Homeಮುಖಪುಟಇಡಿ ಮುಖ್ಯಸ್ಥ ಮಿಶ್ರಾ ಅವಧಿ ವಿಸ್ತರಣೆ: ಬೇರೆ ಯಾರೂ ಸಮರ್ಥರು ಇಲ್ಲವೇ?; ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಇಡಿ ಮುಖ್ಯಸ್ಥ ಮಿಶ್ರಾ ಅವಧಿ ವಿಸ್ತರಣೆ: ಬೇರೆ ಯಾರೂ ಸಮರ್ಥರು ಇಲ್ಲವೇ?; ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

- Advertisement -
- Advertisement -

ಜಾರಿ ನಿರ್ದೇಶನಾಲಯದ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ಮೂರನೇ ವಿಸ್ತರಣೆಯನ್ನು ನೀಡುವ ನಿರ್ಧಾರದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರವನ್ನು ಪ್ರಶ್ನಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

”ಸಂಸ್ಥೆಯಲ್ಲಿ ತನ್ನ ಕೆಲಸವನ್ನು ಮಾಡುವ ಇನ್ನೊಬ್ಬ ವ್ಯಕ್ತಿ ಇಲ್ಲವೇ? ಒಬ್ಬ ವ್ಯಕ್ತಿ ಇಷ್ಟೊಂದು ಅನಿವಾರ್ಯವಾಗಬಹುದೇ? ಇಡಿಯಲ್ಲಿ ಸಮರ್ಥರು ಬೇರೆ ಯಾರೂ ಇಲ್ಲವೇ? 2023ರ ನಂತರ ಅವರು ನಿವೃತ್ತರಾದಾಗ ಏನಾಗುತ್ತದೆ? ಎಂದು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೇರ ಪ್ರಶ್ನೆ ಕೇಳಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರ ಪೀಠವು ಮಿಶ್ರಾಗೆ ನೀಡಲಾದ ವಿಸ್ತರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮತ್ತು ಇತರರು ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ನವೆಂಬರ್ 19, 2018ರಂದು ಮಿಶ್ರಾ ಅವರನ್ನು ಮೊದಲು 2 ವರ್ಷಗಳ ಅವಧಿಗೆ ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ನೇಮಿಸಲಾಯಿತು. 2020ರಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿತು.

ಇದನ್ನೂ ಓದಿ: ಬಿಲ್ಕಿಸ್ ಬಾನೊ ಅತ್ಯಾಚಾರಿಗಳು ಕಾಲ ಮುಂದೂಡಲು ಯತ್ನಿಸುತ್ತಿದ್ದಾರೆ: ಸುಪ್ರೀಂ ಕೋರ್ಟ್

ಆ ಬಳಿಕ ಸೆಪ್ಟೆಂಬರ್ 2021 ರಲ್ಲಿ, ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಸರ್ಕಾರವು ನವೆಂಬರ್ 2021ರಲ್ಲಿ ಎರಡು ಸುಗ್ರೀವಾಜ್ಞೆಗಳನ್ನು ತಂದಿತು. ಇದರಿಂದ ಮಿಶ್ರಾ ಅವರು ಇನ್ನೊಂದು ವರ್ಷ ಮುಂದುವರಿಯಲು ಸಾಧ್ಯವಾಯಿತು.

ಸರ್ಕಾರವು ಮತ್ತೊಮ್ಮೆ 1984-ಬ್ಯಾಚ್ ಭಾರತೀಯ ಕಂದಾಯ ಸೇವಾ ಅಧಿಕಾರಿ ಮಿಶ್ರಾ ಅವರ ಅಧಿಕಾರಾವಧಿಯನ್ನು ಮತ್ತೊಂದು ವರ್ಷಕ್ಕೆ ನವೆಂಬರ್ 2022 ರಲ್ಲಿ ವಿಸ್ತರಿಸಿತು.

ಬುಧವಾರ, ಕೇಂದ್ರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಿಶ್ರಾ ಅವರ ನಾಯಕತ್ವ ವಿಸ್ತರಣೆ ಅಗತ್ಯ ಇದೆ ಎಂದು ವಾದಿಸಿದರು.

”ಜಾರಿ ನಿರ್ದೇಶನಾಲಯದಿಂದ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ರಾಜಕೀಯ ಪಕ್ಷಗಳ ನಾಯಕರು ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ” ಎಂದು ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...