Homeಮುಖಪುಟಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

ಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ‘ಕೆಳಮಟ್ಟದ ವೈಯಕ್ತಿಕ ಟೀಕೆ’ಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿ, ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಮಹಿಳೆಯರ ಘನತೆ ಮತ್ತು ಗೌರವವನ್ನು ಪ್ರಶ್ನಿಸುವ ಯಾವುದೇ ಟೀಕೆಗಳನ್ನು ಮಾಡಬಾರದು ಎಂದು ಅಭಿಜಿತ್ ಗಂಗೋಪಾಧ್ಯಾಯಗೆ ನಿರ್ದೇಶನವನ್ನು ನೀಡಲು ಬಿಜೆಪಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗ ಇದೇ ವೇಳೆ ಹೇಳಿದೆ. ಮೇ 15ರಂದು ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ಬಿಜೆಪಿಯ ತಮ್ಲುಕ್ ಕ್ಷೇತ್ರದ ಅಭ್ಯರ್ಥಿಯ ಟೀಕೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಆಯೋಗವು ಸೋಮವಾರ ಸಂಜೆಯೊಳಗೆ ಗಂಗೋಪಾಧ್ಯಾಯ ಅವರ ಪ್ರತಿಕ್ರಿಯೆಯನ್ನು ಕೇಳಿತ್ತು. ಅವರ ಪ್ರತಿಕ್ರಿಯೆ ಪಡೆದ ಬಳಿಕ ಈ ಆದೇಶವನ್ನು ನೀಡಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರಂತಹ ಶೈಕ್ಷಣಿಕ ಮತ್ತು ವೃತ್ತಿಪರ ಹಿನ್ನೆಲೆಯ ವ್ಯಕ್ತಿಯಿಂದ ಅಸಹ್ಯಕರ ಮಾತುಗಳು ಬಂದಿವೆ ಎಂಬ ಅಂಶವನ್ನು ಆಯೋಗವು ನೋವಿನಿಂದ ಗಮನಿಸುತ್ತದೆ. ಮಹಿಳೆಯರಿಗೆ ಗೌರವ ನೀಡುವ ವಿಶಿಷ್ಟ ಸಂಪ್ರದಾಯವನ್ನು ಹೊಂದಿರುವ ಪ.ಬಂಗಾಳಕ್ಕೆ  ಅವರು ಅಪಖ್ಯಾತಿ ತಂದಿದ್ದಾರೆ ಎಂದು ಚುನಾವಣಾ ಅಯೋಗವು ಗಮನಿಸಿದೆ.

ಗಂಗೋಪಾಧ್ಯಾಯ ಅವರು ಕೋಲ್ಕತ್ತಾ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿದ್ದಾಗ ತೃಣಮೂಲ ಕಾಂಗ್ರೆಸ್ ಅವರನ್ನು ವ್ಯಾಪಕವಾಗಿ ಟೀಕಿಸಿತ್ತು. ಇತ್ತೀಚೆಗಷ್ಟೇ ನ್ಯಾಯಾಧೀಶರ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಮಹಿಳೆಯರ ಗೌರವ ಮತ್ತು ಘನತೆಗೆ ಚ್ಯುತಿ ತರುವಂತಹ ಯಾವುದೇ ಹೇಳಿಕೆಯನ್ನು ನೀಡದಂತೆ ಪಕ್ಷದ ಅಭ್ಯರ್ಥಿಗಳಿಗೆ ಮತ್ತು ಚುನಾವಣಾ ಪ್ರಚಾರಕರಿಗೆ ಸೂಚಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ನಿರ್ದೇಶನ ನೀಡಿರುವ ಪತ್ರವನ್ನು ಚುನಾವಣಾ ಆಯೋಗವು ಆದೇಶದಲ್ಲಿ ಉಲ್ಲೇಖಿಸಿದೆ.

ಮೇ.16ರಂದು ತಮ್ಮ ದೂರಿನಲ್ಲಿ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಡೆರೆಕ್ ಒಬ್ರೇನ್ ಗಂಗೋಪಾಧ್ಯಾಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು ಮತ್ತು ಚುನಾವಣಾ ಪ್ರಚಾರ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದರು.

ಮೇ 21ರಂದು ಸಂಜೆ 5 ರಿಂದ 24 ಗಂಟೆಗಳ ಕಾಲ ಪ್ರಚಾರವನ್ನು ಮಾಡದಂತೆ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ನಿಷೇಧ ವಿಧಿಸಲಾಗಿದೆ. ತಾಮ್ಲುಕ್ ಕ್ಷೇತ್ರಕ್ಕೆ ಮೇ 25ರಂದು ಚುನಾವಣೆ ನಡೆಯಲಿದ್ದು, ಗುರುವಾರ ಪ್ರಚಾರ ಕೊನೆಗೊಳ್ಳಲಿದೆ.

ಮೇ 15ರಂದು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಗಂಗೋಪಾಧ್ಯಾಯ, ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಗಂಗೋಪಾಧ್ಯಾಯ ಅವರು ನೋಟಿಸ್‌ಗೆ ನೀಡಿದ ಉತ್ತರವನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ. ಅವರು ಮಮತಾ ವಿರುದ್ಧ ನೀಡಿದ್ದ ಹೇಳಿಕೆಯನ್ನು ಮತ್ತೊಮ್ಮೆ ಪರಿಶೀಲಿಸಿದ್ದೇವೆ. ಮುಖ್ಯಮಂತ್ರಿ ವಿರುದ್ಧ ‘ಕೀಳುಮಟ್ಟದ ವೈಯಕ್ತಿಕ ದಾಳಿ’ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದೆ’ ಎಂದು ಆಯೋಗ ತಿಳಿಸಿದೆ.

ಇದನ್ನು ಓದಿ: ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...