Homeಅಂತರಾಷ್ಟ್ರೀಯಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

- Advertisement -
- Advertisement -

ಮುದ್ರಣ ಕಾಗದ ಖಾಲಿಯಾಗಿರುವುದರಿಂದ ಶ್ರೀಲಂಕಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಪರಿಣಾಮವಾಗಿ ಕಾಗದಗಳನ್ನು ಆಮದು ಮಾಡಲು ಕೂಡಾ ಹಣಕಾಸಿನ ತೊಂದರೆ ಎದುರಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಸೋಮವಾರದಿಂದ ಒಂದು ವಾರ ನಿಗದಿಯಾಗಿದ್ದ ಪರೀಕ್ಷೆಗಳನ್ನು ತೀವ್ರ ಕಾಗದದ ಕೊರತೆಯಿಂದಾಗಿ ಅನಿರ್ದಿಷ್ಟವಾಗಿ ಮುಂದೂಡಲಾಗಿದೆ ಎಂದು ಶಿಕ್ಷಣ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಕಾಗದವನ್ನು ಆಮದು ಮಾಡಿಕೊಳ್ಳಲು ಹಣಕಾಸಿನ ಕೊರತೆಯಿದೆ ಎಂದು ಅವರು ಹೇಳಿದ್ದಾರೆ ಎಂದು ಗಾರ್ಡಿಯನ್‌ ವರದಿ ಮಾಡಿದೆ.

“ಪ್ರಿಂಟರ್‌ಗಳಿಗೆ ಅಗತ್ಯವಾದ ಕಾಗದ ಮತ್ತು ಶಾಯಿಯನ್ನು ವಿದೇಶದಿಂದ ಆಮದು ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಶಾಲಾ ಮುಖ್ಯಸ್ಥರು ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ” ಎಂದು ಪಶ್ಚಿಮ ಪ್ರಾಂತ್ಯದ ಶಿಕ್ಷಣ ಇಲಾಖೆ ಹೇಳಿದೆ.

ಇದನ್ನೂ ಓದಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ದೇಶದ 45 ಲಕ್ಷ ವಿದ್ಯಾರ್ಥಿಗಳಲ್ಲಿ ಸುಮಾರು ಮೂರನೇ ಎರಡರಷ್ಟು ಅಂದರೆ 15 ಲಕ್ಷದಷ್ಟು ವಿದ್ಯಾರ್ಥಿಗಳಿಗೆ ಈ ಸಮಸ್ಯೆಯಿಂದಾಗಿ ಪರೀಕ್ಷೆಗಳು ರದ್ದಾಗಿರಬಹುದು ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಗಾರ್ಡಿಯನ್ ವರದಿ ಹೇಳಿದೆ. ಈ ವರ್ಷಾಂತ್ಯದಲ್ಲಿ ವಿದ್ಯಾರ್ಥಿಗಳು ಮುಂದಿನ ದರ್ಜೆಗೆ ಬಡ್ತಿ ಪಡೆಯಲು ಈ ಪರೀಕ್ಷೆಗಳು ಅಗತ್ಯವಾಗಿತ್ತು.

ಅಗತ್ಯ ಆಮದುಗಳಿಗೆ ಹಣಕಾಸು ಒದಗಿಸಲು ವಿದೇಶಿ ವಿನಿಮಯದ ಮೀಸಲು ಹಣಕಾಸಿನ ಕೊರತೆಯಿರುವಷ್ಟು ಆರ್ಥಿಕ ಬಿಕ್ಕಟ್ಟು ಇರುವುದರಿಂದ ಆಹಾರ, ಇಂಧನ ಮತ್ತು ಔಷಧಗಳ ವಿಚಾರದಲ್ಲಿ ದೇಶವು ತತ್ತರಿಸಿದೆ ಎಂದ ವರದಿಯಾಗಿದೆ.

ದೇಶಾದ್ಯಂತ ದಿನಸಿ ಮತ್ತು ಇಂದನಕ್ಕಾಗಿ ಉದ್ದನೆಯ ಸರತಿ ಸಾಲುಗಳು ಕಂಡು ಬರುತ್ತಿದೆ ಎಂದು ವರದಿಯಾಗಿದೆ.

ಈ ವರ್ಷದ ಆರಂಭದಲ್ಲಿ ಶ್ರೀಲಂಕಾ ತನ್ನ ಪ್ರಮುಖ ಸಾಲದಾತರಲ್ಲಿ ಒಬ್ಬರಾದ ಚೀನಾವನ್ನು ಸಾಲ ಪಾವತಿಗಳನ್ನು ಮುಂದೂಡಲು ಸಹಾಯ ಮಾಡುವಂತೆ ಕೇಳಿದೆ. ಆದರೆ ಈ ಬಗ್ಗೆ ಚೀನಾದಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...