Homeಮುಖಪುಟಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅಧಿಕಾರವಧಿ ಸೆಪ್ಟಂಬರ್‌ವರೆಗೆ ವಿಸ್ತರಣೆ: ಇದೇ ಕೊನೆ ಬಾರಿ ಎಂದ ಸುಪ್ರೀಂ

ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅಧಿಕಾರವಧಿ ಸೆಪ್ಟಂಬರ್‌ವರೆಗೆ ವಿಸ್ತರಣೆ: ಇದೇ ಕೊನೆ ಬಾರಿ ಎಂದ ಸುಪ್ರೀಂ

- Advertisement -
- Advertisement -

ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ಸೆಪ್ಟಂಬರ್‌ವರೆಗೂ ವಿಸ್ತರಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದ್ದು, ಇದು ಕೊನೆಯ ಬಾರಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಜುಲೈ 31ಕ್ಕೆ ಅವರ ಅಧಿಕಾರವಧಿ ಮುಗಿಯುತ್ತಿದ್ದು, ಅಕ್ಟೋಬರ್ 15ರವರೆಗೂ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಮನವಿ ಮಾಡಿತ್ತು.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರ ಪೀಠವು “ಮಹತ್ತರ ಸಾರ್ವಜನಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿ”ಗಾಗಿ ವಿಸ್ತರಣೆಯನ್ನು ನೀಡುತ್ತಿದ್ದೇವೆ. ಆದರೆ ಮಿಶ್ರಾ ಸೆಪ್ಟೆಂಬರ್ 15 ರ ಮಧ್ಯರಾತ್ರಿಯಿಂದ ಇಡಿ ಮುಖ್ಯಸ್ಥರಾಗಿ ಇರುವುದಿಲ್ಲ ಎಂದು ಹೇಳಿದೆ.

ಇಡೀ ಇಲಾಖೆಯು ಮಿಶ್ರಾ ಒಬ್ಬರನ್ನು ಹೊರತುಪಡಿಸಿ ಅಸಮರ್ಥರಿಂದ ತುಂಬಿದೆಯೇ? ಎಂದು ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಸಂಸ್ಥೆಯಲ್ಲಿ ಈ ಕೆಲಸವನ್ನು ಮಾಡುವ ಇನ್ನೊಬ್ಬ ವ್ಯಕ್ತಿ ಇಲ್ಲವೇ? ಒಬ್ಬ ವ್ಯಕ್ತಿ ಇಷ್ಟೊಂದು ಅನಿವಾರ್ಯವಾಗಬಹುದೇ? ಇಡಿಯಲ್ಲಿ ಸಮರ್ಥರು ಬೇರೆ ಯಾರೂ ಇಲ್ಲವೇ? ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರನ್ನು ಸುಪ್ರೀಂ ಪ್ರಶ್ನಿಸಿದೆ.

ಜುಲೈ 11 ರಂದು ಇದೇ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮಿಶ್ರಾ ಅವರಿಗೆ ಮೂರನೇ ಅವಧಿಗೆ ಅಧಿಕಾರ ವಿಸ್ತರಿಸುವ ಕೇಂದ್ರ ಸರ್ಕಾರದ ಆದೇಶವನ್ನು ಕಾನೂನುಬಾಹಿರ ಎಂದು ಕರೆದಿತ್ತು. ಅಲ್ಲದೇ ಜುಲೈ 31ರ ಒಳಗೆ ಇಡಿ ಮುಖ್ಯಸ್ಥರ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿತ್ತು.

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮತ್ತು ಇತರರು ಮಿಶ್ರಾ ಅವರ ಅಧಿಕಾರ ವಿಸ್ತರಣೆಯನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ನವೆಂಬರ್ 19, 2018ರಂದು 1984-ಬ್ಯಾಚ್ ಭಾರತೀಯ ಕಂದಾಯ ಸೇವಾ ಅಧಿಕಾರಿ ಮಿಶ್ರಾ ಅವರನ್ನು ಮೊದಲು 2 ವರ್ಷಗಳ ಅವಧಿಗೆ ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ನೇಮಿಸಲಾಯಿತು. 2020ರಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿತು.

ಆ ಬಳಿಕ ಸೆಪ್ಟೆಂಬರ್ 2021 ರಲ್ಲಿ, ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಸರ್ಕಾರವು ನವೆಂಬರ್ 2021ರಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ ಮತ್ತು ಕೇಂದ್ರ ವಿಜಿಲೆನ್ಸ್ ಕಮಿಷನ್ ಕಾಯಿದೆ ಸುಗ್ರೀವಾಜ್ಞೆಗಳನ್ನು ತಂದಿತು. ಇದರಿಂದ ಮಿಶ್ರಾ ಅವರು ಇನ್ನೊಂದು ವರ್ಷ ಮುಂದುವರಿಯಲು ಸಾಧ್ಯವಾಯಿತು.

ಇತ್ತೀಚಿನ ತೀರ್ಪಿನಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ ಮತ್ತು ಕೇಂದ್ರ ವಿಜಿಲೆನ್ಸ್ ಕಮಿಷನ್ ಕಾಯಿದೆಯಲ್ಲಿನ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ದೃಢಪಡಿಸಿತು. ಸಿಬಿಐ ಮುಖ್ಯಸ್ಥ ಮತ್ತು ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು ಅವರ ಕಡ್ಡಾಯ ಎರಡು ವರ್ಷಗಳ ನಂತರ ಸಂಭವನೀಯ ಮೂರು ವರ್ಷಗಳವರೆಗೆ ವಿಸ್ತರಿಸುವ ಅಧಿಕಾರವನ್ನು ಕೇಂದ್ರಕ್ಕೆ ನೀಡಿದೆ. ಆದರೆ ಆನಂತರ ಮತ್ತೆ ಅಧಿಕಾರ ಅವಧಿ ವಿಸ್ತರಿಸುವುದು ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ರಾಜಕೀಯ ಎದುರಾಳಿಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಇಡಿ, ಸಿಬಿಐ ನಂತಹ ತನಿಖಾ ಸಂಸ್ಥೆಗಳ ಸ್ವಾಯುತ್ತತೆ ಕಸಿದುಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿ: ಇಡಿ ಮುಖ್ಯಸ್ಥ ಮಿಶ್ರಾ ಅವಧಿ ವಿಸ್ತರಣೆ: ಬೇರೆ ಯಾರೂ ಸಮರ್ಥರು ಇಲ್ಲವೇ?; ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....