Homeಮುಖಪುಟಇಡಿ, ಐಟಿ ದಾಳಿ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಇಡಿ, ಐಟಿ ದಾಳಿ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಛತ್ತೀಸ್‌ಗಢದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗಳು ದಾಳಿಗಳ ಮೂಲಕ ತಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಕ್ಸಲ್ ಪೀಡಿತ ಬಾಳಘಟ್ಟ ಜಿಲ್ಲೆಯ ಕಟಂಗಿ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾನು ನಿನ್ನೆ ಛತ್ತೀಸ್‌ಗಢದಲ್ಲಿದ್ದೆ ಮತ್ತು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಟೀಂ ಕೂಡ ಅಲ್ಲಿತ್ತು. ಇಡಿ, ಸಿಬಿಐ ಮತ್ತು ಐಟಿ ದಾಳಿಗಳ ಮೂಲಕ ಅವರು ನಮ್ಮ ಪಕ್ಷದ ಕಾರ್ಯಕರ್ತರನ್ನು ಹೆದರಿಸಿ ತಮ್ಮ ಮನೆಗಳಲ್ಲಿ ಕುಳಿತುಕೊಳ್ಳುವಂತೆ ಮಾಡಲು ಯತ್ನಿಸುತ್ತಾರೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ  ಪಕ್ಷವು ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಈ ದಾಳಿಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗುತ್ತಾರೆ ಎಂದು ಅವರು ಯೋಚಿಸುತ್ತಿದ್ದಾರೆ. ಆದರೆ ಅದು ಆಗುವುದಿಲ್ಲ. ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಖರ್ಗೆ ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಛತ್ತೀಸ್‌ಗಢದಲ್ಲಿ ತನ್ನ ಸರ್ಕಾರವನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ(ಇಡಿ), ಕೇಂದ್ರೀಯ ತನಿಖಾ ದಳ(ಸಿಬಿಐ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಗಳನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಗ್ರಾಮೀಣ ಉದ್ಯೋಗ ಖಾತರಿ ಯೋಜನೆ NREGA ಯೋಜನೆಯನ್ನು ಮೋದಿ ಹಿಂದೆ ಬಲವಾಗಿ ಟೀಕಿಸಿದ್ದರು, ಆದರೆ ಅದೇ ಕಾರ್ಯಕ್ರಮವು COVID-19 ಸಾಂಕ್ರಾಮಿಕ ಸಮಯದಲ್ಲಿ ಉದ್ಯೋಗವನ್ನು ಒದಗಿಸಲು ಸರ್ಕಾರಕ್ಕೆ ಸಹಾಯ ಮಾಡಿತು. ತಮ್ಮ ಪಕ್ಷವು ಆಹಾರ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲು ದೇಶದಲ್ಲಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ಹಸಿರು ಕ್ರಾಂತಿಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿಯೇ ಸರ್ಕಾರವು ಲಕ್ಷಾಂತರ ಜನರಿಗೆ ಉಚಿತ ಪಡಿತರವನ್ನು ನೀಡಲು ಕಾಂಗ್ರೆಸ್‌ ಸರಕಾರದ ದೂರದೃಷ್ಟಿಯ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್‌ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಇಂದು ಭಾರತದಲ್ಲಿ ಕೋಟ್ಯಾಂತರ ಜನರು ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ರಾಜೀವ್‌ ಗಾಂಧಿಯವರ ದೂರದೃಷ್ಟಿಯ ಕ್ರಮಗಳು ಕಾರಣ ಎಂದು ಹೇಳಿದ್ದಾರೆ.  ಇದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆಯನ್ನು ಖರ್ಗೆ ಸ್ಮರಿಸಿಕೊಂಡಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶ: ABVP ಬಗ್ಗೆ ಹೇಳಿಕೆ; ಕಾಂಗ್ರೆಸ್‌ ರಾಜ್ಯಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...