Homeಮುಖಪುಟಎಸ್ಸಿ-ಎಸ್ಟಿ ಕಾಯ್ದೆಯಡಿ ಎಫ್‌ಐಆರ್‌ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ 'ED' ಅಧಿಕಾರಿಗಳು

ಎಸ್ಸಿ-ಎಸ್ಟಿ ಕಾಯ್ದೆಯಡಿ ಎಫ್‌ಐಆರ್‌ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ‘ED’ ಅಧಿಕಾರಿಗಳು

- Advertisement -
- Advertisement -

ಜಾರ್ಖಾಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ತನಿಖಾ ಸಂಸ್ಥೆ ಕಿರುಕುಳ ನೀಡಿದೆ ಮತ್ತು ತಮ್ಮ ಇಡೀ ಸಮುದಾಯವನ್ನು ದೂಷಣೆ ಮಾಡಿದೆ ಎಂದು ಆರೋಪಿಸಿ ದಾಖಲಿಸಿದ್ದ ಎಫ್‌ಐಆರ್‌ನ್ನು  ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಎಸ್ಸಿ-ಎಸ್ಟಿ ಕಾಯ್ದೆಯಡಿ ಮಾಜಿ ಸಿಎಂ ಹೇಮಂತ್ ಸೊರೆನ್ ತನ್ನ ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ಹೈಕೋರ್ಟ್‌ಗೆ ಫೆಬ್ರವರಿ 3 ರಂದು ಅರ್ಜಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಅವರನ್ನು ಬಂಧಿಸಿದ್ದಾರೆ.

600 ಕೋಟಿ ಭೂ ಹಗರಣಕ್ಕೆ ಸಂಬಂಧಿಸಿದ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಏಳು ಸಮನ್ಸ್‌ಗಳನ್ನು ಹೇಮಂತ್ ಸೊರೆನ್‌ಗೆ ನೀಡಲಾಗಿತ್ತು. ಬಂಧನದ ನಿರೀಕ್ಷೆಯಲ್ಲಿದ್ದ ಸೊರೆನ್‌ ಮಂಗಳವಾರ ಮೈತ್ರಿಕೂಟದ ಶಾಸಕರೊಂದಿಗೆ ಸಭೆ ನಡೆಸಿ ತಮ್ಮ ಉತ್ತರಾಧಿಕಾರಿಯ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದರು. ಅವರ ಪತ್ನಿ ಕಲ್ಪನಾ ಸೊರೆನ್‌ಗೆ ಸಿಎಂ ಹುದ್ದೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳನ್ನು ಗಮನಿಸಿ ರಾಜ್ಯದ ಸಾರಿಗೆ ಸಚಿವರಾಗಿದ್ದ ಚಂಪೈ ಸೊರೆನ್ ಅವರನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಲಾಗಿತ್ತು.

81 ಸದಸ್ಯ ಬಲದ ಜಾರ್ಖಾಂಡ್‌  ವಿಧಾನಸಭೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ 29 ಸ್ಥಾನಗಳನ್ನು ಹೊಂದಿದೆ, ಅದರ ಮಿತ್ರಪಕ್ಷ ಕಾಂಗ್ರೆಸ್ 17 ಮತ್ತು ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ತಲಾ 1 ಸ್ಥಾನಗಳನ್ನು ಹೊಂದಿವೆ. 43 ಶಾಸಕರ ಬೆಂಬಲ INDIA  ಮೈತ್ರಿಕೂಟ ಮತ್ತೆ ರಾಜ್ಯದಲ್ಲಿ ಅಧಿಕಾರವನ್ನು ನಡೆಸಲಿದೆ. ವಿಶೇಷ ಅಧಿವೇಶನವನ್ನು ಸುಗಮವಾಗಿ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು ಜಾರ್ಖಂಡ್ ವಿಧಾನಸಭೆ ಸುತ್ತ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...