Homeಮುಖಪುಟ'ಕೆಫೆ ಸ್ಪೋಟದ ಹಿಂದೆ ತಮಿಳರು' ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮಕ್ಕೆ ಚುನಾವಣಾ ಆಯೋಗ...

‘ಕೆಫೆ ಸ್ಪೋಟದ ಹಿಂದೆ ತಮಿಳರು’ ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

- Advertisement -
- Advertisement -

ತಮಿಳರ ವಿರುದ್ದ ದ್ವೇಷಪೂರಿತ ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ತಮಿಳರ ವಿರುದ್ದ ದ್ವೇಷ ಭಾಷಣ ಮಾಡುವ ಮೂಲಕ ಶೋಭಾ ಕರಂದ್ಲಾಜೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ಸಂಘಟನಾ ಕಾರ್ಯದರ್ಶಿ ಆರ್‌.ಎಸ್ ಭಾರತಿ ಅವರು ಇಂದು (ಮಾ.20) ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ, ಮಾದರಿ ನೀತಿ ಸಂಹಿತೆ ಉಲ್ಲಂಘಣೆಗೆ ಸಂಬಂಧಪಟ್ಟಂತೆ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು 48 ಗಂಟೆಗಳ ಒಳಗೆ ವರದಿ ನೀಡಬೇಕು ಎಂದು ಆದೇಶಿಸಿದೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶೋಭಾ ಕರಂದ್ಲಾಜೆ, “ತರಬೇತಿ ಪಡೆದು ತಮಿಳುನಾಡಿನಿಂದ ಬರುತ್ತಾರೆ. ಇಲ್ಲಿ ಬಂದು ಬಾಂಬ್ ಹಾಕುತ್ತಾರೆ. ತಮಿಳುನಾಡಿನಿಂದ ಬಂದ ವ್ಯಕ್ತಿಯೊಬ್ಬ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದ. ದೆಹಲಿಯಿಂದ ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ. ಕೇರಳದಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ಎರಚಿದ್ದ” ಎಂದು ಹೇಳಿದ್ದರು.

ಇದನ್ನೂ ಓದಿ : ‘ಕೆಫೆ ಸ್ಫೋಟದ ಹಿಂದೆ ತಮಿಳರು’ ಹೇಳಿಕೆ: ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಮಧುರೈನಲ್ಲಿ ಎಫ್‌ಐಆರ್ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...