ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಶಾಸಕರಾಗಿ ಆಯ್ಕೆ ಆಗಲೇಬೇಕಿರುವುದರಿಂದ ಅವರು ಸ್ಪರ್ಧಿಸುವ ಭವಾನಿಪೋರ್ ಕ್ಷೇತ್ರಕ್ಕೆ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿದೆ.
ಸೆಪ್ಟಂಬರ್ 30 ರಂದು ಪಶ್ಚಿಮ ಬಂಗಾಳದ ಭವಾನಿಪೋರ್ ಸೇರಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ. ಅಕ್ಟೋಬರ್ 3 ರಂದು ಫಲಿತಾಂಶ ಘೋಷಣೆಯಾಗಲಿದೆ.
ಅಲ್ಲದೆ ಅಂದೇ ಬಂಗಾಳದ ಸಂಸರ್‌ಗಂಜ್ ಮತ್ತು ಒಡಿಶಾದ ಜಂಗೀಪುರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಆದರೆ ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗವು 34 ಕ್ಷೇತ್ರಗಳ ಉಪಚುನಾವಣೆಯನ್ನು ಕೋವಿಡ್ ಕಾರಣ ನೀಡಿ ಮುಂದೂಡಿದೆ.
ಪಶ್ಚಿಮ ಬಂಗಾಳ ರಾಜ್ಯದ ಸಾಂವಿಧಾನಿಕ ತುರ್ತುಸ್ಥಿತಿ ಮತ್ತು ವಿಶೇಷ ವಿನಂತಿಯನ್ನು ಪರಿಗಣಿಸಿ, ಎಸಿ 159 – ಭವಾನಿಪೋರ್‌ಗೆ ಉಪಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಕೋವಿಡ್ -19 ನಿಂದ ರಕ್ಷಿಸಲು ಆಯೋಗವು ಹೆಚ್ಚಿನ ಎಚ್ಚರಿಕೆಯಂತೆ ಹೆಚ್ಚು ಕಟ್ಟುನಿಟ್ಟಾದ ಕ್ರಮಗಳನ್ನು ಸೂಚಿಸಿದೆ ಎಂದು ತಿಳಿಸಿದೆ.
“ಸಂಬಂಧಿತ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆಯಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಸಹಲೆಗಳು ಮತ್ತು ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ, ಆಯೋಗವು ಇತರ 31 ವಿಧಾನಸಭಾ ಕ್ಷೇತ್ರಗಳು ಮತ್ತು 3 ಸಂಸತ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಸದಿರಲು ನಿರ್ಧರಿಸಿದೆ” ಎಂದು ಆಯೋಗ ಹೇಳಿದೆ.
ಇದನ್ನೂ ಓದಿ; ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ ‘ಗೌರಿ ನೆನಹು’ ಕಾರ್ಯಕ್ರಮ


