Homeಮುಖಪುಟನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ: ಎಸ್‌ಬಿಐಗೆ ಸುಪ್ರೀಂಕೋರ್ಟ್ ಖಡಕ್‌ ಆದೇಶ

ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ: ಎಸ್‌ಬಿಐಗೆ ಸುಪ್ರೀಂಕೋರ್ಟ್ ಖಡಕ್‌ ಆದೇಶ

- Advertisement -
- Advertisement -

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಮಾಹಿತಿ ನೀಡಲು ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದ್ದು, 2024ರ ಮಾ.12ರ ಒಳಗಡೆ ಈ ಕುರಿತ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್‌ ಆದೇಶಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠವು ಈ ಮಹತ್ವದ ಆದೇಶವನ್ನು ನೀಡಿದೆ. ಇದೇ ವೇಳೆ ನೀವು 26 ದಿನಗಳ ಕಾಲ ಏನು ಮಾಡುತ್ತಿದ್ದಿರಿ?” ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವನ್ನು ಸುಪ್ರೀಂ ಕೋರ್ಟ್‌ ಇಂದು ತರಾಟೆಗೆ ತೆಗೆದುಕೊಂಡಿದೆ.

ಫೆಬ್ರವರಿ 15ರಂದು ನೀಡಲಾದ ತೀರ್ಪಿನ ಪ್ರಕಾರ, ಬ್ಯಾಂಕ್ ಮಾರ್ಚ್ 6ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ಒದಗಿಸಬೇಕಾಗಿತ್ತು. SBI ಬಾಂಡ್‌ಗಳನ್ನು ಖರೀದಿಸಿದವರು, ಮುಖಬೆಲೆ, ಬಾಂಡ್‌ಗಳನ್ನು ಎನ್‌ಕ್ಯಾಶ್ ಮಾಡಿದಂತಹ ಮಾಹಿತಿಯನ್ನು ಹಂಚಿಕೊಳ್ಳಬೇಕಾಗಿತ್ತು. ಆದರೆ ಮಾ.4ರಂದು ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಎಸ್‌ಬಿಐ ಮಾಹಿತಿ ಹಂಚಿಕೆಗೆ ಜೂ.30ರವರೆಗೆ ಕಾಲಾವಕಾಶವನ್ನು ಕೋರಿತ್ತು. ಮಾ.6ರೊಳಗೆ ಮಾಹಿತಿ ಹಂಚಿಕೊಳ್ಳಿ ಎಂದು ಹೇಳಿದ್ದ ಸುಪ್ರೀಂಕೋರ್ಟ್‌ನ ತೀರ್ಪನ್ನು ಉಲ್ಲಂಘಿಸಿತ್ತು.

ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿ ಅರ್ಜಿದಾರರಾದ ಜಯಾ ಠಾಕೂರ್, ಸುಪ್ರೀಂ ಕೋರ್ಟ್ ವಿಷಯದ ಗಂಭೀರತೆಯನ್ನು ಅರ್ಥಮಾಡಿಕೊಂಡಿದೆ ಮತ್ತು ನಾಳೆಯೊಳಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಬ್ಯಾಂಕ್ (SBI) ಗೆ ಕಟ್ಟುನಿಟ್ಟಾದ ಆದೇಶವನ್ನು ನೀಡಿದೆ. ಇದು ಉತ್ತಮ ನಿರ್ಧಾರ ಎಂದು ನಾನು ಭಾವಿಸುತ್ತೇನೆ, ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

0
ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಗುಜರಾತ್‌ನ...