Homeಮುಖಪುಟವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

ವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

- Advertisement -
- Advertisement -

ವಂಚನೆ ಮಾಡಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಮಾಡಿದ ಆರ್ಥಿಕ ವಂಚನೆಯಿಂದಾಗಿ ನಷ್ಟ ಅನುಭವಿಸಿದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ , 8,441 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವರ್ಗಾಯಿಸಿದೆ. ಇದುವರೆಗೆ ಒಟ್ಟು 9,371.17 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.

ಪರಾರಿಯಾದ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ, 22,586 ಕೋಟಿ ವಂಚಿಸಿದ್ದಾರೆ. ಅದರಲ್ಲಿ 80.45% (, 18,170 ಕೋಟಿ)  ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂವರು ವಂಚಕರಿಂದ 18,170.02 ಕೋಟಿ ರೂಗಳ (ಬ್ಯಾಂಕುಗಳ ಒಟ್ಟು ನಷ್ಟದ 80.45%) ಆಸ್ತಿಯನ್ನು ಪಿಎಂಎಲ್‌ಎ ಅಡಿಯಲ್ಲಿ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಈ ಪೈಕಿ, ಒಂದು ಭಾಗ (9,371.17 ಕೋಟಿ ರೂ)ದ ಆಸ್ತಿಯನ್ನು ಸರ್ಕಾರಿ ಬ್ಯಾಂಕುಗಳು ಮತ್ತು ಸರ್ಕಾರಕ್ಕೆ ಇಡಿ ವರ್ಗಾಯಿಸಿದೆ.

ಇದನ್ನೂ ಓದಿ: ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಮುಂಬೈನ ವಿಶೇಷ ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಯ ಆದೇಶದ ಪ್ರಕಾರ ಸಂಸ್ಥೆಯು ಸುಮಾರು 6,600 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಎಸ್‌ಬಿಐ ನೇತೃತ್ವದ ಒಕ್ಕೂಟ ಬ್ಯಾಂಕುಗಳಿಗೆ ವರ್ಗಾಯಿಸಿದೆ ಎಂದು ತಿಳಿಸಿದೆ. ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಹಣವು ಜೂನ್ 25 ರೊಳಗೆ ದೊರೆಯುತ್ತದೆ ಎಂದು ನಿರೀಕ್ಷಿಸಲಾಗಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಡಿಆರ್‌ಟಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಷೇರುಗಳನ್ನು 5,824.50 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಮೂವರು ಆರೋಪಿಗಳು ವಾಸಿಸುತ್ತಿರುವ ದೇಶಗಳಿಗೆ ಹಸ್ತಾಂತರದ ಮನವಿಗಳನ್ನು ಕಳುಹಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಜಯ್‌‌‌‌‌‌‌‌‌‌‌‌‌‌‌ ಮಲ್ಯ ಮತ್ತು‌‌‌‌‌‌‌‌‌‌‌‌ ನೀರವ್ ಮೋದಿ ಲಂಡನ್‌ನಲ್ಲಿ ವಾಸಿಸುತ್ತಿದ್ದರೆ, ಮೆಹುಲ್ ಚೋಕ್ಸಿ ಭಾರತದಿಂದ ಓಡಿಹೋದ ನಂತರ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಕಾಣಿಸಿಕೊಂಡಿದ್ದಾರೆ.

ಹಸ್ತಾಂತರ ಪ್ರಕ್ರಿಯೆ ಕುರಿತು ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಬಹುತೇಕ ಅಂತಿಮವಾಗಿದೆ. ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಕೂಡ ಅಂತಿಮವಾಗಿದೆ. ಆದರೆ, ಮೆಹುಲ್ ಚೋಕ್ಸಿ ಮಾತ್ರ ಹಸ್ತಾಂತರ ಪ್ರಕ್ರಿಯೆ ಕುರಿತು ಆಂಟಿಗುವಾದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: TRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...