Homeಮುಖಪುಟಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

ಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

- Advertisement -
- Advertisement -

ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ತರಹೇವಾರಿ ದಾಳಿಗಳನ್ನು ಸರ್ಕಾರ ನಡೆಸುತ್ತಿರುವುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಲದಲ್ಲಿ ನೇರವಾಗಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿತ್ತು. ಆದರೆ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವ ಈ ಕಾಲಘಟ್ಟದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾನಾ ಮಾರ್ಗಗಳನ್ನು ಪ್ರಭುತ್ವ ಕಂಡುಕೊಂಡಿದೆ.

ಪತ್ರಿಕೆಗಳಿಗೆ ಸರ್ಕಾರಿ ಜಾಹೀರಾತುಗಳನ್ನು ತಡೆದು ತೊಂದರೆ ಕೊಡುವುದು, ಟ್ರೋಲ್‌ ಪಡೆಯ ಮೂಲಕ ದಾಳಿ ನಡೆಸುವುದು ಒಂದು ಕಡೆಯಾದರೆ ಆದಾಯ ತೆರಿಗೆ (ಐ.ಟಿ.), ಜಾರಿ ನಿರ್ದೇಶನಾಲಯ (ಇ.ಡಿ.) ಥರದ ಸಂಸ್ಥೆಗಳ ಮೂಲಕ ದಾಳಿ, ಸರ್ಚ್, ಪರಿಶೀಲನೆ ನಡೆಸುವ ಕೆಲಸವೂ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಈ ವಿದ್ಯಮಾನಗಳು ಆಗಾಗ್ಗೆ ವರದಿಯಾಗುತ್ತಿವೆ.

2002ರ ಗುಜರಾತ್ ಗಲಭೆ ಮತ್ತು ಮೋದಿ ಸರ್ಕಾರದ ಬಹುಸಂಖ್ಯಾತವಾದದ ಕುರಿತು ಎರಡು ಭಾಗಗಳಲ್ಲಿ ಬಿಬಿಸಿ ಸುದ್ದಿಸಂಸ್ಥೆಯು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಈ ಸಾಕ್ಷ್ಯಚಿತ್ರಗಳನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ರೈಡ್‌ ಮಾಡಿದ್ದಾರೆ. ಹೀಗಾಗಿ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ವಿರುದ್ಧ ಐ.ಟಿ., ಇ.ಡಿ.ಗಳನ್ನು ಸರ್ಕಾರ ಬಳಸುತ್ತದೆ ಎಂಬ ಟೀಕೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

“ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದೂ ಮೂಲಗಳು ಹೇಳಿವೆ. ಬಿಬಿಸಿಯ ಮೇಲೆ ದಾಳಿ ಮಾಡಿದಂತೆಯೇ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹಲವು ಮಾಧ್ಯಮಗಳ ಮೇಲೆ ಐ.ಟಿ. ಮತ್ತು ಇ.ಡಿ. ಬಾಣಗಳನ್ನು ಬಳಸಿದೆ.

ನ್ಯಾಷನಲ್ ಹೆರಾಲ್ಡ್‌ ಮೇಲೆ ಇ.ಡಿ. ರೈಡ್‌

ಕಾಂಗ್ರೆಸ್‌ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಇ.ಡಿ. ಪ್ರಹಾರ ನಡೆಸಿದೆ. ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದರು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು ವಿಚಾರಣೆಗೂ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.

ನ್ಯೂಸ್‌ ಕ್ಲಿಕ್‌, ನ್ಯೂಸ್‌ ಲಾಂಡ್ರಿ ಮೇಲೆ ಕಾರ್ಯಾಚರಣೆ

ಪರ್ಯಾಯ ಮಾಧ್ಯಮಗಳಾಗಿ ಭಾರೀ ಸಂಚಲನ ಮೂಡಿಸಿರುವ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು 2021ರ ಫೆಬ್ರುವರಿಯಲ್ಲಿ ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದರು. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದರು.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್‌’ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ನ್ಯೂಸ್‌ ಕ್ಲಿಕ್ ಆಗಿದೆ.

ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ‘ನ್ಯೂಸ್‌ ಲಾಂಡ್ರಿ’. ಗ್ರೌಂಡ್ ರಿಪೋರ್ಟ್‌ಗಳಿಗೆ ಈ ಜಾಲತಾಣ ಹೆಸರುವಾಸಿಯಾಗಿದೆ. ಜೊತೆಗೆ ಖಚಿತ ಅಂಕಿ-ಅಂಶಗಳನ್ನು ಆಧರಿಸಿ ಸುದ್ದಿಯ ವಿಭಿನ್ನ ದೃಷ್ಟಿಕೋನಗಳನ್ನು ತೆರೆದಿಡುತ್ತಿದೆ. ಪ್ರಭುತ್ವದ ಪರ ಕೆಲಸ ಮಾಡುವ ಮಾಧ್ಯಮಗಳನ್ನು ವಿಶಿಷ್ಟವಾಗಿ ಗೇಲಿ ಮಾಡುವಲ್ಲಿ ‘ನ್ಯೂಸ್‌ಲಾಂಡ್ರಿ’ ಹೆಸರುವಾಸಿ.

ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ. ಸರ್ಕಾರದ ರೈತ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯನ್ನು ವರದಿ ಮಾಡಿದ ಕಾರಣದಿಂದ ಈ ಸಂಸ್ಥೆಗಳ ಮೇಲೆ ಐಟಿ ಸರ್ಚ್ ಮಾಡಿದೆ ಎಂಬ ಆರೋಪಗಳು ಬಂದಿದ್ದವು.

ದೈನಿಕ್‌ ಭಾಸ್ಕರ್‌‌ ಮೇಲೆ ರೈಡ್‌

ಉತ್ತರ ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದೈನಿಕ್‌ ಭಾಸ್ಕರ್ ಒಂದಾಗಿದ್ದು, 12 ರಾಜ್ಯಗಳಲ್ಲಿ ಈ ಪತ್ರಿಕೆಯ ಆವೃತ್ತಿಗಳಿವೆ. ಸುಮಾರು 65 ವರ್ಷಗಳ ಇತಿಹಾಸವಿರುವ ಈ ಪತ್ರಿಕೆ ಪ್ರಭುತ್ವಕ್ಕೆ ಸೊಪ್ಪು ಹಾಕುವುದಿಲ್ಲ ಎಂಬ ಪ್ರಶಂಸೆಗೆ ಪಾತ್ರವಾಗಿದೆ.

‘ದೈನಿಕ್ ಭಾಸ್ಕರ್‌’ ಸಂಸ್ಥೆಯು ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಸಂಸ್ಥೆಯ ಪ್ರಧಾನ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳ ಮೇಲೆ 2021ರ ಜುಲೈ 12ರಂದು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದೇಶದ ಒಟ್ಟು ಆರು ರಾಜ್ಯಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದಿತ್ತು.

‘ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳನ್ನು ಮನಬಂದಂತೆ ವಿಲೇವಾರಿ ಮಾಡಲಾಗಿದೆ. ಸರ್ಕಾರವು ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಯತ್ನಿಸುತ್ತಿದೆ. ಆದರೆ, ಗಂಗೆ ತನ್ನ ಒಡಲಲ್ಲಿ ಇರುವ ಹೆಣಗಳನ್ನು ಹೊರಹಾಕುತ್ತಿದ್ದಾಳೆ’ ಎಂದು ದೈನಿಕ್‌ ಭಾಸ್ಕರ್‌ ಪತ್ರಿಕೆಯು 2021ರ ಜೂನ್‌ ಕೊನೆಯ ವಾರದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ವೈಫಲ್ಯವನ್ನು ಎತ್ತಿ ಹಿಡಿದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ಭಾರತ್ ಸಮಾಚಾರ್‌ ಕಚೇರಿ ಪರಿಶೀಲನೆ

ಉತ್ತರ ಪ್ರದೇಶದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಒಂದಾದ ಭಾರತ್ ಸಮಾಚಾರ್‌ ಕಚೇರಿಯ ಮೇಲೆ 2021ರ ಜುಲೈ 12ರಂದು ಆದಾಯ ತೆರಿಗೆ ಇಲಾಖೆ ಪರಿಶೀಲನೆ ನಡೆಸಿತ್ತು.

ಆದಾಯ ತೆರಿಗೆ ಪಾವತಿಯಲ್ಲಿ ಮತ್ತು ಕಂಪನಿಗೆ ಸಂಬಂಧಿಸಿದ ಖರೀದಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಸರ್ಕಾರವನ್ನು ಎದುರು ಹಾಕಿಕೊಂಡಿದ್ದ ಈ ಪತ್ರಿಕೆಯು ಐಟಿ ದಾಳಿಗೂ ಮುನ್ನ ಕೋವಿಡ್ ವೈಫಲ್ಯಗಳನ್ನು ಸರಣಿಯಾಗಿ ತೆರೆದಿಟ್ಟಿತ್ತು. “ಕೋವಿಡ್‌ ಕಾರಣಕ್ಕೆ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಚ್ಚಿಟ್ಟಿದೆ. ಆಕ್ಸಿಜನ್‌ ಪೂರೈಕೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದಲೇ ಎರಡನೇ ಅಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ” ಎಂದು 2021ರ ಜೂನ್‌ ಮತ್ತು ಜುಲೈನಲ್ಲಿ ಒಂದರ ಹಿಂದೆ ಒಂದು ವರದಿಯನ್ನು ಪ್ರಸಾರ ಮಾಡಿತ್ತು. ಈ ಕಾರಣಕ್ಕಾಗಿಯೇ ಐಟಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

‘ನೀವು ಎಷ್ಟು ಬೇಕಾದರೂ ದನಿ ಅಡಗಿಸಲು ಯತ್ನಿಸಿ, ನಾವೂ ಅಷ್ಟೇ ದೊಡ್ಡ ದನಿಯಲ್ಲಿ ಸತ್ಯ ಹೇಳುತ್ತೇವೆ. ನಾವು ಮೊದಲೂ ಹೆದರುತ್ತಿರಲಿಲ್ಲ, ಈಗಲೂ ಹೆದರುವುದಿಲ್ಲ’ ಎಂದು ಭಾರತ್ ಸಮಾಚಾರ್‌ ಚಾಟಿ ಬೀಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...