Homeಮುಖಪುಟಯೂಟರ್ನ್ ಹೊಡೆದ ಚುನಾವಣಾ ಆಯೋಗ : SIR ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ...

ಯೂಟರ್ನ್ ಹೊಡೆದ ಚುನಾವಣಾ ಆಯೋಗ : SIR ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವು

- Advertisement -
- Advertisement -

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವಾಗಿದೆ. ಎಸ್‌ಐಆರ್ ವೇಳೆ ಡಿಲೀಟ್ ಪಟ್ಟಿಗೆ (ಎಎಸ್‌ಡಿಡಿ) ಬಿದ್ದ ಅರ್ಹ ಮತದಾರರು ತಮ್ಮ ಹಕ್ಕು ಮರಳಿ ಪಡೆಯಲು ಫಾರಂ-6 ಭರ್ತಿ ಮಾಡಲೇಬೇಕು ಎಂಬ ವಾದವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಬದಲಿಸಿದೆ.

ಶುಕ್ರವಾರ (ನ.6) ದೆಹಲಿ ಎನ್‌ಸಿಟಿ, ಮಹಾರಾಷ್ಟ್ರ, ಹರಿಯಾಣ, ಆಂಧ್ರಪ್ರದೇಶ, ಜಾರ್ಖಂಡ್, ತೆಲಂಗಾಣ ಮತ್ತು ನಾಗಾಲ್ಯಾಂಡ್‌ ರಾಜ್ಯಗಳ ಮುಖ್ಯ ಚುನಾವಣಾ ಆಯುಕ್ತರಿಗೆ ಆದೇಶವೊಂದನ್ನು ಹೊರಡಿಸಿರುವ ಭಾರತೀಯ ಚುನಾವಣಾ ಆಯೋಗ, ಎಎಸ್‌ಡಿಡಿ ಪಟ್ಟಿಗೆ ಬಿದ್ದಿರುವ ಅರ್ಹ ಮತದಾರರನ್ನು ಮರಳಿ ಕರೆತರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ವಾಸಸ್ಥಳ ಬದಲಾಯಿಸಿದ ಕಾರಣದಿಂದಾಗಿ ಎಎಸ್‌ಡಿಡಿ ಪಟ್ಟಿಗೆ ಬಿದ್ದಿರುವ ಮತದಾರರು, ತಮ್ಮ ಹೊಸ ವಿಳಾಸದ ವಿವರಗಳನ್ನು ಒಳಗೊಂಡಿರುವ ಹೇಳಿಕೆಯೊಂದಿಗೆ (ಸ್ಟೇಟ್‌ಮೆಂಟ್) ಗಣತಿ ನಮೂನೆಯನ್ನು (ಎನ್ಯೂಮರೇಶನ್ ಫಾರಂ) ಭರ್ತಿ ಮಾಡಿ ಸಲ್ಲಿಸಬಹುದು. ಮನೆ ಇಲ್ಲದ (ನಿರಾಶ್ರಿತ) ವ್ಯಕ್ತಿಗಳಾಗಿದ್ದರೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ನಡೆಸುವ ಸ್ಥಳ ಪರಿಶೀಲನೆಯೇ ಸಾಕಾಗುತ್ತದೆ ಎಂದು ಚುನಾವಣಾ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.

ನಿಗದಿತ ಗಡುವಿನೊಳಗೆ ತಮ್ಮ ಗಣತಿ ನಮೂನೆಯನ್ನು (ಎನ್ಯೂಮರೇಶನ್ ಫಾರಂ) ಸಲ್ಲಿಸಲು ಸಾಧ್ಯವಾಗದೆ ಎಎಸ್‌ಡಿಡಿ ಪಟ್ಟಿಗೆ ಬಿದ್ದಿರುವ ಮತದಾರರು, ಈ ಮೊದಲು ಫಾರಂ ಸಲ್ಲಿಸಲು ಸಾಧ್ಯವಾಗಿಲ್ಲ ಎಂಬುದಕ್ಕೆ ಕಾರಣವನ್ನು ವಿವರಿಸುವ ಹೇಳಿಕೆಯೊಂದಿಗೆ (ಸ್ಟೇಟ್‌ಮೆಂಟ್) ಈಗ ತಮ್ಮ ಗಣತಿ ನಮೂನೆಯನ್ನು ಸಲ್ಲಿಸಬಹುದು ಎಂದು ಹೇಳಿದೆ.

ಸೂಕ್ತವಾದ ಹೇಳಿಕೆಯೊಂದಿಗೆ (ಸ್ಟೇಟ್‌ಮೆಂಟ್) ಈಗ ಗಣತಿ ನಮೂನೆಯನ್ನು (ಎನ್ಯೂಮರೇಶನ್ ಫಾರಂ) ಭರ್ತಿ ಮಾಡುವ ಎಎಸ್‌ಡಿಡಿ ಪಟ್ಟಿಯಲ್ಲಿರುವ ಎಲ್ಲರಿಗೂ ಅವರ ಹಳೆಯ ಎಪಿಕ್ (ಮತದಾರರ ಗುರುತಿನ ಚೀಟಿ) ಸಂಖ್ಯೆಯನ್ನೇ ಮರು-ಹಂಚಿಕೆ ಮಾಡಲಾಗುವುದು. ಅಂತಹ ಎಲ್ಲಾ ಪ್ರಕರಣಗಳನ್ನು ಸೂಕ್ತ ಪರಿಶೀಲನೆಯ ನಂತರ ಅಂತಿಮ ಮತದಾರರ ಪಟ್ಟಿಯಲ್ಲಿ ಸೇರಿಸಲು ಕಾಯ್ದಿರಿಸಲಾಗುವುದು ಎಂದಿದೆ.

ಇದುವರೆಗೆ, ಈ ಹಿಂದೆ ಮತದಾರರಾಗಿದ್ದರೂ..ಎಸ್‌ಐಆರ್ ವೇಳೆ ವಿವಿಧ ಕಾರಣಗಳಿಗೆ ಡಿಲೀಟ್ ಪಟ್ಟಿಗೆ (ಎಎಸ್‌ಡಿಡಿ ಅಥವಾ ಎಎಸ್‌ಡಿಡಿಒ) ಬಿದ್ದ ಮತದಾರರು ತಮ್ಮ ಹಕ್ಕು ಮರಳಿ ಪಡೆಯಲು ಹೊಸ ಮತದಾರರ ನೋಂದಣಿಗೆ ಇರುವ ಫಾರಂ-6 ಭರ್ತಿ ಮಾಡಬೇಕು ಎಂದು ಚುನಾವಣಾ ಆಯೋಗ ಹಠ ಹಿಡಿದು ಕುಳಿತಿತ್ತು. ಇದೇ ವಾದವನ್ನು ಹಲವು ಬಾರಿ ನ್ಯಾಯಾಲಯಗಳ ಮುಂದಿಟ್ಟು ಸಮರ್ಥಿಸಿಕೊಂಡಿತ್ತು.

ಆದರೆ, ದೆಹಲಿ ಎಸ್‌ಐರ್‌ಗೆ ಸಂಬಂಧಪಟ್ಟಂತೆ ಫಾರಂ-6 ಸಲ್ಲಿಸುವ ಕುರಿತು ಅ.28ರಂದು ಸುಪ್ರೀಂ ಕೋರ್ಟ್ ಮಾಡಿರುವ ಅವಲೋಕನದ ಬಳಿಕ ಆಯೋಗ ಮಣಿದಂತಿದೆ. ಅಂಜಲಿ ಭಾರದ್ವಾಜ್ ಮತ್ತು ಅಮೃತಾ ಜೋಹ್ರಿ ದೆಹಲಿ ಎಸ್‌ಐಆರ್‌ಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರ ನಡೆಸುತ್ತಿದ್ದಾರೆ.

ಬಾಂಬೆ ಹೈಕೋರ್ಟ್ ಕೂಡ ಈಗಾಗಲೇ ಮತದಾರರಾಗಿದ್ದವರು ಫಾರಂ-6 ಭರ್ತಿ ಮಾಡಲೇಬೇಕು ಎಂಬ ಆಯೋಗದ ವಾದವನ್ನು ತಿರಸ್ಕರಿಸಿದೆ. ಫಾರಂ-6 ಸಲ್ಲಿಸದ ಕಾರಣಕ್ಕೆ ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದ ಗೋವಾದ ಸಾಂತಾಕ್ರೂಝ್‌ನ ಒಂದೇ ಕುಟುಂಬದ 6 ಮಂದಿಯನ್ನು ಮರು ಸೇರ್ಪಡೆಗೊಳಿಸುವಂತೆ ಸೂಚಿಸಿದೆ.

ಈ ಬೆನ್ನಲ್ಲೇ ಚುನಾವಣಾ ಆಯೋಗ 7 ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಶುಕ್ರವಾರ ಆದೇಶ ಹೊರಡಿಸಿದೆ. ಈ ಮೂಲಕ ಹೋರಾಟಗಾರರು ಆರಂಭದಿಂದಲೂ ಮುಂದಿಟ್ಟುಕೊಂಡು ಬಂದಿದ್ದ ಬೇಡಿಕೆ ಆಯೋಗ ಮಣಿದಿದೆ.

ಚುನಾವಣಾ ಆಯೋಗ ಎಸ್‌ಐಅರ್ ವೇಳೆ ಹಲವು ಅವಾಂತರಗಳನ್ನು ಮಾಡಿತ್ತು. ಅದರಲ್ಲಿ ಫಾರಂ-6 ಗೆ ಸಂಬಂಧಪಟ್ಟಂತೆ ಸಂಪೂರ್ಣವಾಗಿ ನಿಯಮಗಳನ್ನು ಉಲ್ಲಂಘಿಸಿ ಬದಲಾವಣೆಗಳನ್ನು ಮಾಡಿತ್ತು.

ಆರಂಭದಲ್ಲಿ ಆನ್‌ಲೈನ್‌ ಫಾರಂ-6ನಲ್ಲಿ ಎಸ್‌ಐಆರ್‌ನ ಮ್ಯಾಪಿಂಗ್‌ಗೆ ಸಂಬಂಧಪಟ್ಟ ಕಾಲಂ ಒಂದನ್ನು ಚುನಾವಣಾ ಆಯೋಗ ಸದ್ದಿಲ್ಲದೆ ಸೇರಿಸಿತ್ತು. ವಿರೋಧಗಳು ವ್ಯಕ್ತವಾದಾಗ ಅದನ್ನು ಕೈಬಿಟ್ಟಿತು. ನಂತರ ಹೆಚ್ಚುವರಿ ಘೋಷಣಾ ಪತ್ರವನ್ನು ಕಡ್ಡಾಯಗೊಳಿಸಿತು. ಸುಪ್ರೀಂ ಕೋರ್ಟ್‌ ಇದರ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ ಬಳಿಕ, ಮೊದಲು ಎಸ್‌ಐಆರ್ ಪೂರ್ಣಗೊಂಡ ರಾಜ್ಯಗಳು, ನಂತರ ಎಸ್‌ಐಆರ್ ನಡೆಯುತ್ತಿರುವ ರಾಜ್ಯಗಳಲ್ಲೂ ಘೋಷಣಾ ಪತ್ರವನ್ನು ಆಯೋಗ ವಾಪಾಸ್ ಪಡೆಯಿತು. ಇನ್ನು ಫಾರಂ-7,8 ಬಗ್ಗೆಯೂ ಸುಪ್ರೀಂ ಕೋರ್ಟ್, ಬಾಂಬೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ಅಂಜಲಿ ಭಾರದ್ವಾಜ್ ಸೇರಿದಂತೆ ಜನಪರ ಸಂಘಟನೆಗಳ ಹೋರಾಟಗಾರರು ಫಾರಂ-6ರಲ್ಲಿನ ಬದಲಾವಣೆ ಸೇರಿದಂರೆ ಚುನಾವಣಾ ಆಯೋಗ ನಿಯಮ ಮೀರಿ ತೆಗೆದುಕೊಳ್ಳುತ್ತಿದ್ದ ನಿರ್ಧಾರಗಳನ್ನು ಆರಂಭದಿಂದಲೇ ವಿರೋಧಿಸಿಕೊಂಡು ಬಂದಿದ್ದರು. ಹಾಗಾಗಿ, ಈಗ ಚುನಾವಣಾ ಆಯೋಗ ಯೂಟರ್ನ್ ಹೊಡೆದರೆ ಅದರ ಸಂಪೂರ್ಣ ಶ್ರೇಯಸ್ಸು ಈ ಹೋರಾಟಗಾರರಿಗೆ ಸಲ್ಲಬೇಕಾಗುತ್ತದೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯನ್ನು ಗೊಂದಲಕ್ಕೀಡುಮಾಡಬೇಡಿ, ನನ್ನೊಂದಿಗೆ ಬಹಿರಂಗ ಚರ್ಚೆಗೆ ಒಪ್ಪಿಸಿ!’: ಅಮಿತ್ ಷಾಗೆ ರಾಹುಲ್ ಗಾಂಧಿ ಆಗ್ರಹ!

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೊಂದಲಕ್ಕೀಡುಮಾಡುವ ಬದಲು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಇವಿಎಂ ಕುರಿತು ತಮ್ಮೊಂದಿಗೆ ಬಹಿರಂಗ ಚರ್ಚೆಗೆ...

‘ಅಮೆರಿಕ ಅಧ್ಯಕ್ಷರ ಹತ್ಯೆ ಮಾಡುವಂತೆ ಧ್ವನಿ ಕೇಳಿಸುತ್ತಿತ್ತು’: ವೈಟ್ ಹೌಸ್ ಬಳಿ ಮಾರಕಾಸ್ತ್ರಗಳಿದ್ದ ಕಾರಿನೊಂದಿಗೆ ವೆನಿಜುವೆಲ್ಲಾ ಪ್ರಜೆ ಬಂಧನ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ 26 ವರ್ಷದ ರೋನಿ ಯೋರ್ಡ್ರಿಕ್ಸ್ ಗುವಾನಿಪಾ ಚ್ರಿನೋಸ್ ಎಂಬ ವೆನಿಜುಎಲ್ಲಾ ಮೂಲದ ವಲಸಿಗನನ್ನು ಯುಎಸ್ ಸೀಕ್ರೆಟ್ ಸರ್ವಿಸ್...

‘E20 turned into 420’ : ಕರ್ನಾಟಕ ಸರ್ಕಾರದ ಪರಿಶೀಲನೆಯಲ್ಲಿ ಬಯಲಾದ ‘ಪೆಟ್ರೋಲ್ ಚೋರಿ’; ಕೇಂದ್ರದ ವಿರುದ್ಧ ಜನಾಕ್ರೋಶ

E20 ಹೆಸರಿನಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್‌ನಲ್ಲಿ ಶೇಕಡ 30ಕ್ಕಿಂತ (31.2) ಅಧಿಕ ಎಥೆನಾಲ್ ಇರುವುದು ಕರ್ನಾಟಕ ಸರ್ಕಾರದ ನಡೆಸಿದ ಪರಿಶೀಲನೆಯಲ್ಲಿ ಬಟಾಬಯಲಾಗಿದ್ದು, ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ...

ಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಮಾಡಿದ ಕಟು...

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ : ಕೇಂದ್ರದಿಂದ ಸ್ಪಷ್ಟನೆ ಕೋರಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ ಮಟ್ಟವು...

ಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್...

ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಪಡೆಯುವುದು ಫಲಾನುಭವಿಗಳ ಹಕ್ಕಲ್ಲ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟನೆ

'ಗೃಹಲಕ್ಷ್ಮಿ' ಒಂದು ಕಲ್ಯಾಣ (ಪರೋಪಕಾರಿ) ಯೋಜನೆಯಾಗಿದ್ದು, ಇದರ ಅನುಷ್ಠಾನವು ಹೆಚ್ಚಾಗಿ ಆಡಳಿತಾತ್ಮಕ ಅಗತ್ಯತೆಗಳನ್ನು ಅವಲಂಬಿಸಿರುತ್ತದೆ. ಹಾಗಾಗಿ, ಈ ಯೋಜನೆಯ ಫಲಾನುಭವಿಗಳು ಇದನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸಲು ಸಾಧ್ಯವಿಲ್ಲ ಮತ್ತು ನ್ಯಾಯಾಂಗದ ಹಸ್ತಕ್ಷೇಪದ...

ಇನ್ಮುಂದೆ ಸರ್ಕಾರಿ ಯೋಜನೆಗಳ ಅರ್ಹತೆಗೆ ‘ಆಧಾರ್’ ಬದಲು ‘ವೋಟರ್ ಐಡಿ’?: ಕೇಂದ್ರ ಸಚಿವರ ಹೇಳಿಕೆಗೆ ರಾಹುಲ್ ಗಾಂಧಿ ತೀವ್ರ ಆಕ್ರೋಶ!

ಕೇಂದ್ರ ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಹಾಗೂ ಪಾವತಿ ಪ್ರಕ್ರಿಯೆಗಳನ್ನು ನಡೆಸಲು ಇನ್ಮುಂದೆ ಆಧಾರ್ ಕಾರ್ಡ್ ಬದಲು 'ವೋಟರ್ ಐಡಿ' (ಮತದಾರರ ಗುರುತಿನ ಚೀಟಿ) ಹಾಗೂ ಬಯೋಮೆಟ್ರಿಕ್ ಪರಿಶೀಲನೆಯನ್ನು ಆಧಾರವಾಗಿ ಬಳಸಲಾಗುವುದು...

AMU ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆಯಾದ ನಶ್ರಾ ನಯೀಮ್ : ಮೊದಲ ಬಾರಿಗೆ ಉನ್ನತ ಹುದ್ದೆಗೆ ಮಹಿಳೆ ಆಯ್ಕೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (AMUSU) 105 ವರ್ಷಗಳ ಇತಿಹಾಸದಲ್ಲೇ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಕಾನೂನು ವಿದ್ಯಾರ್ಥಿನಿ ನಶ್ರಾ ನಯೀಮ್ ಪಾತ್ರರಾಗಿದ್ದಾರೆ. ಶುಕ್ರವಾರ (ನ.6) ಪ್ರಕಟಗೊಂಡ ಚುನಾವಣೆಯ...

ಸ್ಥಳಾಂತರಗೊಂಡ ಮತದಾರರು ಫಾರಂ-6 ಅಥವಾ ಎಸ್‌ಐಆರ್ ಎನ್ಯುಮರೇಷನ್ ಫಾರಂ ಸಲ್ಲಿಸಿದರೆ ಸುಳ್ಳು ಘೋಷಣೆ ಮಾಡಿದಂತಾಗುತ್ತದೆ, ಕಾನೂನು ಕ್ರಮ ಎದುರಿಸಬೇಕಾದೀತು : ಬಾಂಬೆ ಹೈಕೋರ್ಟ್

ವಾಸಸ್ಥಳ ಬದಲಾಯಿಸಿದ ಅಥವಾ ಸ್ಥಳಾಂತರಗೊಂಡ ಮತದಾರರು ಕೇವಲ 'ಫಾರಂ-8' ಅನ್ನು ಮಾತ್ರ ಭರ್ತಿ ಮಾಡಬಹುದು; ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಮೊದಲೇ ಭರ್ತಿ ಮಾಡಲಾದ ಗಣತಿ ನಮೂನೆ (enumeration form)...