Homeಮುಖಪುಟಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

- Advertisement -
- Advertisement -

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆ ಏಪ್ರಿಲ್ 19ರಂದು ಬೆಳಿಗ್ಗೆ 7ರಿಂದ ಜೂನ್ 1ರ ಸಂಜೆ 6.30ರವರೆಗೆ ಸಮೀಕ್ಷೆಗಳನ್ನು ನಡೆಸುವುದು ಮತ್ತು ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಪ್ರಕಟಿಸುವುದನ್ನು ನಿಷೇಧಿಸಿ ಚುನಾವಣಾ ಆಯೋಗ ಆದೇಶವನ್ನು ಹೊರಡಿಸಿದೆ.

ವಿಶೇಷ ಮುಖ್ಯ ಚುನಾವಣಾ ಅಧಿಕಾರಿ ರಾಜೇಶ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದು,  ವಿದ್ಯುನ್ಮಾನ ಮಾದ್ಯಮ, ಪತ್ರಿಕಾ ಮಾದ್ಯಮ, ರೆಡಿಯೋ ಸೇರಿದಂತೆ ಯಾವುದೇ ಮಾದ್ಯಮಗಳು ಯಾವುದೇ ರೀತಿಯಲ್ಲಿ ಸಮೀಕ್ಷೆಗಳನ್ನು ನಡೆಸುವುದು ಮತ್ತು ಅವುಗಳ ಫಲಿತಾಂಶಗಳನ್ನು ಸಾರ್ವಜನಿಕರಿಗೆ ಪ್ರಕಟಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಮತ್ತು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆ ಚುನಾವಣೆಗಳು (ಎಸ್‌ಎಲ್‌ಎ) ಮತ್ತು ಬಿಹಾರ, ಗುಜರಾತ್, ಹರಿಯಾಣ, ಜಾರ್ಖಂಡ್, ಮಹಾರಾಷ್ಟ್ರ, ತ್ರಿಪುರ, ಉತ್ತರಪ್ರದೇಶದ ಉಪ ಚುನಾವಣೆಗಳ ವೇಳಾಪಟ್ಟಿಯನ್ನು ಮಾರ್ಚ್ 16ರಂದು ಚುನಾವಣಾ ಆಯೋಗ ಘೋಷಿಸಿತ್ತು.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು (ಆರ್.ಪಿ. ಆಕ್ಟ್) ಉಲ್ಲೇಖಿಸಿ ಚುನಾವಣಾ ಆಯೋಗವು,  ಏಪ್ರಿಲ್ 19ರಂದು ಬೆಳಿಗ್ಗೆ 7.00ರಿಂದ ಜೂನ್ 1ರಂದು ಸಂಜೆ 6:30ರ ನಡುವಿನ ಅವಧಿಯಲ್ಲಿ ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳ ಚುನಾವಣೆಯ ಸಮೀಕ್ಷೆಯನ್ನು ನಡೆಸುವುದು ಮತ್ತು ಅವುಗಳನ್ನು ಯಾವುದೇ ಮಾದ್ಯಮಗಳ ಮೂಲಕ ಪ್ರಕಟಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ, ಅಭಿಪ್ರಾಯ ಸಂಗ್ರಹ, ಫಲಿತಾಂಶಗಳು ಅಥವಾ ಇತರ ಸಮೀಕ್ಷೆಯ ಫಲಿತಾಂಶಗಳನ್ನು ಯಾವುದೇ ಮಾಧ್ಯಮಗಳಲ್ಲಿ ಪ್ರಕಟಿಸುವುದನ್ನು ನಿಷೇಧಿಸಿದೆ. ಲೋಕಸಭಾ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1ರ ನಡುವೆ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಅವಧಿಯಲ್ಲಿ ಕೆಲ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಗಳು ನಡೆಯಲಿದೆ.

ಇದನ್ನು ಓದಿ: ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

0
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಲ್ಲಿ ಶಾಲಾ ಆಡಳಿತ ಮಂಡಳಿ ರಾಜೀನಾಮೆ...