Homeಮುಖಪುಟ'ಎಂಪುರಾನ್' ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

‘ಎಂಪುರಾನ್’ ಸಿನಿಮಾ ನಿರ್ಮಾಪಕನ ಮನೆ, ಕಚೇರಿ ಮೇಲೆ ಇಡಿ ದಾಳಿ

- Advertisement -
- Advertisement -

ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರ, ಚೆನ್ನೈನ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ (ಏ.4) ದಾಳಿ ನಡೆಸಿದೆ.

ಚೆನ್ನೈನ ಕೊಡಂಬಕ್ಕಂನಲ್ಲಿರುವ ಕಚೇರಿ ಮತ್ತು ನೀಲಂಕರೈನಲ್ಲಿರುವ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಕೊಚ್ಚಿ ವಿಭಾಗದ ಅಧಿಕಾರಿಗಳ ತಂಡ ಎರಡೂ ಕಡೆ ಶೋಧ ನಡೆಸುತ್ತಿದೆ ಎಂದು ವರದಿಗಳು ಹೇಳಿವೆ.

ಗೋಪಾಲನ್ ಅವರ ಕಚೇರಿ ಮೇಲೆ ದಾಳಿ ಮಾಡಿರುವ ಕುರಿತ ವಿವರಗಳನ್ನು ಇಡಿ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಶ್ರೀ ಗೋಕುಲಂ ಚಿಟ್ಸ್ ಅಂಡ್ ಫೈನಾನ್ಸ್ ಗೋಪಾಲನ್ ಅವರ ಮಾಲೀಕತ್ವದ ಪ್ರಮುಖ ಸಂಸ್ಥೆಯಾಗಿದ್ದು, ಹಾಸ್ಪಿಟಾಲಿಟಿ, ಮಾಧ್ಯಮ, ಆರೋಗ್ಯ, ಶಿಕ್ಷಣ, ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವಲಯಗಳಲ್ಲಿ ಪಾಲನ್ನು ಹೊಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಎಂಪುರಾನ್’ ಚಿತ್ರದಲ್ಲಿ ನಟ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದು, ಅವರೂ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು 2019 ರ ‘ಲೂಸಿಫರ್’ ಚಿತ್ರದ ಮುಂದುವರಿದ ಭಾಗವಾಗಿದೆ.

ಗೋಧ್ರಾ ಗಲಭೆಯ ಬಗ್ಗೆ ಉಲ್ಲೇಖಿಸಿದ್ದಕ್ಕೆ ಚಿತ್ರ ಬಿಜೆಪಿ, ಆರ್‌ಎಸ್‌ಎಸ್‌ ಸೇರಿದಂತೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದ ಬರಹಗಾರ ಮುರಳಿ ಗೋಪಿ ಮತ್ತು ನಿರ್ಮಾಪಕ ಆಂಥೋನಿ ಪೆರುಬ್ಮಾವೂರ್ (ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ) ಸೇರಿದಂತೆ ಇಡೀ ಚಿತ್ರತಂಡ ಟೀಕೆಗೆ ಗುರಿಯಾಗಿದೆ. ಅವರನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ವಿವಾದದ ನಂತರ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ನಟ ಮೋಹನ್ ಲಾಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ಚಿತ್ರದಲ್ಲಿರುವ ವಿವಾದಾತ್ಮಕ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದರು. ಅದರಂತೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ವರದಿಯಾಗಿದೆ.

“ಚಿತ್ರದಲ್ಲಿ ಯಾರಿಗಾದರೂ ನೋವುಂಟುಮಾಡುವ ದೃಶ್ಯಗಳು ಅಥವಾ ಸಂಭಾಷಣೆಗಳಿದ್ದರೆ ತೆಗೆದು ಹಾಕಲಾಗುವುದು ಎಂದು ಗೋಪಾಲನ್ ಕೂಡ ಹೇಳಿದ್ದರು.

“ಈ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ. ಚಿತ್ರದಲ್ಲಿನ ಯಾವುದೇ ಸಂಭಾಷಣೆ ಅಥವಾ ದೃಶ್ಯ ಯಾರನ್ನಾದರೂ ನೋಯಿಸಿದ್ದರೆ, ಅಗತ್ಯ ಬದಲಾವಣೆಗಳನ್ನು ಮಾಡಲು ನಾನು ಪೃಥ್ವಿರಾಜ್ ಸುಕುಮಾರನ್‌ ಅವರಿಗೆ ಹೇಳಿದ್ದೇನೆ. ಚಿತ್ರದ ಸಂಭಾಷಣೆಯ ಕೆಲವು ಪದಗಳನ್ನು ಈಗಾಗಲೇ ಮ್ಯೂಟ್ ಮಾಡಲಾಗಿದೆ. ಚಿತ್ರದಲ್ಲಿನ ಕೆಲವು ವಿಷಯಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ನಾವು ಯಾವುದೇ ರಾಜಕೀಯದ ಭಾಗವಲ್ಲ” ಎಂದು ಗೋಪಾಲನ್ ತಿಳಿಸಿದ್ದರು.

ಚಿತ್ರದಲ್ಲಿ 24 ವಿಷಯಗಳಿಗೆ ಕತ್ತರಿ

ವಿವಾದದ ನಂತರ ನಿರ್ಮಾಪಕರು ಚಿತ್ರದ 24 ವಿಷಯಗಳಿಗೆ ಸ್ವಯಂಪ್ರೇರಿತ ಕತ್ತರಿ ಹಾಕಿದ್ದಾರೆ. ಅವುಗಳ ಒಟ್ಟು ಅವಧಿ 2 ನಿಮಿಷ ಮತ್ತು 8 ಸೆಕೆಂಡುಗಳು ಎಂದು ವರದಿಗಳು ಹೇಳಿವೆ.

ಚಿತ್ರದಲ್ಲಿ ಬದಲಾವಣೆ ಮಾಡಿರುವ ವಿಷಯಗಳಿಗೆ ಉದಾಹರಣೆ ಕೊಡುವುದಾದರೆ, ಈ ಹಿಂದೆ ಚಿತ್ರದಲ್ಲಿ ಅಭಿಮನ್ಯು ಸಿಂಗ್ ನಿರ್ವಹಿಸಿದ ವಿಲನ್ ಪಾತ್ರದ ಹೆಸರು ಬಲರಾಜ್ ಪಟೇಲ್ ಎಂದಿತ್ತು. ಇದು ಗೋದ್ರಾ ಗಲಭೆಯ ಅಪರಾಧಿ ವಿಶ್ವ ಹಿಂದೂ ಪರಿಷತ್‌ನ ಬಾಬುಭಾಯಿ ಪಟೇಲ್ ಅಲಿಯಾಸ್ ಬಾಬು ಬಜರಂಗಿಯನ್ನು ಉಲ್ಲೇಖಿಸಿದ ಪಾತ್ರವಾಗಿತ್ತು. ಈಗ ಹೊಸ ಆವೃತ್ತಿಯಲ್ಲಿ ಬಲರಾಜ್ ಪಟೇಲ್ ಎಂಬ ಹೆಸರನ್ನು ಬರೀ ಬಲದೇವ್ ಎಂದು ಬದಲಾಯಿಸಲಾಗಿದೆ.

ನಿರ್ಮಾಪಕರ ಮೇಲೆ ಯಾರೂ ಒತ್ತಡ ಹಾಕಿಲ್ಲ : ಸುರೇಶ್ ಗೋಪಿ

ಎಂಪುರಾನ್ ನಿರ್ಮಾಪಕರಿಗೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡುವಂತೆ ಯಾರೂ ಒತ್ತಡ ಹಾಕಿಲ್ಲ ಎಂದು ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.

“ಚಿತ್ರದ ಆರಂಭದಲ್ಲಿ ಪ್ರದರ್ಶಿಸಲಾದ ಕ್ರೆಡಿಟ್‌ಗಳಿಂದ ನನ್ನ ಹೆಸರನ್ನು ಅಳಿಸಲು ನಿರ್ಮಾಪಕರಿಗೆ ಕರೆ ಮಾಡಿ ಮನವಿ ಮಾಡಿದ ಮೊದಲ ವ್ಯಕ್ತಿ ನಾನೇ. ಇದು ಸತ್ಯ” ಎಂದು ಗೋಪಿ ಹೇಳಿಕೊಂಡಿದ್ದಾರೆ.

ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಚಿತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಹೇಳಿದ ಸುರೇಶ್ ಗೋಪಿ “ನಾನು ಹೇಳಿದ್ದು ಸುಳ್ಳು ಎಂದು ಸಾಬೀತಾದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ಚಿತ್ರದ ನಿರ್ದೇಶಕರ ಅನುಮತಿಯೊಂದಿಗೆ 17 ವಿಷಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಮತ್ತು ಚಿತ್ರದ ನಾಯಕ ನಟ ನಿರ್ಧರಿಸಿದ್ದಾರೆ. ಅದು ಅವರ ನಿರ್ಧಾರ. ಆದರೂ, ಅವರು (ವಿಪಕ್ಷದವರು) ನನ್ನ ರಾಜಕೀಯ ಪಕ್ಷವನ್ನು ದೂಷಿಸುತ್ತಿದ್ದಾರೆ” ಎಂದು ಗೋಪಿ ಹೇಳಿದ್ದಾರೆ.

‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...