ಜಾರಿ ನಿರ್ದೇಶನಾಲಯ (ಇಡಿ) ಇಲಾಖೆಯ ಅಧಿಕಾರಿಗಳು ಗುರುವಾರ ಮುಂಜಾನೆಯೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹ್ಮದ್ ಅವರ ಮನೆ ಸೇರಿದಂತೆ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ಶೋಧವನ್ನು ಮುಂದುವರೆಸಿದ್ದಾರೆ.
ಶಿವಾಜಿನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅವರ ಮನೆ, ಚಾಮರಾಜಪೇಟೆಯಲ್ಲಿರುವ ಅವರ ಟ್ರಾವೆಲ್ಸ್ ಕಚೇರಿ ಹಾಗೂ ಅವರ ಒಡೆತನದಲ್ಲಿರುವ ಫ್ಲ್ಯಾಟ್ ಸೇರಿದಂತೆ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬಳ್ಳಾರಿಗೆ ಬರ್ತೀನಿ, ಅದೇನ್ ಮಾಡ್ತಿಯೋ ನೋಡ್ತೀನಿ: ಸೋಮಶೇಖರ್ ರೆಡ್ಡಿಗೆ ತೊಡೆ ತಟ್ಟಿದ ಜಮೀರ್ ಅಹ್ಮದ್
ಇಡಿ ಅಧಿಕಾರಿಗಳು ಮುಂಜಾನೆ ಆರು ಗಂಟೆಗೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿಯ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್


