HomeಮುಖಪುಟNDA ನಲ್ಲಿ 'ಐಟಿ, ಇಡಿ, ಸಿಬಿಐ' ಎಂಬ ಮೂರು ಪಕ್ಷಗಳು ಬಲಿಷ್ಠವಾಗಿವೆ, ಮೈತ್ರಿ ಪಕ್ಷಗಳ ಅಗತ್ಯವಿಲ್ಲ:...

NDA ನಲ್ಲಿ ‘ಐಟಿ, ಇಡಿ, ಸಿಬಿಐ’ ಎಂಬ ಮೂರು ಪಕ್ಷಗಳು ಬಲಿಷ್ಠವಾಗಿವೆ, ಮೈತ್ರಿ ಪಕ್ಷಗಳ ಅಗತ್ಯವಿಲ್ಲ: ಬಿಜೆಪಿ ವಿರುದ್ಧ ಠಾಕ್ರೆ ವಾಗ್ದಾಳಿ

- Advertisement -
- Advertisement -

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ, ” ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿ ಆದಾಯ ತೆರಿಗೆ ಇಲಾಖೆ(ಐಟಿ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ”ಮೂರು ಪಕ್ಷಗಳು ಪ್ರಬಲ”ವಾಗಿವೆ ಎಂದು ಟೀಕೆ ಮಾಡಿದ್ದಾರೆ.

ಶಿವಸೇನಾ (ಯುಬಿಟಿ) ಪಕ್ಷದ ಮುಖವಾಣಿ ‘ಸಾಮ್ನಾ’ದ ಕಾರ್ಯನಿರ್ವಾಹಕ ಸಂಪಾದಕ, ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರಿಗೆ ನೀಡಿದ ಸಂದರ್ಶನದಲ್ಲಿ ಠಾಕ್ರೆ ಈ ಹೇಳಿಕೆಗಳನ್ನು ನೀಡಿದ್ದಾರೆ. ಸಂದರ್ಶನದ ಮೊದಲ ಭಾಗವು ಬುಧವಾರ ಸಾಮ್ನಾದಲ್ಲಿ ಪ್ರಕಟವಾಯಿತು ಮತ್ತು ಪಕ್ಷದ ಸಾಮಾಜಿಕ ಮಾಧ್ಯಮ ಚಾನೆಲ್‌ಗಳಲ್ಲಿ ಪ್ರಸಾರವಾಯಿತು.

”ಹಲವು ವರ್ಷಗಳ ನಂತರ, ಈ ದೇಶದಲ್ಲಿ ಎನ್‌ಡಿಎ ಎಂಬ ‘ಅಮೀಬಾ’ ಇನ್ನೂ ಜೀವಂತವಾಗಿದೆ ಎಂದು ನನಗೆ ತಿಳಿಯಿತು. INDIA ಎಂದು ಕರೆಯಲ್ಪಡುವ ದೇಶಭಕ್ತ ನಾಯಕರ ಮೈತ್ರಿಯನ್ನು ಎದುರಿಸಲು, ನಮ್ಮ ಪ್ರಧಾನಿ ಇದ್ದಕ್ಕಿದ್ದಂತೆ 36 ಪಕ್ಷಗಳ (ಬಿಜೆಪಿ ನೇತೃತ್ವದ ಎನ್‌ಡಿಎ ಭಾಗ) ಸಭೆಯನ್ನು ಕರೆದರು. ವಾಸ್ತವವಾಗಿ, ಅವರಿಗೆ 36 ಪಕ್ಷಗಳ ಅಗತ್ಯವಿಲ್ಲ. ಪ್ರಸ್ತುತ ಎನ್‌ಡಿಎಯಲ್ಲಿ ಇಡಿ, ಆದಾಯ ತೆರಿಗೆ ಮತ್ತು ಸಿಬಿಐ ಮೂರು ಪಕ್ಷಗಳು ಪ್ರಬಲವಾಗಿವೆ” ಎಂದು ಠಾಕ್ರೆ ವ್ಯಂಗ್ಯ ಮಾಡಿದ್ದಾರೆ.

”ಶಿವಸೇನೆ ಮತ್ತು ಅಕಾಲಿದಳದಂತಹ ಹಳೆಯ ಮಿತ್ರಪಕ್ಷಗಳು ಈಗಾಗಲೇ ಎನ್‌ಡಿಎ ತೊರೆದಿವೆ ಮತ್ತು ಎನ್‌ಡಿಎ ಸಭೆಯಲ್ಲಿ ಕೆಲವು ಪಕ್ಷಗಳು ಒಬ್ಬನೇ ಒಬ್ಬ ಸಂಸದನನ್ನು ಸಹ ಹೊಂದಿಲ್ಲ” ಎಂದು ಅವರು ಟೀಕೆ ಮಾಡಿದರು.

ಜುಲೈ 18ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ಸಭೆಯಲ್ಲಿ ಎನ್‌ಡಿಎ ಭಾಗವಾಗಿರುವ 36 ಪಕ್ಷಗಳ ನಾಯಕರು ಭಾಗವಹಿಸಿದ್ದರು. ಅದೇ ದಿನ, ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಶಿವಸೇನೆ (ಯುಬಿಟಿ) ಸೇರಿದಂತೆ 26 ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದವು. ಈ ಮೈತ್ರಿಕೂಟವನ್ನು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ಎಂದು ಹೆಸರಿಸಲಾಯಿತು.

ಮಣಿಪುರ ಹಿಂಸಾಚಾರ: ಪ್ರಧಾನಿಗೆ ಠಾಕ್ರೆ ತರಾಟೆ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಠಾಕ್ರೆ, ”ಪ್ರಧಾನಿ ಮೋದಿ ಸಮಸ್ಯೆಯನ್ನು ಪರಿಹರಿಸಲು ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

”ಮಣಿಪುರ ನಮ್ಮ ದೇಶದ ಭಾಗವಾಗಿರುವುದರಿಂದ ನಾನು ಮಣಿಪುರವನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಿದ್ದೇನೆ. ಮಣಿಪುರವು ದೇಶದ ಗಡಿಯಂಚಿನಲ್ಲಿದೆ ಎಂದು ನಾನು ಭಯಪಡುತ್ತೇನೆ. ಮಣಿಪುರದಲ್ಲಿ ಡಬಲ್ ಇಂಜಿನ್ (ಬಿಜೆಪಿ) ಸರ್ಕಾರ ವಿಫಲವಾಗಿದೆ” ಎಂದು ಠಾಕ್ರೆ ಹೇಳಿದರು.

”ಈಗ ಎರಡು ರಾಜ್ಯಗಳು (ಮಣಿಪುರ ಮತ್ತು ಕಾಶ್ಮೀರ) ಹೊತ್ತಿ ಉರಿಯುತ್ತಿವೆ. ಒಂದೇ ಸಮಯದಲ್ಲಿ ಎರಡು ರಾಜ್ಯಗಳಲ್ಲಿ ಅಸ್ಥಿರತೆ ಇದೆ. ಕಾಶ್ಮೀರದಲ್ಲಿ ಕಳೆದ ಆರು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲ. ಸರ್ಕಾರಕ್ಕೆ ಚುನಾವಣೆ ನಡೆಸಲು ಇಷ್ಟವಿಲ್ಲ ಎಂದು ತೋರುತ್ತದೆ. ಅದಕ್ಕಾಗಿಯೇ ನಾನು 2024 ದೇಶಕ್ಕೆ ನಿರ್ಣಾಯಕ ವರ್ಷ ಎಂದು ಹೇಳುತ್ತಿದ್ದೇನೆ. ಈ (ಬಿಜೆಪಿ) ಸರ್ಕಾರ 2024 ರಲ್ಲಿ ಮತ್ತೆ ಬಂದರೆ, ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುವುದಿಲ್ಲ, ಮತ್ತೆ ಚುನಾವಣೆಗಳು ನಡೆಯುವುದಿಲ್ಲ” ಎಂದು ಠಾಕ್ರೆ ಹೇಳಿದರು.

”ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ಸಾಮಾನ್ಯ ಜನರು ರಾಜ್ಯ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ” ಎಂದರು.

ಇದನ್ನೂ ಓದಿ: ಇಂದು ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ: INDIA ಒಕ್ಕೂಟದ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...