Homeಮುಖಪುಟಕಾಂಗ್ರೆಸ್‌ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚುನಾವಣಾ ಆಯೋಗ

ಕಾಂಗ್ರೆಸ್‌ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚುನಾವಣಾ ಆಯೋಗ

- Advertisement -
- Advertisement -

ಬಿಜೆಪಿ ಸಂಸದೆಯ ವಿರುದ್ಧದ ಅವಹೇಳನಾಕಾರಿ ಹೇಳಿಕೆ ಆರೋಪದಲ್ಲಿ ಕಾಂಗ್ರೆಸ್‌ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿ ಚುನಾವಣಾ ಆಯೋಗ ಆದೇಶವನ್ನು ಹೊರಡಿಸಿದೆ. ಚುನಾವಣಾ ಆಯೋಗದ ಈ ಕ್ರಮವು ಸಮರ್ಥನೀಯವೇ ಆಗಿದೆ, ಆದರೆ ದೇಶದ ಸಂವಿಧಾನದ ಬದಲಾವಣೆ ಬಗ್ಗೆ ಹೇಳಿಕೆಯನ್ನು ನೀಡಿರುವ ಬಿಜೆಪಿ ನಾಯಕರ ಬಗ್ಗೆ ಚುನಾವಣಾ ಆಯೋಗ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ಲೋಕಸಭೆ ಚುನಾವಣೆ ಘೋಷಣೆ ಬಳಿಕ ನೀತಿ ಸಂಹಿತೆ ಜಾರಿ ಅವಧಿಯಲ್ಲೇ ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಮತ್ತು ಬಿಜೆಪಿಯ ಫೈಜಾಬಾದ್ ಸಂಸದ ಲಲ್ಲು ಸಿಂಗ್ ಸಂವಿಧಾನ ಬದಲಾವಣೆ ಬಗ್ಗೆ ಬಹಿರಂಗವಾಗಿ ಹೇಳಿಕೆಯನ್ನು ನೀಡಿದ್ದರು, ಅದರೆ ಚುನಾವಣಾ ಆಯೋಗ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಹರ್ಯಾಣದ ಕೈತಾಲ್‌ನ ಫರಾಲ್‌ ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೇಲೆ ಚುನಾವಣಾ ಆಯೋಗ ಈ ರೀತಿ ಕ್ರಮವನ್ನು ಕೈಗೊಂಡಿದೆ.

ಮಥುರಾದ ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಸಂಸದರ ಹೇಳಿಕೆಗೆ ಸಂಬಂಧಿಸಿದಂತೆ ಸುರ್ಜೇವಾಲಾ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಈ ಮೊದಲು ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದ ಬಳಿಕ ಚುನಾವಣಾ ಸಮಿತಿ ಈ ನಿರ್ಧಾರ ಕೈಗೊಂಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಸುರ್ಜೇವಾಲಾ ಅವರು, ‘ಜನರು ತಮ್ಮ ಶಾಸಕರು/ಸಂಸದರನ್ನು ಏಕೆ ಆಯ್ಕೆ ಮಾಡುತ್ತಾರೆ? ಶಾಸಕರು/ಸಂಸದರು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕೆಂದು, ಹೇಮಾ ಮಾಲಿನಿಯಂತೆ ‘ನೆಕ್ಕಲು’ ಅಲ್ಲ’ ಎಂದು ಹೇಳಿದ್ದರು. ಆಪಾದಿತ ಹೇಳಿಕೆಯು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಬಿಜೆಪಿ ಇದನ್ನು ಮಹಿಳೆಯರ ಘನತೆಗೆ ಅಗೌರವ ಉಂಟು ಮಾಡಿದೆ ಎಂದು ಆರೋಪಿಸಿತ್ತು. ಕಾರ್ಯಕ್ರಮವೊಂದರಲ್ಲಿ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸುರ್ಜೇವಾಲಾ ಅವರು ಹೇಮಾ ಮಾಲಿನಿ ಕುರಿತಾಗಿ ನೀಡಿರುವ ಹೇಳಿಕೆ ಕುರಿತಾದ ವಿಡಿಯೊವನ್ನು ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ, ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದರು. ಆ ಬಳಿಕ ಉಭಯ ಪಕ್ಷಗಳ ನಾಯಕರ ನಡುವೆ ಭಾರಿ ರಾಜಕೀಯ ಕೆಸರೆರಚಾಟ ನಡೆದಿತ್ತು.

ಸುರ್ಜೇವಾಲಾ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಚುನಾವಣಾ ಆಯೋಗವು ಏಪ್ರಿಲ್ 9ರೊಳಗೆ ಸುರ್ಜೆವಾಲಾ ಅವರಿಂದ ಉತ್ತರವನ್ನು ಕೇಳಿತ್ತು.

ಇದನ್ನು ಓದಿ: ತೆಲಂಗಾಣದ ರೈತರಿಗೆ ಅಭಯ ನೀಡಿದ ಸಿಎಂ ರೇವಂತ್‌ ರೆಡ್ಡಿ: ಕಾಂಗ್ರೆಸ್‌ ಸರಕಾರದಿಂದ 2 ಲಕ್ಷದವರೆಗಿನ ರೈತರ ಕೃಷಿ ಸಾಲಮನ್ನಾ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ...