,30,000 ಜನರನ್ನು ಕೊಂದಿತ್ತು. ಈ ಸಂಖ್ಯೆಯಲ್ಲಿ ಹೆಚ್ಚಿನ ಸಾವು ನೋವು ಇಂಡೋನೇಷ್ಯಾದಲ್ಲಿ ಸಂಭವಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...