Homeಮುಖಪುಟಕೇರಳ ಸಿಎಂ ಪಿಣರಾಯಿ ವಿಜಯನ್ ಮಗಳ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಇಡಿ

ಕೇರಳ ಸಿಎಂ ಪಿಣರಾಯಿ ವಿಜಯನ್ ಮಗಳ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಇಡಿ

- Advertisement -
- Advertisement -

ಚುನಾವಣೆ ಸಮೀಪಿಸುತ್ತಿದ್ದಂತೆಯೇ ದೇಶದ ವಿಪಕ್ಷ ನಾಯಕರ ಮೇಲೆ ದಾಳಿಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ, ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ಮತ್ತು ಅವರ ಐಟಿ ಕಂಪನಿ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಮಿನರಲ್ ಕಂಪನಿಯಿಂದ ವೀಣಾ ವಿಜಯನ್ ಅವರ ಸಂಸ್ಥೆಗೆ ಅಕ್ರಮವಾಗಿ ಹಣ ಪಾವತಿಯಾಗಿದೆ ಎಂದು ಆರೋಪಿಸಲಾಗಿದೆ.

ಗಂಭೀರ ವಂಚನೆ ದೂರಿನ ಆಧಾರದ ಮೇಲೆ ಇಡಿ ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ಕೇಂದ್ರದಿಂದ ತನಿಖೆ ನಡೆಸುವಂತೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೊಚ್ಚಿ ಮೂಲದ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್‌) ಖಾಸಗಿ ಕಂಪನಿಯು 2017 ಮತ್ತು 2018ರ ನಡುವೆ ಯಾವುದೇ ಸೇವೆಗಳನ್ನು ಒದಗಿಸದಿದ್ದರೂ ಸಹ ವೀಣಾ ವಿಜಯನ್ ಒಡೆತನದ ಎಕ್ಸಾಲಾಜಿಕ್ ಸಲ್ಯೂಷನ್ ಕಂಪನಿಗೆ ₹1.72 ಕೋಟಿ ಹಣ ಪಾವತಿಸಿದೆ ಎಂದು ಆರೋಪಿಸಲಾಗಿದೆ.

“ಪ್ರಮುಖ ವ್ಯಕ್ತಿಯೊಂದಿಗೆ ವೀಣಾ ಅವರ ಸಂಪರ್ಕದಿಂದಾಗಿ ಯಾವುದೇ ಸೇವೆಗಳನ್ನು ಒದಗಿಸದಿದ್ದರೂ, ಸಿಎಂಆರ್‌ಎಲ್ ಎಕ್ಸಾಲಾಜಿಕ್‌ಗೆ ಮಾಸಿಕ ಪಾವತಿಗಳನ್ನು ಮಾಡಿದೆ ಎಂದು ವರದಿಯೊಂದು ಹೇಳಿಕೊಂಡಿದೆ.

ಗಂಭೀರ ವಂಚನೆ ಬಗ್ಗೆ ತನಿಖೆಯ ವಿರುದ್ಧ ಕಳೆದ ತಿಂಗಳು ಎಕ್ಸಾಲಾಜಿಕ್ ಕಂಪನಿಯು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.  ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದ್ದು, “ಇಂತಹ ನಿಯೋಜನೆಗಾಗಿ ಕೇಂದ್ರ ಸರ್ಕಾರದ ಕೈಗಳಿಗೆ ಸಂಕೋಲೆ ಹಾಕಲು ಸಾಧ್ಯವಿಲ್ಲ” ಎಂದು ಹೇಳಿತ್ತು.

ಜನವರಿಯಲ್ಲಿ ಕೇರಳ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ವಿಜಯನ್, ತಮ್ಮ ಪತ್ನಿಯ ನಿವೃತ್ತಿ ಹಣವನ್ನು ಬಳಸಿಕೊಂಡು ತಮ್ಮ ಪುತ್ರಿ ಕಂಪನಿಯನ್ನು ಪ್ರಾರಂಭಿಸಿದ್ದಾರೆ. ತಮ್ಮ ಮತ್ತು ಅವರ ಕುಟುಂಬದ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸುಳ್ಳು ಎಂದು ಹೇಳಿದ್ದರು.

ಇದನ್ನೂ ಓದಿ; ಜಾರಿ ನಿರ್ದೇಶನಾಲಯದ ಕಸ್ಟಡಿ ನಂತರ ಸಿಬಿಐ ವಶಕ್ಕೆ ಅರವಿಂದ್ ಕೇಜ್ರಿವಾಲ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...