Homeಮುಖಪುಟಇಡಿ ಆರೋಪಿಗಳನ್ನು ಬಂಧಿಸುವಾಗ ಲಿಖಿತ ರೂಪದಲ್ಲಿ ಕಾರಣ ನೀಡಬೇಕು: ಸುಪ್ರೀಂ ಕೋರ್ಟ್‌

ಇಡಿ ಆರೋಪಿಗಳನ್ನು ಬಂಧಿಸುವಾಗ ಲಿಖಿತ ರೂಪದಲ್ಲಿ ಕಾರಣ ನೀಡಬೇಕು: ಸುಪ್ರೀಂ ಕೋರ್ಟ್‌

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆರೋಪಿಗಳನ್ನು ಬಂಧಿಸುವ ಸಂದರ್ಭದಲ್ಲಿ ಅವರಿಗೆ ಬಂಧನದ ಕಾರಣವನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನೀಡಿದ್ದ ತೀರ್ಪಿನ ಪುನರ್‌ಪರಿಶೀಲನೆಯನ್ನು ಕೋರಿ ಕೇಂದ್ರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

“ಪುನರ್‌ಪರಿಶೀಲನೆ ಅರ್ಜಿಗಳು ಮತ್ತು ಸಂಬಂಧಿತ ದಾಖಲೆಗಳನ್ನು ನಾವು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ” ಎಂದು ಮಂಗಳವಾರ ವಿಚಾರಣೆ ಸಂದರ್ಭ ಹೇಳಿದ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಸಂಜಯ ಕುಮಾರ್ ಅವರ ಪೀಠ,‌ “ತೀರ್ಪಿನ ಪುನರ್‌ಪರಿಶೀಲನೆ ಅಗತ್ಯವಿರುವ ಯಾವುದೇ ದೋಷಗಳು ಅದರಲ್ಲಿ ನಮಗೆ ಕಂಡುಬಂದಿಲ್ಲ” ಎಂದಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯಡಿ ಇಡಿಯಿಂದ ಬಂಧನಕ್ಕೊಳಗಾದವರು ತಮ್ಮ ಬಂಧನಕ್ಕೆ ಕಾರಣಗಳನ್ನು ತಿಳಿದುಕೊಳ್ಳುವ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕನ್ನು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ 2023ರ ಅಕ್ಟೋಬರ್ 3ರಂದು ನೀಡಿದ್ದ ತೀರ್ಪಿನಲ್ಲಿ ತಿಳಿಸಿತ್ತು.

ಬಂಧನದ ಬಳಿಕ ಕಾಯ್ದೆಯ ಕಲಂ 45ರಡಿ ಜಾಮೀನಿಗಾಗಿ ಕಠಿಣ ಷರತ್ತುಗಳನ್ನು ಪೂರೈಸಬೇಕಾಗುವುದರಿಂದ ಆರೋಪಿಗಳು ತಮ್ಮ ಬಂಧನಕ್ಕೆ ಕಾರಣಗಳನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಕೋರ್ಟ್ ಹೇಳಿತ್ತು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವನ್ನು ಹೊತ್ತಿರುವ ಒ3ಒರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾದ ಪಂಕಜ್‌ ಬನ್ಸಾಲ್ ಮತ್ತು ಬಸಂತ್‌ ಬನ್ಸಾಲ್ ಅವರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿತ್ತು.

ತಮ್ಮ ಬಂಧನವನ್ನು ರದ್ದುಗೊಳಿಸಲು ನಿರಾಕರಿಸಿದ್ದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶವನ್ನು ಪಂಕಜ್‌ ಬನ್ಸಾಲ್ ಮತ್ತು ಬಸಂತ್‌ ಬನ್ಸಾಲ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅವರ ಮೇಲ್ಮನವಿಗಳನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುವಂತೆ ಆದೇಶಿಸಿತ್ತು.

ಇದನ್ನೂ ಓದಿ : ಇಡಿ ಬಂಧನ, ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..’; ಪ್ರಧಾನಿ ಮೋದಿ...

0
'ದೇಶದ ಬಡವರು ಅವರ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ. 'ಪ್ರತಿಪಕ್ಷಗಳ ಇಂಡಿಯಾ...