Homeಮುಖಪುಟವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ED ನೋಟಿಸ್

ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ED ನೋಟಿಸ್

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೂನ್ 8 ರೊಳಗೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಹೊರಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಗ್ವಿ, “ಹಣ ವರ್ಗಾವಣೆ ಅಥವಾ ಹಣ ಸಂಗ್ರಹದ ಯಾವುದೇ ಸಾಕ್ಷ್ಯಗಳು ಇಲ್ಲ. ಆದರೂ ಸೋನಿಯಾ ಗಾಂಧಿಯವರು ಜೂನ್ 8 ರೊಳಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಆದರೆ ರಾಹುಲ್ ಗಾಂಧಿಯವರಿಗೆ ವಿನಾಯಿತಿ ಕೋರಿ ಪತ್ರ ಬರೆಯುತ್ತೇವೆ” ಎಂದಿದ್ದಾರೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ)ಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಅವರ ಹೇಳಿಕೆಗಳನ್ನು ದಾಖಲಿಸಲು ಸಂಸ್ಥೆ ಬಯಸಿದೆ ED ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಇತ್ತೀಚೆಗೆ ಜಾರಿನ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು.

ಇದನ್ನೂ ಓದಿ: ಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ – ಸಿಎಂಗೆ ಬಹಿರಂಗ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...