Homeಮುಖಪುಟಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

- Advertisement -
- Advertisement -

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಸೋಮವಾರ (ಫೆ.20)ದಂದು ಛತ್ತೀಸ್‌ಗಢದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದೆ. ಈ ದಾಳಿಗಳ ಕುರಿತು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಡಿ ದಾಳಿ ಕುರಿತು ಟ್ವೀಟ್ ಮಾಡಿರುವ ಖರ್ಗೆ, ”ಕಳೆದ 9 ವ‍ರ್ಷಗಳಲ್ಲಿ 95 ಪ್ರತಿಶತದಷ್ಟು ದಾಳಿಗಳು ವಿರೋಧ ಪಕ್ಷದ ನಾಯಕರ ಮೇಲೆಯೇ ನಡೆದಿವೆ ಅದರಲ್ಲೂ ವಿಶೇಷವಾಗಿ ನಮ್ಮ ಪಕ್ಷದ ನಾಯಕರ ಮೇಲೆಯೇ ನಡೆದಿವೆ. ಇದು ಬಿಜೆಪಿಯ ಹೇಡಿತನವನ್ನು ತೋರಿಸುತ್ತದೆ ಆದರೆ ಕಾಂಗ್ರೆಸ್ ಈ ಕುತಂತ್ರಗಳಿಗೆ ಮಣಿಯುವುದಿಲ್ಲ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

”ಈ ಹೇಡಿತನದ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ”ಭಾರತ್ ಜೋಡೋ ಯಾತ್ರೆ”ಯ ಅಗಾಧ ಯಶಸ್ಸಿನಿಂದಾಗಿ ಬಿಜೆಪಿಯ ಅಶಾಂತಿ ಎದ್ದು ಕಾಣುತ್ತಿದೆ. ಮೋದಿಜಿಯವರಲ್ಲಿ ಸ್ವಲ್ಪವಾದರೂ ಪ್ರಾಮಾಣಿಕತೆಯಿದ್ದರೆ, ನಿಮ್ಮ ಆತ್ಮೀಯ ಗೆಳೆಯನ ಮೆಗಾ ಹಗರಣಗಳ ಮೇಲೆ ದಾಳಿ ಮಾಡಿ, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಈ ಪ್ರಯತ್ನವನ್ನು ನಾವು ದೃಢವಾಗಿ ಎದುರಿಸುತ್ತೇವೆ” ಎಂದು ಖರ್ಗೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಗೆಹ್ಲೋಟ್, ”ಇದು ದುರದೃಷ್ಟಕರ ಸಂಗತಿಯಾಗಿದೆ, ಯಾವುದೇ ರಾಜ್ಯದಲ್ಲಿ ಚುನಾವಣೆಗಳು ಬಂದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತಿವೆ. 2014 ರಿಂದ ನಿರಂತರವಾಗಿ ಇಡಿ, ಐಟಿ ಮತ್ತು ಸಿಬಿಐ ದುರ್ಬಳಕೆಯಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತವೆ. ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಇಂತಹ ಕ್ರಮ ಖಂಡನೀಯ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ

”ಇಡಿ ದಾಳಿಯಿಂದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಇದು ಬಿಜೆಪಿಯ ನಾಟಕವಲ್ಲದೆ ಬೇರೇನೂ ಅಲ್ಲ ಎಂದು ದೇಶದ ಜನರು ಅರ್ಥಮಾಡಿಕೊಳ್ಳುತ್ತಿದ್ದಾರೆ” ಎಂದು ಗೆಹ್ಲೋಟ್ ಹೇಳಿದರು.

”ಈ ರೀತಿ ದಾಳಿ ನಡೆಸುವುದರಿಂದ ಕಾಂಗ್ರೆಸ್ ಹೆದರುತ್ತದೆ ಎಂದು ಅವರು ಭಾವಿಸುತ್ತಾರೆ? ಕಾಂಗ್ರೆಸ್ ಪಕ್ಷವು ಬ್ರಿಟಿಷರ ವಿರುದ್ಧ ಹೋರಾಡಿದ ಪಕ್ಷ ಮತ್ತು ನಮ್ಮ ಅನೇಕ ನಾಯಕರು ದೇಶದ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಜೈಲಿಗೆ ಹೋಗಿದ್ದಾರೆ. ಇದೀಗ ಬಿಜೆಪಿಯವರು ನಮ್ಮ ಮೇಲಿನ ದ್ವೇ‍ಷದಿಂದ ಇಂತಹ ದಾಳಿಗಳನ್ನು ನಡೆಸುತ್ತಿದ್ದಾರೆ, ನಾವು ಈಗಲೂ ಇದರ ವಿರುದ್ಧ ಹೋರಾಡುತ್ತೇವೆ” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಇಡಿ ದಾಳಿ ಬಗ್ಗೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಬಿಜೆಪಿಯು ‘ಫೇರ್ ಅಂಡ್ ಲವ್ಲಿ’ ಯೋಜನೆಯನ್ನು ನಡೆಸುತ್ತಿದೆ. ಏಕೆಂದರೆ, ಹಿಮಂತ ಬಿಸ್ವ ಶರ್ಮಾ ಅಥವಾ ಸುವೇಂದು ಅಧಿಕಾರಿ ಅಥವಾ ಇತರರು ಬಿಜೆಪಿ ಸೇರಿದರು. ಈಗ ಇದ್ದಕ್ಕಿದ್ದಂತೆ ಅವರೆಲ್ಲಾ ಪ್ರಾಮಾಣಿಕರಾಗಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ತನಿಖೆಯೂ ನಡೆಯುವುದಿಲ್ಲ, ಯಾವ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ಪ್ರಧಾನಿ ಮೋದಿ ಅವರು ಅಗತ್ಯವಿರುವ ಕಡೆಯಲ್ಲಿ ದಾಳಿಗಳನ್ನು ನಡೆಸಲು ಬಿಡುವುದಿಲ್ಲ. ಈ ಹಿಂದೆ ಯಾರ ವಿರುದ್ಧ ಇಡಿ ದಾಳಿ ನಡೆಸಿತ್ತೋ, ಅವರು ಈಗ ಬಿಜೆಪಿ ಸೇರಿದ ನಂತರ ನಿರಪರಾಧಿಗಳಾಗಿದ್ದಾರೆ” ಎಂದು ಜೈರಾಮ್ ರಮೇಶ್ ಆರೋಪಿಸಿದರು.

”ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿಯನ್ನು ತೊಳೆಯುವ ಯಂತ್ರ” ಎಂದು ಖರ್ಗೆಯವರನ್ನು ಜೈರಾಮ್ ರಮೇಶ್ ಹೊಗಳಿದ್ದಾರೆ.

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮೂರು ದಿನಗಳ ಮುಂಚಿತವಾಗಿ, ಕಲ್ಲಿದ್ದಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಮುಂಜಾನೆ ಶೋಧ ನಡೆಸಿತು. ವಿವಿಧ ಕಾಂಗ್ರೆಸ್ ಮುಖಂಡರ ಮನೆ ಮತ್ತು ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸಿದರು.

ಛತ್ತೀಸ್‌ಗಢದ ಕಾಂಗ್ರೆಸ್ ಖಜಾಂಚಿ ರಾಮಗೋಪಾಲ್ ಅಗರ್ವಾಲ್ ಅವರ ಮನೆಯಲ್ಲಿ ಶೋಧ ನಡೆಸಲಾಗಿದೆ. ಭಿಲಾಯಿ ಶಾಸಕ ದೇವೇಂದ್ರ ಯಾದವ್, ಗಿರೀಶ್ ದೇವಾಂಗನ್, ಆರ್ ಪಿ ಸಿಂಗ್, ವಿನೋದ್ ತಿವಾರಿ, ಸನ್ನಿ ಅಗರ್ವಾಲ್ ಮೇಲೆಯೂ ಇಡಿ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸೂರ್ಯಕಾಂತ್ ತಿವಾರಿಯಿಂದ ರಾಮ್‌ಗೋಪಾಲ್ ಅಗರ್ವಾಲ್ 52 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನುವ ಬಗ್ಗೆ ಜಾರಿ ನಿರ್ದೇಶನಾಲಯದ ಬಳಿ ಬಲವಾದ ಸಾಕ್ಷ್ಯವನ್ನು ಇವೆ ಎಂದು ಹೇಳಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....