Homeಕರ್ನಾಟಕಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ...

ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದಿದ್ದಾರೆ.

ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇಡಿ ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ ಸಮೀಕ್ಷೆಯನ್ನು ಹಿಂದೆ ಒಪ್ಪಿದ್ದ ಬಿಜೆಪಿ ಈಗ ವಿರೋಧಿಸುತ್ತಿದೆ: ಜಯಪ್ರಕಾಶ್ ಹೆಗ್ಡೆ: ಜಯಪ್ರಕಾಶ್ ಹೆಗ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...