Homeಮುಖಪುಟಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಷ್ಟ್ರದ ಸಂಪನ್ಮೂಲಗಳನ್ನು ಬಳಸಿಕೊಂಡು ಬಿಜೆಪಿ ಪರ ವ್ಯಾಪಕ ಪ್ರಚಾರ ನಡೆಸಲು ಅನುವು ಮಾಡಿಕೊಡುವ ಉದ್ದೇಶದಿಂದ ‘ಭಾರತದ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಚುನಾವಣೆ’ಗಳನ್ನು ನಡೆಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮಾಲ್ಡಾದ ಉತ್ತರ ಟಿಎಂಸಿ ಅಭ್ಯರ್ಥಿ ಪ್ರಸೂನ್ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಮಾಲ್ಡಾ ಜಿಲ್ಲೆಯ ಗಜೋಲ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಏಪ್ರಿಲ್ 19ರಿಂದ ಜೂ.1ರವರೆಗೆ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಪ್ರತಿ ಹಂತಕ್ಕೂ ಮೊದಲು ದೇಶಾದ್ಯಂತ ವಿಶೇಷ ಸಂಚರಿಸಬಹುದು. ಹಿಂದೆ, ಮೇ ತಿಂಗಳೊಳಗೆ ಚುನಾವಣೆಗಳು ಮುಗಿಯುತ್ತಿದ್ದವು ಆದರೆ ಈ ವರ್ಷ ಮೋದಿ ಮಿಲಿಟರಿ ವಿಮಾನಗಳಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಜೂನ್ 1ರವರೆಗೆ ಅವಕಾಶ ನೀಡಲಾಗಿದೆ.  ಪ್ರತಿಪಕ್ಷಗಳು ಹೆಲಿಕಾಪ್ಟರ್ಗಳು ಸೇರಿದಂತೆ ಸ್ವಂತ ಸಾರಿಗೆ ಸೌಲಭ್ಯಗಳ ಏರ್ಪಾಡನ್ನು ಮಾಡಿಕೊಳ್ಳಬೇಕಾಗಿದೆ. ಆದರೆ ಅವುಗಳನ್ನು ಕೂಡಾ ಬಿಜೆಪಿ ನಾಯಕರು ಮುಂಗಡವಾಗಿ ಕಾದಿರಿಸಿದ್ದಾರೆ. ಹೀಗಾಗಿ ನಮಗೆ ಸ್ಪಲ್ಪ ಅವಕಾಶ ಮಾತ್ರ ದೊರೆತಿದೆ ಎಂದು ಹೇಳಿದ್ದಾರೆ.

ಬಿಸಿಲಿನ ತಾಪದಿಂದ ಜನರು ತುಂಬಾ ತೊಂದರೆಗೀಡಾಗಿದ್ದಾರೆ. ಆದರೆ ಬಿಜೆಪಿ ನಾಯಕರು ಎಲ್ಲಾ ಸೌಲಭ್ಯಗಳೊಂದಿಗೆ ವಿವಿಐಪಿ ಸೌಲಭ್ಯದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಚುನಾವಣೆ ಘೋಷಣೆಯ ನಂತರ ಉಸ್ತುವಾರಿ ಕ್ಯಾಬಿನೆಟ್ ಆಗಿದ್ದರೂ, ಚುನಾವಣಾ ಆಯೋಗವು ಆಡಳಿತ ಯಂತ್ರವನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದರೂ, ಚುನಾವಣಾ ಸಂಸ್ಥೆಯು ಮೋದಿ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ನಿರ್ದೇಶಿಸಿದಂತೆ ನಡೆಯುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, 2019ರಲ್ಲಿ ರಾಜ್ಯದಿಂದ ಚುನಾಯಿತರಾಗಿದ್ದರೂ, ಕೇಂದ್ರದಿಂದ MGNREGA ಯೋಜನೆಯ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ಅಥವಾ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳನ್ನು ನಿರ್ಮಿಸುವ ಬಗ್ಗೆ ಅವರ್ಯಾರೂ ತಲೆಕೆಡಿಸಿಕೊಂಡಿಲ್ಲ. ನಮ್ಮ (ಟಿಎಂಸಿ) ಸಂಸದರು ಕಳೆದ ವರ್ಷ ನವೆಂಬರ್‌ನಲ್ಲಿ MGNREGA ಯೋಜನೆಯ ನಿಧಿ ಬಿಡುಗಡೆಗೆ ಒತ್ತಾಯಿಸಲು ದೆಹಲಿಗೆ ಹೋದಾಗ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಲಾಯಿತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಬಡವರಿಗೆ ಏನು ಮಾಡಿದ್ದಾರೆ? ಮಾಲ್ಡಾದ ಉತ್ತರ ಬಿಜೆಪಿ ಸಂಸದ ಖಗೇನ್ ಮುರ್ಮು ರಾಜ್ಯದ ಜಾಬ್ ಕಾರ್ಡ್ ಹೊಂದಿರುವವರಿಗೆ ಏನು ಮಾಡಿದ್ದಾರೆ? ಸಿಪಿಐ(ಎಂ) ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸುತ್ತಿವೆ. ಆದ್ದರಿಂದ ಯಾವುದೇ ಟಿಎಂಸಿಯೇತರ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಜನರಿಗೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ನಾನು ಇಂಡಿಯಾ ಬ್ಲಾಕ್ ಎಂಬ ಹೆಸರನ್ನು ಹುಟ್ಟು ಹಾಕಿದ್ದೆ. ಆದರೆ ಬಂಗಾಳದಲ್ಲಿ ಇಂಡಿಯಾ ಬ್ಲಾಕ್ ಅಸ್ತಿತ್ವದಲ್ಲಿಲ್ಲ. ಅದು ರಾಜ್ಯದ ಹೊರಗೆ ಅಸ್ತಿತ್ವದಲ್ಲಿದೆ. ನಮ್ಮ ಸಂಸದೆ ಮಹುವಾ ಮೊಯಿತ್ರಾ ಅವರು ಮೋದಿ ಸರ್ಕಾರದ ತಪ್ಪುಗಳನ್ನು ಮತ್ತು ದೊಡ್ಡ ವ್ಯಾಪಾರ ಸಂಸ್ಥೆಗಳಿಗೆ ಅದರ ಸಾಮೀಪ್ಯವನ್ನು ಬಿಚ್ಚಿಟ್ಟಿದ್ದಕ್ಕಾಗಿ ಸಂಸತ್ತಿನಿಂದ ಹೊರಹಾಕಲ್ಪಟ್ಟರು. TMC ಸಂಸದರನ್ನು ಈ ಪ್ರತೀಕಾರದ ಸರ್ಕಾರ ಗುರಿಯಾಗಿಸಿದೆ. ಎನ್‌ಆರ್‌ಸಿಯಿಂದ 19 ಲಕ್ಷ ಬೆಂಗಾಲಿಗಳ ಹೆಸರನ್ನು ಕೈಬಿಟ್ಟ ನಂತರ ಮಮತಾ ಬಾಲಾ ಠಾಕೂರ್ ಮತ್ತು ಡೆರೆಕ್ ಒ’ಬ್ರಿಯಾನ್ ಸೇರಿದಂತೆ ಟಿಎಂಸಿ ಸಂಸದರನ್ನು ಗುವಾಹಟಿ ವಿಮಾನ ನಿಲ್ದಾಣದಿಂದ ಅಸ್ಸಾಂಗೆ ವಾಪಸ್ ಕಳುಹಿಸಲಾಗಿದೆ ಬಿಜೆಪಿ ಸರ್ಕಾರದ ದುಷ್ಕೃತ್ಯಗಳ ವಿರುದ್ಧ ನಮ್ಮ ಸರಕಾರ ಯಾವಾಗಲು ಬಲವಾಗಿ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಮಣಿಪುರದಲ್ಲಿ ಚರ್ಚ್‌ಗಳು, ಮಸೀದಿಗಳು ಮತ್ತು ಇತರ ಪ್ರಾರ್ಥನಾ ಸ್ಥಳಗಳನ್ನು ಧ್ವಂಸಗೊಳಿಸಲಾಯಿತು ಮತ್ತು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಬೇರೆಡೆ ನೋಡುತ್ತಿದ್ದರೂ, ಸಂತ್ರಸ್ತ ಜನರ ಪರವಾಗಿ ನಿಂತಿರುವುದು ಟಿಎಂಸಿ. ನಾವು ಪೂಜಾ ಸ್ಥಳಗಳನ್ನು ನಿರ್ಮಿಸುವಾಗ ಅವರು ಪೂಜಾ ಸ್ಥಳಗಳನ್ನು ನಾಶಪಡಿಸುತ್ತಾರೆ. ಬಿಜೆಪಿಯವರು ರಾಮ ಮಂದಿರದ ಬಗ್ಗೆ ಹೆಮ್ಮೆಪಡುತ್ತಾರೆ, ಆದರೆ ಕಳೆದ ಹಲವು ವರ್ಷಗಳಿಂದ ಅವರು ಎಷ್ಟು ದೇವಾಲಯಗಳನ್ನು ನಿರ್ಮಿಸಿದ್ದಾರೆ? ದುರ್ಗಾ, ಕಾಳಿ ಮತ್ತು ಜಗನ್ನಾಥ ದೇವಾಲಯಗಳನ್ನು ನಿರ್ಮಿಸಿದ್ದು ಟಿಎಂಸಿ ಎಂದು ಮಮತಾ ಬ್ಯಾನರ್ಜಿ  ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ತಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...