Homeಮುಖಪುಟಆರ್ಥಿಕ ಸಮೀಕ್ಷೆ ವಿರುದ್ಧದ ಹೇಳಿಕೆ - ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಆರ್ಥಿಕ ಸಮೀಕ್ಷೆ ವಿರುದ್ಧದ ಹೇಳಿಕೆ – ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

- Advertisement -
- Advertisement -

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ಕಾಂಗ್ರೆಸ್ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಜನವರಿ 7 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಬರೇಲಿಯ ನ್ಯಾಯಾಲಯವು ಸಮನ್ಸ್ ನೀಡಿದೆ. ರಾಹುಲ್‌ ಗಾಂಧಿ ಅವರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ನೋಟಿಸ್ ಜಾರಿ ಮಾಡಿದ್ದಾರೆ. ಆರ್ಥಿಕ ಸಮೀಕ್ಷೆ

ಅಖಿಲ ಭಾರತ ಹಿಂದೂ ಮಹಾಸಂಘ ಸಂಘಟನೆಯ ಮಂಡಲ್ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿದ ಮನವಿಗೆ ಸಂಬಂಧಿಸಿ ನ್ಯಾಯಾಲಯ ಈ ಸಮನ್ಸ್ ನೀಡಿದೆ. ಪಾಠಕ್ ಅವರು ಆರಂಭದಲ್ಲಿ ಶಾಸಕ-ಸಂಸದ ನ್ಯಾಯಾಲಯ/ಸಿಜೆಎಂ ಕೋರ್ಟ್‌ಗೆ ಆಗಸ್ಟ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಆಗಸ್ಟ್ 27ರಂದು ಅರ್ಜಿಯನ್ನು ತಿರಸ್ಕರಿಸಿತ್ತು. ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸೆಷನ್ಸ್ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದು, ನ್ಯಾಯಾಲಯ ಪ್ರಸ್ತುತ ಸಮನ್ಸ್‌ ನೀಡಿದೆ. ಪಾಠಕ್ ಅವರನ್ನು ಪ್ರತಿನಿಧಿಸಿದ ವಕೀಲ ವೀರೇಂದ್ರ ಪಾಲ್ ಗುಪ್ತಾ ಅವರು, ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು “ಶೇಕಡಾವಾರು ದುರ್ಬಲ ವರ್ಗದವರ ಸಂಖ್ಯೆ ಹೆಚ್ಚಿದ್ದರೂ, ಅವರು ಹೊಂದಿರುವ ಆಸ್ತಿಯ ಶೇಕಡಾವಾರು ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ಹೇಳಿದ್ದರು. ಇದೇ ರೀತಿ ಮುಂದುವರಿದರೆ ಹೆಚ್ಚಿನ ಜನಸಂಖ್ಯೆ ಹೊಂದಿರುವವರು ಹೆಚ್ಚಿನ ಆಸ್ತಿಗೆ ಬೇಡಿಕೆ ಇಡುವ ಸಾಧ್ಯತೆಯಿದೆ” ಎಂದು ಹೇಳಿದ್ದರು.

“ರಾಜಕೀಯ ಲಾಭಕ್ಕಾಗಿ ವರ್ಗ ದ್ವೇಷವನ್ನು ಸೃಷ್ಟಿಸುವ” ಗುರಿಯನ್ನು ಹೊಂದಿರುವ ಈ ಹೇಳಿಕೆಗಳ ಮೂಲಕ ದುರ್ಬಲ ವರ್ಗಗಳನ್ನು ಪ್ರಚೋದಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದ್ದಾರೆ ಎಂದು ವಕೀಲ ಗುಪ್ತಾ ಆರೋಪಿಸಿದ್ದಾರೆ. ಕಾಂಗ್ರೆಸ್‌ನ ಹಿತಾಸಕ್ತಿಗಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳ ನಡುವೆ ದ್ವೇಷ ಬಿತ್ತಲು ಗಾಂಧಿ ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧೀ ಪ್ರಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...