ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಂದ ಜಾರಿ ನಿರ್ದೇಶನಾಲಯ (ಇಡಿ) ಅನುಮತಿ ಪಡೆದುಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಈ ಬೆಳವಣಿಗೆಯು, ದೆಹಲಿ ವಿಧಾನಸಭೆ ಚುನಾವಣೆ ಸಮೀದಲ್ಲಿರುವಾಗ ಮುಂಚೆಯೇ ನಡೆಯುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ನಾಲ್ಕನೇ ಅವಧಿಗೆ ಬಿಜೆಪಿಯನ್ನು ಮಣಿಸುವ ಗುರಿಯನ್ನು ಹೊಂದಿದೆ.
ನವೆಂಬರ್ 6 ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಇಡಿ ಡಿಸೆಂಬರ್ 5 ರಂದು 2002 ರ ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ಅಡಿಯಲ್ಲಿ ಕಾನೂನು ಕ್ರಮಕ್ಕೆ ಅನುಮತಿ ಕೋರಿತು. ಲೆಫ್ಟಿನೆಂಟ್ ಗವರ್ನರ್‌ಗೆ ಬರೆದ ಪತ್ರದಲ್ಲಿ, “ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವನ್ನು ಕಂಡುಹಿಡಿಯಲಾಗಿದೆ” ಎಂದು ಇಡಿ ಹೇಳಿದೆ.
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಅಡಿಯಲ್ಲಿ ಅಗತ್ಯವಿರುವಂತೆ ಸರ್ಕಾರದ ಪೂರ್ವಾನುಮತಿಯಿಲ್ಲದೆ ಸಾರ್ವಜನಿಕ ಸೇವಕರು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನವೆಂಬರ್ 6 ರಂದು ತೀರ್ಪು ನೀಡಿದೆ. ಈ ಹಿಂದೆ, ಸಾರ್ವಜನಿಕ ಸೇವಕರ ವಿರುದ್ಧ ಇಡಿ ಸಲ್ಲಿಸಿದ ಚಾರ್ಜ್‌ಶೀಟ್‌ಗಳಿಗೆ (ಪ್ರಾಸಿಕ್ಯೂಷನ್ ದೂರುಗಳು) ಪ್ರಾಸಿಕ್ಯೂಷನ್ ಅನುಮತಿ ಅಗತ್ಯವಿರಲಿಲ್ಲ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ರಾಜ್ಯ ಪೊಲೀಸರಂತಹ ಇತರ ತನಿಖಾ ಸಂಸ್ಥೆಗಳಿಗೆ ಅನುಮತಿ ಪಡೆಯಲು ಇದು ಕಡ್ಡಾಯವಾಗಿದೆ.
ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ಮತ್ತು ಜೂನ್ 26 ರಂದು ಇಡಿ ಮತ್ತು ಸಿಬಿಐ ಕ್ರಮವಾಗಿ ಮಾರ್ಚ್ 21 ಮತ್ತು ಜೂನ್ 26 ರಂದು ಅಬಕಾರಿ ನೀತಿ ಹಗರಣದಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿಸಿತ್ತು. ಈ ಎರಡೂ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.
ನವೆಂಬರ್‌ನಲ್ಲಿ, ಕೇಜ್ರಿವಾಲ್ ಅವರು ಪ್ರಕರಣದಲ್ಲಿ ಇಡಿಯ ಏಳನೇ ಪೂರಕ ಚಾರ್ಜ್‌ಶೀಟ್‌ನ ಅರಿವನ್ನು ತೆಗೆದುಕೊಳ್ಳುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.
“ಲೆಫ್ಟಿನೆಂಟ್ ಗವರ್ನರ್ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದ್ದರೆ, ಇಡಿ ಅನುಮತಿಯ ಪ್ರತಿಯನ್ನು ಏಕೆ ತೋರಿಸುತ್ತಿಲ್ಲ? ಈ ಸುದ್ದಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಸುದ್ದಿ ಎಂಬುದು ಸ್ಪಷ್ಟವಾಗಿದೆ. ಬಾಬಾ ಸಾಹೇಬ್ ಅವಮಾನದ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯಲು ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಿ” ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಎಎಪಿಯ ಮುಖ್ಯ ವಕ್ತಾರ ಪ್ರಿಯಾಂಕಾ ಕಕ್ಕರ್ ಅವರು ಲೆಫ್ಟಿನೆಂಟ್ ಗವರ್ನರ್ ನೀಡಿದ ಮಂಜೂರಾತಿ ಪ್ರತಿಯನ್ನು ತೋರಿಸಲು ಇಡಿಯನ್ನು ಕೇಳಿದರು. “ಎಲ್ ಜಿ ಸಕ್ಸೇನಾ ಅವರು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಇಡಿಗೆ ಯಾವುದೇ ಅನುಮತಿ ನೀಡಿಲ್ಲ. ಇದು ಸುಳ್ಳು ಸುದ್ದಿ, ಇಡಿಗೆ ಮಂಜೂರಾತಿ ನೀಡಿದ್ದರೆ, ಅದರ ಪ್ರತಿಯನ್ನು ತೋರಿಸಿ” ಎಂದು ಕಕ್ಕರ್ ಹೇಳಿದರು.
ಇದನ್ನೂ ಓದಿ; ಉತ್ತರ ಪ್ರದೇಶ| ವ್ಯಕ್ತಿಗೆ ಡಿಕ್ಕಿ ಹೊಡೆದು 30 ಕಿ.ಮೀ. ಎಳೆದೊಯ್ದ ಸರ್ಕಾರಿ ಅಧಿಕಾರಿ ಕಾರು


