Homeಮುಖಪುಟಇಡಿಯಿಂದ ಸೋನಿಯಾಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಬಿದ್ದ ಡಿಕೆಶಿ, ಶಾಂತಿನಗರದಲ್ಲಿ ಕಾರ್‌ಗೆ...

ಇಡಿಯಿಂದ ಸೋನಿಯಾಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಬಿದ್ದ ಡಿಕೆಶಿ, ಶಾಂತಿನಗರದಲ್ಲಿ ಕಾರ್‌ಗೆ ಬೆಂಕಿ

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಮನಿಲಾಂಡರಿಂಗ್ ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರನ್ನು ವಿಚಾರಣೆ ನಡಸುತ್ತಿದ್ದಾರೆ. ಮಹಿಳಾ ಅಧಿಕಾರಿಯ ನೇತೃತದಲ್ಲಿ 5 ಜನ ಇಡಿ ಅಧಿಕಾರಿಗಳು ಸೋನಿಯಾರವರನ್ನು ಇದುವರೆಗೂ 3 ಗಂಟೆಗಳ ಕಾಲ ವಿಚಾರಣೆ ನಡೆಸಿವೆ. ಇಡಿಯನ್ನು ಬಳಸಿಕೊಂಡು ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಸಿದೆ.

ಸೋನಿಯಾ ಗಾಂಧಿಯವರ ವಿಚಾರಣೆ ಸಂದರ್ಭದಲ್ಲಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ಜೊತೆಗಿದ್ದಾರೆ ಎಂದು ವರದಿಯಾಗಿದೆ.

ಸಂಸತ್‌ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಪ್ರತಿಭಟನೆ ನಡೆಸಿದ ಸಂಸದರಾದ ಶಶಿತರೂರ್ ಮತ್ತು ರಾಜಸ್ಥಾನದ ಶಾಸಕ ಸಚಿನ್ ಪೈಲಟ್ ಸೇರಿದಂತೆ ಹಲವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಶಾಂತಿನಗರದ ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಿಂತಿದ್ದ ಕಾರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬ್ಯಾರಿಕೇಡ್ ಹಾಕಿದ್ದನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬ್ಯಾರಿಕೇಡ್ ಹತ್ತಿ ಅಲ್ಲಿ ನೆರೆದಿದ್ದ ಪೊಲೀಸರ ಮೇಲೆ ಧುಮುಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸ್ವಾಯುತ್ತ ಸಂಸ್ಥೆಗಳನ್ನು ಮೋದಿ ಸರ್ಕಾರ ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳ ಮೇಲೆ ವಿನಾಕಾರಣ ಮುಗಿಬಿದ್ದಿರುವುದನ್ನು ಇಡೀ ದೇಶವೇ ನೋಡುತ್ತಿದೆ. ಇದಕ್ಕೆ ಬಿಜೆಪಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಸಂಸದರ ಮತಗಳಲ್ಲಿ ದ್ರೌಪದಿ ಮುರ್ಮುಗೆ 540 ಮತ, ಸಿನ್ಹಾಗೆ 208

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...