Homeಮುಖಪುಟಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

- Advertisement -
- Advertisement -

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಿಹಾರದ ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವ 65 ಲಕ್ಷ ಹೆಸರುಗಳನ್ನು ಚುನಾವಣಾ ಆಯೋಗ ಸೋಮವಾರ (ಆ.18) ಬಹಿರಂಗಪಡಿಸಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಳಿಕ, ಆಗಸ್ಟ್ 1ರಂದು ಚುನಾವಣಾ ಆಯೋಗ ಬಿಹಾರದ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ ವಿವಿಧ ಕಾರಣಗಳನ್ನು ನೀಡಿ 65 ಲಕ್ಷ ಹೆಸರುಗಳನ್ನು ಕೈಬಿಟ್ಟಿತ್ತು.

ಚುನಾವಣಾ ಆಯೋಗದ ಕ್ರಮ ವಿರೋಧಿಸಿ ಹಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮತದಾರರ ಪಟ್ಟಿಯಿಂದ ಕೈ ಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅವುಗಳನ್ನು ಕೈಬಿಟ್ಟ ಕಾರಣವನ್ನು ಆಗಸ್ಟ್ 19ರೊಳಗೆ ಬಹಿರಂಗಪಡಿಸುವಂತೆ ನಿರ್ದೇಶಿಸಿತ್ತು ಮತ್ತು ಆಗಸ್ಟ್ 22ರ ಒಳಗೆ ಅನುಸರಣಾ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಚುನಾವಣಾ ಆಯೋಗವು ಎಲ್ಲಾ ಮತಗಟ್ಟೆಗಳಲ್ಲಿ ಗೈರುಹಾಜರಿ, ಸ್ಥಳಾಂತರಗೊಂಡ ಮತ್ತು ಮೃತ (ಎಎಸ್‌ಡಿ) ಮತದಾರರ ಹೆಸರುಗಳನ್ನು ಪ್ರಕಟಿಸುತ್ತಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆನ್‌ಲೈನ್‌ನಲ್ಲಿಯೂ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.

ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಪ್ರಕಾರ, ರೋಹ್ತಾಸ್, ಬೇಗುಸರಾಯ್, ಅರ್ವಾಲ್ ಮತ್ತು ಇತರ ಸ್ಥಳಗಳ ಮತಗಟ್ಟೆಗಳಲ್ಲಿ ಎಎಸ್‌ಡಿ ಪಟ್ಟಿಗಳನ್ನು ಪ್ರದರ್ಶಿಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಚುನಾವಣಾ ಆಯೋಗ ಹೇಳಿದಂತೆ ಗೈರುಹಾಜರಿ, ಸ್ಥಳಾಂತರಗೊಂಡ ಮತ್ತು ಮೃತ ಮತದಾರರ ಹೆಸರುಗಳು ಒಳಗೊಂಡಿರುವ ಪಟ್ಟಿಯನ್ನು ಪಂಚಾಯತ್ ಮಟ್ಟದ ಕಚೇರಿ ಮತ್ತು ಜಿಲ್ಲಾ ಮಟ್ಟದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಕಾರಣಗಳೊಂದಿಗೆ ಪ್ರದರ್ಶಿಸಲು ನ್ಯಾಯಾಲಯ ನಿರ್ದೇಶಿಸಿದೆ.

ಪಟ್ಟಿ ಲಭ್ಯವಿರುವ ಸ್ಥಳಗಳ ಬಗ್ಗೆ ಜನರಿಗೆ ತಿಳಿಸಲು ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ರೇಡಿಯೋಗಳ ಜೊತೆಗೆ ಸ್ಥಳೀಯ ಮತ್ತು ಇಂಗ್ಲಿಷ್ ಸೇರಿದಂತೆ ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರವನ್ನು ಮಾಡುವಂತೆ ನ್ಯಾಯಪೀಠ ಒತ್ತಿ ಹೇಳಿದೆ.

ಆಗಸ್ಟ್ 22ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದ ಪೀಠ, ಚುನಾವಣಾ ಆಯೋಗವು ತನ್ನ ನಿರ್ದೇಶನದ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ, ಪಟ್ಟಿಯಿಂದ ಕೈಬಿಡಲಾದ 65 ಲಕ್ಷ ಮತದಾರರ ಪೈಕಿ 22.34 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ, 36.28 ಲಕ್ಷ ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಪರಿಶೀಲನೆಯ ವೇಳೆ ಗೈರುಹಾಜರಾದವರು ಮತ್ತು 7.01 ಲಕ್ಷ ಜನರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ದಾಖಲಾಗಿತ್ತು ಎಂದಿದೆ.

ಮತಗಳ್ಳತನ ಆರೋಪ| ಪ್ರಮಾಣಪತ್ರ ಸಲ್ಲಿಸಲು ಅನುರಾಗ್ ಠಾಕೂರ್‌ಗೆ ಏಕೆ ಕೇಳಿಲ್ಲ: ಚು. ಆಯೋಗಕ್ಕೆ ರಾಹುಲ್ ಗಾಂಧಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...