Homeಮುಖಪುಟಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ...

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

- Advertisement -
- Advertisement -

‘ಮತಗಳ್ಳತನದ’ ಆರೋಪಗಳಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಯನ್ನು ಭಾನುವಾರ ತೀವ್ರವಾಗಿ ಟೀಕಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿ, “ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ ಭಾಷೆಯಲ್ಲಿ ಕಿರುಚಾಡುವ ಬದಲು, ಅವರ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ಮತಗಳ್ಳತನದ ಕುರಿತು ಹೈಡ್ರೋಜನ್ ಬಾಂಬ್ ಶೀಘ್ರದಲ್ಲೇ ಬರಲಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ, ಅದೊಂದು ‘ರಾಜಕೀಯ ವಾಕ್ಚಾತುರ್ಯ’. ಆದರೆ, ಅವರು ಮಾಡಿರುವ ಆರೋಪಗಳು ಗಂಭೀರವಾದದ್ದು. ಅವುಗಳ ಬಗ್ಗೆ ಸೂಕ್ತವಾದ ತನಿಖೆಯ ನಡೆಯಬೇಕು ಎಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಖುರೈಶಿ ತಿಳಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ನಡೆಸಿದ ವಿಧಾನದ ಬಗ್ಗೆ ಖುರೈಶಿ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಅದು (ಚು. ಆಯೋಗ) ‘ಪಂಡೋರಾ ಪೆಟ್ಟಿಗೆ’ಯನ್ನು ತೆರೆಯುತ್ತಿದೆ. ಮಾತ್ರವಲ್ಲದೆ, ‘ಕಣಜದ ಗೂಡಿಗೆ’ ಕೈ ಹಾಕಿದೆ. ಈ ಪ್ರಕ್ರಿಯೆ ಅದಕ್ಕೇ (ಚು. ಆಯೋಗಕ್ಕೆ) ಹಾನಿ ಮಾಡಲಿದೆ ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವನ್ನು ಟೀಕಿಸುವುದು ನೋಡುವಾಗ ನನಗೆ ತುಂಬಾ ನೋವುಂಟಾಗುತ್ತದೆ. ಏಕೆಂದರೆ, ನಾನೊಬ್ಬ ಭಾರತ ನಾಗರಿಕನಾಗಿ, ಮುಖ್ಯ ಚುನಾವಣಾ ಆಯುಕ್ತನಾಗಿ ಆ ಸಂಸ್ಥೆಯ ಉನ್ನತಿಗಾಗಿ ಒಂದೆರಡು ಇಟ್ಟಿಗೆಗಳನ್ನು ಇಟ್ಟಿದ್ದೇನೆ ಎಂದು ಜಗ್ಗರ್ನಾಟ್ ಬುಕ್ಸ್ ಪ್ರಕಟಿಸಿದ ತಮ್ಮ ಹೊಸ ಪುಸ್ತಕ ‘ಡೆಮಾಕ್ರಸೀಸ್ ಹಾರ್ಟ್‌ಲ್ಯಾಂಡ್’ ಬಿಡುಗಡೆಗೆ ಮುಂಚಿತವಾಗಿ ಖುರೈಶಿ ಪಿಟಿಐಗೆ ತಿಳಿಸಿದ್ದಾರೆ.

“ಚುನಾವಣಾ ಆಯೋಗ ದಾಳಿಗೆ ಒಳಗಾಗುವುದು ಅಥವಾ ಯಾವುದೇ ರೀತಿಯಲ್ಲಿ ದುರ್ಬಲಗೊಂಡಿರುವುದನ್ನು ನೋಡಿದಾಗ ನನಗೆ ಕಳವಳವಾಗುತ್ತದೆ. ಈ ಬಗ್ಗೆ ಆಯೋಗ ಸ್ವತಃ ಆತ್ಮಾವಲೋಕನ ಮಾಡಿಕೊಳ್ಳಬೇಕು. ತನ್ನ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಎಲ್ಲಾ ಶಕ್ತಿಗಳು ಮತ್ತು ಒತ್ತಡಗಳನ್ನು ಎದುರಿಸುವುದು ಆಯೋಗದ ಜವಾಬ್ದಾರಿಯಾಗಿದೆ” ಎಂದು 2010 ಮತ್ತು 2012 ರ ನಡುವೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಖುರೈಶಿ ಹೇಳಿದ್ದಾರೆ.

“ಆಯೋಗವು ಜನರ ವಿಶ್ವಾಸವನ್ನು ಗೆಲ್ಲಬೇಕು. ವಿರೋಧ ಪಕ್ಷಗಳ ವಿಶ್ವಾಸವೂ ಬೇಕು. ನಾನು ಯಾವಗಲೂ ವಿರೋಧ ಪಕ್ಷಗಳಿಗೆ ಆದ್ಯತೆ ನೀಡುತ್ತಿದ್ದೆ. ಏಕೆಂದರೆ, ಅವರು ದುರ್ಬಲರು. ವಿರೋಧ ಪಕ್ಷವು ಅಧಿಕಾರದಿಂದ ಹೊರಗುಳಿದಿರುವುದರಿಂದ ಅಧಿಕಾರದಲ್ಲಿರುವ ಪಕ್ಷಕ್ಕೆ ಅದರಷ್ಟು ಮುದ್ದು ಅಗತ್ಯವಿಲ್ಲ ಎಂದು ಖುರೈಶಿ ಅಭಿಪ್ರಾಯಪಟ್ಟಿದ್ದಾರೆ.

“ನಾನು ಮುಖ್ಯ ಚುನಾವಣಾ ಆಯುಕ್ತ ಆಗಿದ್ದಾಗ ವಿರೋಧ ಪಕ್ಷಗಳಿಗೆ ಆಯೋಗದ ಬಾಗಿಲು ತೆರೆದಿಡಿ. ಅವರಿಗೆ ತಕ್ಷಣ ಅಪಾಯಿಂಟ್‌ಮೆಂಟ್ ಕೊಡಿ. ಅವರ ಮಾತನ್ನು ಆಲಿಸಿ, ಅವರೊಂದಿಗೆ ಮಾತನಾಡಿ, ಅವರಿಗೆ ಏನಾದರು ಸಣ್ಣ ಸಹಾಯ ಬೇಕಾದರೆ, ಬೇರೆಯವರಿಗೆ ಹಾನಿಯಾಗದಿದ್ದರೆ ಅದನ್ನು ಮಾಡಿ” ಎಂದು ನನ್ನ ಸಿಬ್ಬಂದಿಗೆ ಸೂಚಿಸಿದ್ದೆ” ಎಂದು ಖುರೈಶಿ ಹೇಳಿದ್ದಾರೆ.

ಇಲ್ಲಿ ವಿರೋಧ ಪಕ್ಷಗಳು ಆಗಾಗ ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ವಾಸ್ತವವಾಗಿ, 23 ಪಕ್ಷಗಳು ತಮಗೆ ಅಪಾಯಿಂಟ್‌ಮೆಂಟ್ ಸಿಗುತ್ತಿಲ್ಲ ಮತ್ತು ಯಾರೂ ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಹೇಳಬೇಕಾಗಿ ಬಂದಿದೆ. ರಾಹುಲ್ ಗಾಂಧಿಯವರ ಆರೋಪಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕೇಳುವ ಬದಲು, ಚುನಾವಣಾ ಆಯೋಗ ತನಿಖೆಗೆ ಆದೇಶಿಸಬೇಕಿತ್ತು ಎಂದಿದ್ದಾರೆ.

“ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ, ಬೀದಿಯಲ್ಲಿ ಹೋಗುವ ವ್ಯಕ್ತಿಯಲ್ಲ. ಅವರ ಆರೋಪಗಳ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು. ಬದಲಾಗಿ, ಅವರ ವಿರುದ್ದವೇ ಕಿರುಚಾಡುವುದಲ್ಲ. ಚುನಾವಣಾ ಆಯೋಗ ನಡೆದುಕೊಳ್ಳುವ ರೀತಿ ಇದಲ್ಲ” ಎಂದು ಖುರೈಶಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಲಕ್ಷಾಂತರ ಜನರನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಲಕ್ಷಾಂತರ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ವ್ಯಕ್ತಿಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗ ಸೂಚಿಸಿದ ರೀತಿ, ಬಳಸಿದ ಭಾಷೆ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿಯಾಗಿದೆ’ ಎಂದು ಖುರೈಶಿ ಹೇಳಿದ್ದಾರೆ.

ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...