Homeಮುಖಪುಟಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

ಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

- Advertisement -
- Advertisement -

ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರೊಬ್ಬರ ಮನೆಯಲ್ಲಿ ಪರಿಶೀಲನೆ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳ ತಂಡದ ಮೇಲೆ ನೂರಾರು ಜನರ ಗುಂಪು ದಾಳಿ ನಡೆಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಳಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಹುಕೋಟಿ ಪಡಿತರ ಹಗರಣ ಪ್ರಕರಣ ಸಂಬಂಧ ಸ್ಥಳೀಯ ಟಿಎಂಸಿ ಸಂಚಾಲಕ ಷಹಜಹಾನ್ ಶೇಖ್ ಅವರ ಮನೆಯಲ್ಲಿ ಪರಿಶೀಲನೆ ನಡೆಸಲು ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಉದ್ರಿಕ್ತಗೊಂಡ ಸ್ಥಳೀಯರು ಕಲ್ಲು, ಇಟ್ಟಿಗೆ, ದೊಣ್ಣೆಗಳಿಂದ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನೂರಾರು ಜನರ ಗುಂಪು ದಾಳಿ ನಡೆಸಿದ್ದರಿಂದ ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಜನರು ಹಿಂಸಾತ್ಮಕವಾಗಿ ವರ್ತಿಸಿದ್ದರಿಂದ ಉಳಿದ ಅಧಿಕಾರಿಗಳು ಜೀವ ಉಳಿಸಿಕೊಳ್ಳಲು ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಜನರು ಉದ್ರಿಕ್ತಗೊಂಡಿದ್ದರಿಂದ ಅಧಿಕಾರಿಗಳು ಟಿಎಂಸಿ ನಾಯಕನ ಮನೆ ಪರಿಶೀಲನೆ ನಡೆಸಿಲ್ಲ. ಆಕ್ರೋಶಿತ ಗುಂಪು ಅಧಿಕಾರಿಗಳನ್ನು ಕೊಲ್ಲಲು ಮುಂದಾಗಿತ್ತು ಎಂದು ಇಡಿ ಪ್ರಕಟನೆಯಲ್ಲಿ ತಿಳಿಸಿದೆ.

ಸುಮಾರು 800 ರಿಂದ 1000 ಸಾವಿರ ಜನರು ಇಡಿ ಅಧಿಕಾರಿಗಳು ಮತ್ತು 27 ಅರೆಸೇನಾ ಪಡೆ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ತೆರಳಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ಈ ಸಂಬಂಧ ನಾವು ಕಾನೂನು ಸಲಹೆ ಪಡೆಯುತ್ತಿದ್ದೇವೆ. ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನಿಡಿದ್ದೇವೆ ಎಂದು ಇಡಿ ಹೇಳಿದೆ.

ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಆಹಾರ ಇಲಾಖೆ ಸಚಿವ ಜ್ಯೋತಿಪ್ರಿಯೊ ಮುಲ್ಲಿಕಿನ್ ಅವರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಇಡಿ ಬಂಧಿಸಿದೆ. ಷಹಜಹಾನ್ ಶೇಖ್ ಬಂಧಿತ ಸಚಿವನ ಆಪ್ತ ಎನ್ನಲಾಗಿದೆ.

ಘಟನೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಪಿ ಗೋಪಾಲಿಕಾ, ಗೃಹ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಮತ್ತು ಪೊಲೀಸ್ ಮಹಾನಿರ್ದೇಶಕ ರಾಜೀವ್ ಕುಮಾರ್ ಅವರಿಂದ ಘಟನೆಯ ಕುರಿತು ವರದಿ ಕೇಳಿದ್ದಾರೆ.

ಘಟನೆಯ ಹೊಣೆಯನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು. ಸರ್ಕಾರ ಸರಿಯಾಗಿ ಕೆಲಸ ಮಾಡಡಿದ್ದರೆ ಸಂವಿಧಾನ ಅದರ ಕಾರ್ಯ ನಿರ್ವಹಿಸಲಿದೆ. ಸಂವಿಧಾನದಲ್ಲಿ ನನಗಿರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಳ್ಳಲು ಸಿದ್ದನಿದ್ದೇನೆ ಎಂದು ರಾಜ್ಯಪಾಲರು ವಿಡಿಯೋ ಸಂದೇಶದ ಮೂಲಕ ಹೇಳಿದ್ದಾರೆ. ಈ ಮೂಲಕ ರಾಷ್ಟ್ರಪತಿ ಆಳ್ವಿಕೆ ಹೇರುವ ಎಚ್ಚರಿಕೆ ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿದೆ. ದೆಹಲಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, ” ಇಡಿ ಅಧಿಕಾರಿಗಳ ಮೇಲೆ ಟಿಎಂಸಿ ಗೂಂಡಾಗಳು ಮತ್ತು ಬಂಗಾಳಕ್ಕೆ ನುಸುಳಿರುವ ರೋಹಿಂಗ್ಯಾಗಳು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೂಗಿನ ನೇರಕ್ಕೆ ಪಶ್ಚಿಮ ಬಂಗಾಳದಲ್ಲಿ ಜಂಗಲ್ ರಾಜ್ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಪರಿತರ ಆಹಾರ ಸಾಮಾಗ್ರಿಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರುವ ಸಂಬಂಧ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2020 ಮತ್ತು 2022 ರ ನಡುವೆ ಐದು ಎಫ್‌ಐಆರ್‌ಗಳು ದಾಖಲಾಗಿವೆ. ಇದನ್ನು ಆಧರಿಸಿ ಇಡಿ ಏಪ್ರಿಲ್ 2022ರಲ್ಲಿ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿದೆ.

ಅಕ್ಟೋಬರ್ 14, 2023 ರಂದು, ಪಡಿತರ ವಿತರಕರಿಗೆ ಸರಬರಾಜು ಮಾಡಲು ಮೀಸಲಿಟ್ಟಿದ್ದ ಅಕ್ಕಿ ಮತ್ತು ಗೋಧಿಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಉದ್ಯಮಿ ಬಾಕಿಬುರ್ ರಹಮಾನ್ ಅವರನ್ನು ಇಡಿ ಬಂಧಿಸಿತ್ತು. ಬಾಕಿಬುರ್ ಆರೋಗ್ಯ ಸಚಿವ ಜ್ಯೋತಿಪ್ರಿಯೊ ಮುಲ್ಲಿಕ್ ಜೊತೆ ನಿಕಟ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಅಕ್ಟೋಬರ್ 27ರಂದು ರಾಜ್ಯ ಆಹಾರ ಸಚಿವ ಜ್ಯೋತಿಪ್ರಿಯೊ ಮುಲ್ಲಿಕ್ ಅವರನ್ನು ಇಡಿ ಬಂಧಿಸಿದೆ.

ಇದನ್ನೂ ಓದಿ : ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...