Homeಮುಖಪುಟಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

- Advertisement -
- Advertisement -

ವಿಧಾನಸಭೆ ಚುನಾವಣೆಯ ಹಿನ್ನೆಲೆ ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯವು ಹಂಚಿಕೆಗಾಗಿ ಹಣವನ್ನು ಸಾಗಿಸುತ್ತಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ದೇಶದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಗಳು ಮತ್ತು ಇಡಿ ದಾಳಿಗಳು ಏಕಕಾಲದಲ್ಲಿ ನಡೆಯುತ್ತಿವೆ. ಈ ಚುನಾವಣೆಯಲ್ಲಿ ಹಣವನ್ನು ಹಂಚಲು ಇಡಿ ಹಣವನ್ನು ಸಾಗಿಸುತ್ತಿದೆ ಮತ್ತು ಈ ವಿಷಯದಲ್ಲಿ ಭಾರತದ ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ಸುಮಾರು 508 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂದು ಕ್ಯಾಶ್‌ ಕೊರಿಯರ್‌’ನ ಹೇಳಿಕೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವಿಶ್ಲೇಷಣೆ ಆಧರಿಸಿ ಆರೋಪ ಮಾಡಲಾಗಿದೆ ಎಂದು ಇಡಿ ಹೇಳಿದೆ.

ಬಾಘೇಲ್ ಅವರು ವಿರುದ್ಧ ಆರೋಪಗಳನ್ನು ನಿರಾಕರಿಸಿದ  ಗೆಹ್ಲೂಟ್‌,  EDಯ ಪತ್ರಿಕಾ ಹೇಳಿಕೆಯು ಬಿಜೆಪಿಯ ಎರಡನೇ ಚುನಾವಣಾ ಪ್ರಣಾಳಿಕೆ ಎಂದು ಆರೋಪಿಸಿದ್ದಾರೆ. ಗೆಹ್ಲೋಟ್ ಅವರು ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸರ್ದಾರ್‌ಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಇಡಿ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಕುತೂಹಲಕಾರಿಯಾಗಿದೆ. ಇಡಿ ಮತ್ತು ಐಟಿಯಂತಹ ಏಜೆನ್ಸಿಗಳ ಆದೇಶವು ಆರ್ಥಿಕ ಅಪರಾಧಿಗಳನ್ನು ಬಂಧಿಸುವುದಾಗಿದೆ. ಆದರೆ ಅವರು ಇಡೀ ದೇಶದ ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ಪಕ್ಷದೊಳಗಿನ ಟಿಕೆಟ್‌ ವಿಚಾರದ ಭಿನ್ನಾಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ್‌ ಗೆಹ್ಲೋಟ್, ಅಭ್ಯರ್ಥಿಗಳ ಘೋಷಣೆ ವೇಳೆ ಇದು ಸಾಮಾನ್ಯ ಮತ್ತು ಸ್ವಾಭಾವಿಕ ಪ್ರತಿಕ್ರಿಯೆ. ಈ ಎಲ್ಲಾ ಅಸಮಾಧಾನಗಳನ್ನು ಸರಿಪಡಿಸಲಾಗುವುದು ಮತ್ತು ಕಾಂಗ್ರೆಸ್‌ನ್ನು ಮರಳಿ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಂಡ್ಲುಪೇಟೆ: ಬಂಡೀಪುರ ಅರಣ್ಯದಲ್ಲಿ ಗುಂಡಿನ ಚಕಮಕಿ: ಯುವಕ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...